RR ನಗರ ಬೈ ಎಲೆಕ್ಷನ್: ಮುನಿರತ್ನಗೆ ಬಿಜೆಪಿ ಟಿಕೆಟ್ ಅನುಮಾನ, ಅಚ್ಚರಿ ಭವಿಷ್ಯ..!

Published : Sep 30, 2020, 04:14 PM ISTUpdated : Sep 30, 2020, 04:22 PM IST
RR ನಗರ ಬೈ ಎಲೆಕ್ಷನ್: ಮುನಿರತ್ನಗೆ ಬಿಜೆಪಿ ಟಿಕೆಟ್ ಅನುಮಾನ, ಅಚ್ಚರಿ ಭವಿಷ್ಯ..!

ಸಾರಾಂಶ

ಬೆಂಗಳೂರಿನ ಆರ್‌.ಆರ್.ನಗರ ವಿಧಾನಸಭಾ ಕ್ಷೇತ್ರ ಉಪಚುನಾವಣೆಗೆ ಬಿಜೆಪಿಯಿಂದ ಮುನಿರತ್ನಗೆ ಬಿಜೆಪಿ ಟಿಕೆಟ್ ಸಿಗುವುದು ಅನುಮಾನ ಎಂದು ಕಾಂಗ್ರೆಸ್‌ ನಾಯಕ ಅಚ್ಚರಿ ಭವಿಷ್ಯ ಹೇಳಿದ್ದಾರೆ.

ಬೆಂಗಳೂರು, (ಸೆ.30): ರಾಜರಾಜೇಶ್ವರಿ ನಗರ ಕ್ಷೇತ್ರದಿಂದ ಉಪಚುನಾವಣೆಗೆ ಬಿಜೆಪಿಯಿಂದ ಮುನಿರತ್ನಗೆ ಟಿಕೆಟ್ ಸಿಗುವುದು ಅನುಮಾನ ಎಂದು ಕಾಂಗ್ರೆಸ್ ಸಂಸದ ಡಿ.ಕೆ‌.ಸುರೇಶ್ ಭವಿಷ್ಯ ನುಡಿದಿದ್ದಾರೆ.

ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಮತದಾರರು ಬದಲಾವಣೆಯಾಗಿಲ್ಲ. ಮತದಾರರು ಎಲ್ಲಿಯೂ ಹೋಗಿಲ್ಲ. ಮತದಾರರು ಪಕ್ಷದ ಪರವಾಗಿಯೇ ಇದ್ದಾರೆ. ಅಲ್ಲಿ ಉಂಡು ಹೋದ ಕೊಂಡು‌ಹೋದ ಎನ್ನುವಂತಾಗಿದೆ. ಮುನಿರತ್ನ ನನ್ನ ವೈರಿಯಲ್ಲ. ಬಿಜೆಪಿ ನಮ್ಮ‌ ವೈರಿ. ಮುನಿರತ್ನಗೆ ಟಿಕೆಟ್ ಸಿಗುವುದು ಅನುಮಾನ‌. ಅಚ್ಚರಿಯನ್ನು ಕಾದು ನೋಡಿ ಏನಾಗುತ್ತದೆ ಎಂದು ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದರು.‌.

RR ನಗರ ಬೈ ಎಲೆಕ್ಷನ್: ಕಣದಲ್ಲಿ ಕಾಂಗ್ರೆಸ್​​ನಿಂದ ಅಚ್ಚರಿ ಅಭ್ಯರ್ಥಿ, ಸಂಚಲನ ಮೂಡಿಸಿದ ಡಿಕೆಶಿ

ಉಪಚುನಾವಣೆಗೆ ದಿನಾಂಕ‌ ಘೋಷಣೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಬಗ್ಗೆ ಪಕ್ಷದ ನಾಯಕರು ಸಭೆ ನಡೆಸಿ ಚರ್ಚಿಸಿ ಹೈಕಮಾಂಡ್‌ಗೆ ಅದನ್ನು ಕಳುಹಿಸುತ್ತಾರೆ‌. ಸಮರ್ಥವಾಗಿ ಕೆಲಸ ಮಾಡುವವರನ್ನು ಕಣಕ್ಕಿಳಿಸುತ್ತೇವೆ. ಜೆಡಿಎಸ್ ನವರು ನನ್ನ ಜೊತೆ ಚೆನ್ನಾಗಿದ್ದಾರೆ ಎಂದರು.

ಆರ್‌ಆರ್‌ ನಗರದಲ್ಲಿ ಮುನಿರತ್ನ ವಿರುದ್ಧ ಡಿ. ಕೆ. ರವಿ ಪತ್ನಿ ಸ್ಪರ್ಧೆ?

ಆರ್ ಆರ್ ನಗರದಿಂದ ಮಾಗಡಿ ಬಾಲಕೃಷ್ಣ ಅವರು ಸ್ಪರ್ಧಿಸುವ ವಿಚಾರವಾಗಿ ಪ್ರತಿಕ್ರಿಯಿಸಿದ ಸುರೇಶ್ ಅವರು, ಹಲವರ ಹೆಸರು ಚರ್ಚೆಯಾಗುತ್ತಿದೆ. ಸದ್ಯಕ್ಕೆ ಹೈಕಮಾಂಡ್ ಅಂತಿಮಗೊಳಿಸುವವರೆಗೆ ಇಂತಹವರೇ ಅಭ್ಯರ್ಥಿ ಎಂದು ಹೇಳುವುದಕ್ಕೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಮಗೆ ಭಿಕ್ಷುಕರಂತೆ ಭಿಕ್ಷೆ ಹಾಕ್ತಾರೆ; ₹10,000 ಕೋಟಿ ಅನುದಾನ ಕೊಡಿ, ಇಲ್ಲ ಪ್ರತ್ಯೇಕ ರಾಜ್ಯ ಮಾಡಿ-ರಾಜು ಕಾಗೆ
ಸಿದ್ದರಾಮಯ್ಯ ಹೆಲಿಕಾಪ್ಟರ್‌ ಪ್ರಯಾಣಕ್ಕೆ ರಾಜ್ಯದ ಬೊಕ್ಕಸದಿಂದ ಕೋಟ್ಯಂತರ ಖರ್ಚು!