
.ಬೆಂಗಳೂರು, (ಅ.07): ಈ ಬಾರಿಯ ಉಪಚುನಾವಣೆಯಲ್ಲಿ ಪ್ರತಿಷ್ಠೆಯ ಕಣವಾಗಿ ಬೆಂಗಳೂರಿನ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್, ದಿವಂಗತ ಡಿಕೆ ರವಿ ಅವರ ಪತ್ನಿ ಕುಸುಮಾ ಹನುಮಂತರಾಯಪ್ಪ ಅವರನ್ನ ಕಣಕ್ಕಿಳಿಸಿದೆ.
"
ಇದೀಗ ತಮಗೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟ ಕಾಂಗ್ರೆಸ್ ಪಕ್ಷಕ್ಕೆ ಕುಸುಮಾ ಹನುಮಂತರಾಯಪ್ಪ ಧನ್ಯವಾದ ತಿಳಿಸಿದ್ದಾರೆ.
ಈ ಕುರಿತು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಕುಸುಮಾ, ಕಾಂಗ್ರೆಸ್ ಪಕ್ಷಕ್ಕೆ ನನ್ನ ತಂದೆ ಶ್ರೀ ಹನುಮಂತರಾಯಪ್ಪ ನವರು ಮಾಡಿರುವ ಸೇವೆಯನ್ನು ಗುರುತಿಸಿ ನನಗೆ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ.ಕೆ ಶಿವಕುಮಾರ್, ವಿಧಾನಸಭೆಯ ಪ್ರತಿಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯ, ಸಂಸದರಾದ ಶ್ರೀ ಡಿ.ಕೆ ಸುರೇಶ್ ಹಾಗೂ ಪಕ್ಷದ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಎಲ್ಲಾ ನಾಯಕರುಗಳಿಗೂ ಆಭಾರಿಯಾಗಿದ್ದೇನೆ ಎಂದಿದ್ದಾರೆ.
ಗರಿಗೆದರಿದ ಚುನಾವಣಾ ಅಖಾಡ, ಆರ್‌ಆರ್ ನಗರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಫೈನಲ್!
ಅಲ್ಲದೇ ಕ್ಷೇತ್ರದ ಎಲ್ಲಾ ಮುಖಂಡರುಗಳ ಹಾಗೂ ಕಾರ್ಯಕರ್ತರನ್ನು ಗಣನೆಗೆ ತೆಗೆದುಕೊಂಡು ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷದ ವಿಜಯ ಪತಾಕೆ ಹಾರುವಂತೆ ಮಾಡುವ ಜವಾಬ್ದಾರಿ ನನ್ನದು ಎಂದು ಕುಸುಮಾ ಹನುಂತರಾಯಪ್ಪ ಪಣ ತೊಟ್ಟಿದ್ದಾರೆ.
ಇನ್ನೊಂದೆಡೆ ನನ್ನ ದೊಡ್ಡಪ್ಪನವರು ಕೊರೊನಾದಿಂದಾಗಿ ಮೃತಪಟ್ಟಿರುವ ಕಾರಣ ಈ ಕ್ಷಣದಲ್ಲಿ ಪತ್ರಕರ್ತಮಿತ್ರರಿಗೆ ಪ್ರತಿಕ್ರಿಸುವುದಕ್ಕಾಗಲೀ, ಕಾರ್ಯಕರ್ತರೊಂದಿಗೆ ಸಂಭ್ರಮಿಸಲಾಗಲೀ ಆಗುತ್ತಿಲ್ಲ. ಕ್ಷಮೆ ಇರಲಿ ಎಂದು ಕುಸುಮಾ ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ನನ್ನ ತಂದೆ ಶ್ರೀ ಹನುಮಂತರಾಯಪ್ಪ ನವರು ಮಾಡಿರುವ ಸೇವೆಯನ್ನು ಗುರುತಿಸಿ ನನಗೆ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ...
Posted by Kusuma Hanumantharayappa on Wednesday, October 7, 2020
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.