ಬೆಂಗಳೂರಿನ ರಾಜರಾಜೇಶ್ವರಿ ನಗರ ಉಪಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎನ್ನುವ ಆರೋಪಿಸಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ದೂರು ದಾಖಲಿಸಿದ್ದ ಇನ್ಸ್‌ಪೆಕ್ಟರ್‌ಗೆ ಬಿಗ್ ಶಾಕ್.
ಬೆಂಗಳೂರು, (ಅ.24): ರಾಜರಾಜೇಶ್ವರಿನಗರ ವಿಧಾನಸಭಾಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರ ವಿರುದ್ಧ ಎಫ್‍ಐಆರ್ ದಾಖಲಿಸಿದ್ದ ಇನ್ಸ್‍ಪೆಕ್ಟರ್ ನನ್ನು ಎತ್ತಂಗಡಿ ಮಾಡಲಾಗಿದೆ.
ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯ ಇನ್ಸ್‍ಪೆಕ್ಟರ್ ನವೀನ್ ಸುಪೇಕರ್ ವಿ ಅವರು ನಾಮಪತ್ರ ಸಲ್ಲಿಸುವ ದಿನ ಕಾಂಗ್ರೆಸ್ ನಾಯಕರು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಕೇಸು ದಾಖಲಿಸಿದ್ದರು.
undefined
RR ನಗರ ಬೈ ಎಲೆಕ್ಷನ್: ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿ ಕುಸುಮಾಗೆ ಬಿಗ್ ಶಾಕ್
ಎಫ್‍ಐಆರ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಮತ್ತು ಇತರರ ವಿರುದ್ಧ ಆರೋಪ ದಾಖಲಿಸಲಾಗಿತ್ತು. ಇದು ಭಾರೀ ವಿರೋಧಕ್ಕೆ ಕಾರಣವಾಗಿತ್ತು. ಅಧಿಕಾರಿಗಳು ಪಕ್ಷಪಾತ ಅನುಸರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿತ್ತು.ಅಲ್ಲದೇ ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.
ಕಾಂಗ್ರೆಸ್ ನೀಡಿದ್ದ ದೂರು ಆಧರಿಸಿ ಕ್ರಮ ಕೈಗೊಳ್ಳಲಾಗಿದ್ದು, ರಾಜ್ಯ ಪೊಲೀಸ್ ಮಹಾನಿರ್ದೇಶಕರ ಸೂಚನೆ ಮೇರೆ ಇನ್ಸ್‍ಪೆಕ್ಟರ್ ನವೀನ್ ಸುಪೇಕರ್ ಅವರನ್ನು ರಾಜ್ಯ ಗುಪ್ತವಾರ್ತೆಗೆ ವರ್ಗಾವಣೆ ಮಾಡಲಾಗಿದೆ.
ಮಲ್ಲೇಶ್ವರಂನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಅನಿಲ್ ಆರ್.ಪಿ. ಅವರನ್ನು ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಗೆ ನೇಮಿಸಲಾಗಿದೆ.