
ಬೆಂಗಳೂರು, (ಅ.18): ಆರ್.ಆರ್.ನಗರ ಹಾಗು ತುಮಕೂರಿನ ಶಿರಾ ಬೈ ಎಲೆಕ್ಷನ್ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇದರ ಮಧ್ಯೆ ಪಕ್ಷಾಂತರ ಪರ್ವ ಸಹ ಭರ್ಜರಿಯಾಗಿ ಸಾಗಿದೆ.
ಮೊನ್ನೆ ಅಷ್ಟೇ ರಾಜರಾಜೇಶ್ವರಿ ನಗರದ ಜೆಡಿಎಸ್-ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಇದೀಗ ಕಾಂಗ್ರೆಸ್ ಮುಖಂಡರು ಬಿಜೆಪಿಗೆ ಜೈ ಎಂದಿದ್ದಾರೆ.
ಜಾಲಹಳ್ಳಿ ವಾರ್ಡ್‌ನ ಕಾಂಗ್ರೆಸ್ ಸದಸ್ಯರಾದ ಜಾನಿ, ಯಶವಂತಪುರ ವಾರ್ಡ್‌ನ ಜಿ.ಕೆ. ವೇಂಕೇಶ್, ಎಚ್.ಎಂ.ಟಿ. ವಾರ್ಡ್‌ನ ಆಶಾ ಸುರೇಶ್, ಲಕ್ಷ್ಮೀದೇವಿನಗರ ವಾರ್ಡ್‌ನ ಕಾಂಗ್ರೆಸ್ ಪಾಲಿಕೆ ಸದಸ್ಯ ವೇಲು ನಾಯ್ಕರ್, ಕೊಟ್ಟಿಗೆಪಾಳ್ಯದ ಕಾಂಗ್ರೆಸ್ ಸದಸ್ಯರಾದ ಮೋಹನ್ ಕುಮಾರ್ ಇಂದು (ಭಾನುವಾರ) ಬಿಜೆಪಿ ಸೇರಿದರು.
RR ನಗರ ಬೈ ಎಲೆಎಕ್ಷನ್: ರಹಸ್ಯವಾಗಿ ಅಪರೇಷನ್ ಹಸ್ತ ಪ್ರಯೋಗಿಸಿ ಎಚ್‌ಡಿಕೆಗೆ ಶಾಕ್ ಕೊಟ್ಟ ಡಿಕೆಶಿ
ಇಂದು (ಭಾನುವಾರ) ಮಲ್ಲೇಶ್ವರಂನ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ, ಕಂದಾಯ ಸಚಿವ ಆರ್.ಅಶೋಕ್, ರಾಜ್ಯ ಉಪಾಧ್ಯಕ್ಷ ಅರವಿಂದ ಲಿಂಬಾವಳಿ ಸಮ್ಮುಖದಲ್ಲಿ ಕಾಂಗ್ರೆಸ್ ನಾಯಕರು ಬಿಜೆಪಿ ಸೇರ್ಪಡೆಯಾದರು. ಇದರಿಂದ ಆರ್.ಆರ್.ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರಿಗೆ ಮತ್ತಷ್ಟು ಬಲ ಬಂದಂತಾಗಿದೆ.
ತುಮಕೂರು ಜಿಲ್ಲೆಯ ಶಿರಾ ಮತ್ತು ಬೆಂಗಳೂರಿನ ಆರ್.ಆರ್.ನಗರ ಕ್ಷೇತ್ರಗಳಿಗೆ ನ.03ರಂದು ಮತದಾನ ನಡೆಯಲಿದ್ದು, ನ.10ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಸಲು ಅ.16 ಕೊನೆಯ ದಿನವಾಗಿದೆ....
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.