ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಯಲ್ಲಿ ಆರ್‌ಎಸ್ಎಸ್ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಅರುಣ್ ಕುಮಾರ್ ಹೇಳಿದ್ದಾರೆ. ಬಿಜೆಪಿ ಸ್ವತಂತ್ರ ಪಕ್ಷವಾಗಿದ್ದು, ಅಧ್ಯಕ್ಷರ ಆಯ್ಕೆ ಅವರ ಆಂತರಿಕ ವಿಚಾರ ಎಂದಿದ್ದಾರೆ. ಗಡಿ-ಭಾಷೆ ಸಮಸ್ಯೆಗಳ ಬಗ್ಗೆಯೂ ಅವರು ಮಾತನಾಡಿದ್ದಾರೆ.
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್ ಎಸ್) ಹಸ್ತಕ್ಷೇಪ ಮಾಡುವುದಿಲ್ಲ ಎಂದು ಆರ್ ಎಸ್‌ಎಸ್‌ನ ಸಹ ಸರಕಾರ್ಯವಾಹ ಅರುಣ್ ಕುಮಾರ್ ತಿಳಿಸಿದ್ದಾರೆ. ಮಾಗಡಿ ಚನ್ನೇನಹಳ್ಳಿಯ ವಿದ್ಯಾಕೇಂದ್ರದ ರಸ್ತೆಯ ಜನಸೇವಾ ಆವರಣದಲ್ಲಿ ಶನಿವಾರನಡೆದಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿ, ಆರ್ ಎಸ್ಎಸ್ ರಾಷ್ಟ್ರದ ಹಿತಕ್ಕಾಗಿ ಕೆಲಸ ಮಾಡುತ್ತಿದೆ. ಬಿಜೆಪಿ ಸ್ವತಂತ್ರ ಪಕ್ಷವಾಗಿದ್ದು, ಅಧ್ಯಕ್ಷರ ಆಯ್ಕೆ ವಿಚಾರ ಆ ಪಕ್ಷದ ಆಂತರಿಕ ವಿಚಾರವಾಗಿದೆ. ಪಕ್ಷದಲ್ಲಿ ಎಲ್ಲದ್ದಕ್ಕೂ ಒಂದು ವ್ಯವಸ್ಥಿತ ಪ್ರಕ್ರಿಯೆ ಇರುತ್ತದೆ ಎಂದು ಹೇಳಿದರು.
ಆ ಪ್ರಕಾರ ಸೂಕ್ತ ಸಮಯದಲ್ಲಿ ಪಕ್ಷ ನಿರ್ಣಯ ಕೈಗೊಳ್ಳಲಿದೆ. ಪಕ್ಷವು ಸಂಘದ ಸಲಹೆ ಕೇಳಿದರೆ, ಸಲಹೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈ ಸಂಬಂಧ ಕೇಂದ್ರದಿಂದ ನಿರ್ದಿಷ್ಟ ಅಧಿಸೂಚನೆ ಅಥವಾ ಮಾರ್ಗಸೂಚಿ ಹೊರಬಿದ್ದಿಲ್ಲ. ಆದರೂ ಚರ್ಚೆಗಳು ನಡೆಯುತ್ತಿವೆ. ಇದೊಂದು ರಾಜಕೀಯ ಅಜೆಂಡಾದಂತೆ ಕಾಣುತ್ತಿದೆ. ಈ ವಿಚಾರದಲ್ಲಿ ಪ್ರತಿಕ್ರಿಯಿಸುವ ಎಂದರು.
ಸಂಘವು ಅಗತ್ಯವಿಲ್ಲ ರಾಜ್ಯಗಳ ಗಡಿ ಪ್ರದೇಶದ ಭಾಷಾ ಸಮಸ್ಯೆಗಳ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಇಲ್ಲಿ ದೇಶ ಮೊದಲು. ಸಂವಿಧಾನದ ಪೀಠಿಕೆಯಲ್ಲಿ ಸಹ ನಾವು ಭಾರತೀಯರು ಎಂದಿದೆ. ಹೀಗಾಗಿ ದೇಶದಲ್ಲಿರುವ ನಾವೆಲ್ಲ ಒಂದು ಎಂಬ ಭಾವನೆ ಇರಬೇಕು. ಭಾರತವು ವಿವಿಧ ಧರ್ಮ, ಭಾಷೆ, ಮತ, ಪಂಥ, ಸಂಸ್ಕೃತಿ ಸೇರಿ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ವಿವಿಧತೆಯಲ್ಲಿ ಏಕತೆ ಇರುವ ದೇಶ ಭಾರತ. ಇದನ್ನು ಅರ್ಥ ಮಾಡಿಕೊಂಡರೆ, ಗಡಿ-ಭಾಷೆ ಸಮಸ್ಯೆಗಳು ಇರುವುದಿಲ್ಲ ಎಂದು ಹೇಳಿದರು.
ಇದನ್ನೂ ಓದಿ: Karnataka Assembly: RSS ನಿಂದ ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳ, ಸಿಎಂ ಹೇಳಿಕೆಗೆ ವಿಧಾನಸಭೆ ರಣರಂಗ! ನಡೆದಿದ್ದೇನು?