ನಿರ್ಬಂಧ ಆರೆಸ್ಸೆಸ್‌ಗೆ ಮಾತ್ರವಲ್ಲ, ಎಲ್ಲ ಸಂಘಟನೆಗಳಿಗೂ ಅನ್ವಯ: ಸಚಿವ ಎಂ.ಸಿ.ಸುಧಾಕರ್

Published : Oct 19, 2025, 06:18 AM IST
Dr MC Sudhakar

ಸಾರಾಂಶ

ಸ್ವೇಚ್ಛಾಚಾರದ ನಡುವಳಿಕೆಗಳಿಗೆ ಕಡಿವಾಣ ಹಾಗೂ ಎಲ್ಲರಲ್ಲೂ ಶಿಸ್ತಿರಲಿ ಎಂಬ ಉದ್ದೇಶದಿಂದ ನಿರ್ಬಂಧದ ಆದೇಶ ಮಾಡಲಾಗಿದೆ. ಇದು ಆರ್‌ಎಸ್ಎಸ್‌ಗೆ ಮಾತ್ರವಲ್ಲ ಎಲ್ಲ ಸಂಘಟನೆಗಳಿಗೆ ಅನ್ವಯಿಸುತ್ತದೆ.

ಉಡುಪಿ (ಅ.19): ಸ್ವೇಚ್ಛಾಚಾರದ ನಡುವಳಿಕೆಗಳಿಗೆ ಕಡಿವಾಣ ಹಾಗೂ ಎಲ್ಲರಲ್ಲೂ ಶಿಸ್ತಿರಲಿ ಎಂಬ ಉದ್ದೇಶದಿಂದ ನಿರ್ಬಂಧದ ಆದೇಶ ಮಾಡಲಾಗಿದೆ. ಇದು ಆರ್‌ಎಸ್ಎಸ್‌ಗೆ ಮಾತ್ರವಲ್ಲ ಎಲ್ಲ ಸಂಘಟನೆಗಳಿಗೆ ಅನ್ವಯಿಸುತ್ತದೆ. ಪರವಾನಗಿ ತೆಗೆದುಕೊಂಡು ಯಾವುದೇ ಕಾರ್ಯಚಟುವಟಿಕೆ ಮಾಡಲು ಸಮಸ್ಯೆಗಳಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ। ಎಂ.ಸಿ.ಸುಧಾಕರ್ ಅವರು ರಾಜ್ಯ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಸಾರ್ವಜನಿಕ ಸ್ಥಳದಲ್ಲಿ ಎಲ್ಲ ಜಾತಿ ಧರ್ಮದ ಜನರು ಇರುತ್ತಾರೆ. ಕೆಲವು ಚಟುವಟಿಕೆಗಳಿಗೆ ಜನರಿಂದ ವಿರೋಧ ಬರುವ ಸಾಧ್ಯತೆ ಇರುತ್ತದೆ. ಆದ್ದರಿಂದ ಯಾವುದೇ ಕಾರ್ಯಕ್ರಮ ಮಾಡಲು ಅನುಮತಿ ತೆಗೆದುಕೊಳ್ಳಬೇಕು ಎಂದು ಸರ್ಕಾರ ಆದೇಶಿಸಿದೆ. ನಮ್ಮ ರಾಜ್ಯದಲ್ಲಿ ಮಾತ್ರವಲ್ಲ ದೇಶದ ಬೇರೆಬೇರೆ ರಾಜ್ಯಗಳಲ್ಲಿ ಆರ್‌ಎಸ್ಎಸ್ ಮೇಲೆ ಇಂತಹ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಕೇಂದ್ರಕ್ಕೂ ವಿರೋಧಿಸ್ತೀರಾ?: ರಾಜ್ಯ ಸರ್ಕಾರದ ಸಮೀಕ್ಷೆಯ ವಿರುದ್ಧ ಮಾತನಾಡಿರುವ ಇನ್ಫೋಸಿಸ್ ಸಂಸ್ಥೆಯ ಸುಧಾ ಮೂರ್ತಿ ಮತ್ತು ನಾರಾಯಣ ಮೂರ್ತಿ ಅವರು ಯೋಚಿಸಿ ಹೇಳಿಕೆ ನೀಡಬೇಕಾಗಿತ್ತು. ಇದು ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆ. ಆದ್ದರಿಂದ ಎಲ್ಲರೂ ತಮ್ಮ ಜಾತಿ ಧರ್ಮದ ಹೆಸರು ಹೇಳಬೇಕಾಗುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದನ್ನು ಮಾಡುತ್ತಿದೆ ಎಂದು ನಿಮ್ಮ ವಿರೋಧವೇ? ಮುಂದಿನ ವರ್ಷ ಕೇಂದ್ರ ಸರ್ಕಾರ ನೇರವಾಗಿ ಜಾತಿ ಗಣತಿ ಮಾಡುತ್ತಿದೆ. ಆಗಲೂ ವಿರೋಧ ವ್ಯಕ್ತಪಡಿಸುತ್ತೀರಾ? ಎಂದು ಡಾ.ಸುಧಾಕರ್ ಪ್ರಶ್ನಿಸಿದ್ದಾರೆ.

ಶಿಕ್ಷಕರು ಗುಣಾತ್ಮಕ ಶಿಕ್ಷಣಕ್ಕೆ ಆದ್ಯತೆ ನೀಡಲಿ

ವಿವಿಧ ವೃತ್ತಿಗಳಲ್ಲಿ ಕೆಲಸ ನಿರ್ವಹಿಸುವುದರ ಮೂಲಕ ದೇಶದ ಉಪರಾಷ್ಟ್ರಪತಿ ಮತ್ತು ರಾಷ್ಟ್ರಪತಿ ಹುದ್ದೆಗಳನ್ನು ಅಲಂಕರಿಸಿದ ಸಾಮಾನ್ಯ ಶಿಕ್ಷಕ ಸರ್ವಪಲ್ಲಿ ರಾಧಾಕೃಷ್ಣನ್‌ರ ಹೆಸರಿನಲ್ಲಿ ಶಿಕ್ಷಕರ ದಿನ ಆಚರಣೆ ಮಾಡುತ್ತಿರುವುದು ಹೆಮ್ಮೆಯ ವಿಚಾರವಾಗಿದೆ ಎಂದು ನುಡಿದರು. ಸರ್ವಪಲ್ಲಿ ರಾಧಾಕೃಷ್ಣನ್ ಒಬ್ಬ ಸಾಮಾನ್ಯ ಶಿಕ್ಷಣ ವೃತ್ತಿಯಿಂದ ರಾಷ್ಟ್ರಪತಿ ಹುದ್ದೆ ಅಲಂಕರಿಸಿದ ಮಹಾನ್ ವ್ಯಕ್ತಿಯಾಗಿದ್ದು, ಸಾಮಾನ್ಯ ಶಿಕ್ಷಕ ಸಹ ತಮ್ಮ ಕರ್ತವ್ಯ ನಿಷ್ಠೆ, ಪ್ರಾಮಾಣಿಕತೆ, ದಕ್ಷತೆಯ ಮೂಲಕ ರಾಷ್ಟ್ರಪತಿ ಹುದ್ದೆಗೇರಬಹುದೆಂಬುದಕ್ಕೆ ಸಾಕ್ಷಿಯಾಗಿದ್ದಾರೆ, ಎಲ್ಲರೂ ಸರ್ವಪಲ್ಲಿ ರಾಧಾಕೃಷ್ಣನ್‌ರ ಆಶಯಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಶಿಕ್ಷಕರಿಗೆ ಕಿವಿಮಾತು ಹೇಳಿದರು. ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಹಲವು ಬದಲಾವಣೆಗಳನ್ನು ತರುವ ಮೂಲಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದ್ದು, ಭವ್ಯ ಭಾರತ ನಿರ್ಮಾಣಕ್ಕೆ ನಾವು ಬದ್ಧರಾಗಿ ದುಡಿಯಬೇಕು.

ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೂ ಗುಣಮಟ್ಟದ ಶಿಕ್ಷಣಕ್ಕೆ ಸರ್ಕಾರ ಆದ್ಯತೆ ನೀಡುತ್ತಿದೆಯಾದರೂ, ಸರ್ಕಾರದಿಂದ ಎಲ್ಲಾ ಸೌಲಭ್ಯಗಳನ್ನು ಪಡೆದು ಗುಣಾತ್ಮಕ ಶಿಕ್ಷಣವನ್ನು ಬೋಧನೆ ಮಾಡುವಲ್ಲಿ ಶಿಕ್ಷಕರು ವಿಫಲಗೊಳ್ಳುತ್ತಿರುವುದು ತರವಲ್ಲವೆಂದರು. 5ನೇ ತರಗತಿವರೆಗೆ ಪಾಠ ಮಾಡುವ ಶಿಕ್ಷಕರ ನೇಮಕಾತಿ ವಿಚಾರದಲ್ಲಿ ಹಲವು ತೊಂದರೆಗಳಿದ್ದವು. ಅವುಗಳನ್ನು ವೃಂದ ಮತ್ತು ನೇಮಕಾತಿ ಸಂದರ್ಭದಲ್ಲಿ ಬದಲಾವಣೆ ತರುವ ಮೂಲಕ ಶಿಕ್ಷಕರಿಗೆ ಒಂದು ಅವಕಾಶವನ್ನು ರಾಜ್ಯ ಸರ್ಕಾರ ಮಾಡಿಕೊಟ್ಟಿದೆ. ಇದನ್ನು ಶಿಕ್ಷಕರ ದಿನಾಚರಣೆಗೂ ಮೊದಲೇ ಇದಕ್ಕೆ ಸಂಬಂಧಿಸಿದ ವಿಚಾರಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಜೊತೆ ಚರ್ಚಿಸಿ ಅದಕ್ಕೆ ಅನುಮೋದನೆಯನ್ನು ದೊರಕಿಸಿಕೊಡುವಲ್ಲಿ ಶಿಕ್ಷಣ ಸಚಿವ ಮಧುಬಂಗಾರಪ್ಪ ಶ್ರಮಿಸಿದ್ದಾರೆಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!