
ಬೆಂಗಳೂರು, (ಜ.08): ಡಿಸೆಂಬರ್ 15ರಂದು ವಿಧಾನ ಪರಿಷತ್ ಕಲಾಪದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು ರಚನೆಯಾಗಿದ್ದ ಸದನ ಸಮಿತಿಯ ಸದಸ್ಯ ಸ್ಥಾನಕ್ಕೆ ಬಿಜೆಪಿಯ ಎಚ್.ವಿಶ್ವನಾಥ್ ಮತ್ತು ಎಸ್.ವಿ ಸಂಕನೂರು ರಾಜೀನಾಮೆ ಸಲ್ಲಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಎಚ್.ವಿಶ್ವನಾಥ್, ಪರಿಷತ್ನಲ್ಲಿ ನಡೆದ ಗಲಾಟೆಯನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಉನ್ನತ ಮಟ್ಟದ ತನಿಖೆ ಆಗಬೇಕು. ಆ ಗದ್ದಲ ಸಂದರ್ಭದಲ್ಲಿ ನಾವು ಅಲ್ಲಿ ಇದ್ದೆವು. ಹಾಗಾಗಿ ನಾನು ಇದನ್ನು ಧಿಕ್ಕರಿಸಿ ರಾಜೀನಾಮೆ ನೀಡಿ ಹೊರ ಬಂದಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಪರಿಷತ್ ಗದ್ದಲ ಪ್ರಕರಣ: ತನಿಖಾ ಸಮಿತಿಗೆ ಬಿಜೆಪಿ ಸದಸ್ಯರ ರಾಜೀನಾಮೆ
ಇದು ನಾವೆಲ್ಲಾ ತಲೆ ತಗ್ಗಿಸುವ ವಿಚಾರ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಕೂಡಾ ಇದರ ಬಗ್ಗೆ ತನಿಖೆ ಆಗಬೇಕು ಎಂದಿದ್ದಾರೆ. ಸರ್ಕಾರ ಇದರ ಬಗ್ಗೆ ಗಮನಹರಿಸಿ ಕ್ರಮ ಕೈಗೊಳ್ಳಬೇಕು ಎಂದು ಹೆಚ್. ವಿಶ್ವನಾಥ್ ಒತ್ತಾಯಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.