ಜು.19ಕ್ಕೆ ಸಿದ್ದರಾಮಯ್ಯ ತವರಿನಲ್ಲಿ ಸಾಧನಾ ಸಮಾವೇಶ: ಸಚಿವ ಮಹದೇವಪ್ಪ

Kannadaprabha News   | Kannada Prabha
Published : Jul 13, 2025, 01:39 AM IST
Karnataka politics live news HC Mahadevappa press conference

ಸಾರಾಂಶ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಎರಡು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಜು.19 ರಂದು ಸಿದ್ದು ತವರು, ಮೈಸೂರಲ್ಲಿ ಸರ್ಕಾರದ ಸಾಧನೆಗಳ ಸಮಾವೇಶ ನಡೆಸಲಾಗುತ್ತಿದೆ ಎಂದು ಸಚಿವ ಮಹದೇವಪ್ಪ ತಿಳಿಸಿದ್ದಾರೆ.

ಮೈಸೂರು (ಜು.13): ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಎರಡು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಜು.19 ರಂದು ಸಿದ್ದು ತವರು, ಮೈಸೂರಲ್ಲಿ ಸರ್ಕಾರದ ಸಾಧನೆಗಳ ಸಮಾವೇಶ ನಡೆಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ। ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜು.19 ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸರ್ಕಾರದ ಸಾಧನೆಗಳ ಸಮಾವೇಶ ಆಯೋಜಿಸಲಾಗಿದೆ. ಅಂದು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಯ ಬೃಹತ್ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.

ಇದಕ್ಕೂ ಮೊದಲು, ಸಾಧನಾ ಸಮಾವೇಶದ ಹಿನ್ನೆಲೆಯಲ್ಲಿ ಶನಿವಾರ ಇಲ್ಲಿನ ಸರ್ಕಾರಿ ಅತಿಥಿಗೃಹದಲ್ಲಿ ಅವರು ಪೂರ್ವಭಾವಿ ಸಭೆ ನಡೆಸಿದರು. ಈ ಸಂಬಂಧ ಅವರು ಮೈಸೂರು ಹಾಗೂ ಚಾಮರಾಜನಗರ ಭಾಗದ ಶಾಸಕರು, ಮಾಜಿ ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು, ಜನಪ್ರತಿನಿಧಿಗಳು, ಅಧಿಕಾರಿ ವರ್ಗದವರು ಹಾಗೂ ಮುಖಂಡರೊಡನೆ ಚರ್ಚಿಸಿ, ಅಭಿಪ್ರಾಯ ಸಂಗ್ರಹಿಸಿದರು. ಕಾರ್ಯಕ್ರಮವನ್ನು ಬಹಳ ಅಚ್ಚುಕಟ್ಟಾಗಿ ಆಯೋಜಿಸಬೇಕು. ಸುಸಜ್ಜಿತ ವೇದಿಕೆ ನಿರ್ಮಾಣ, ಆಸನದ ವ್ಯವಸ್ಥೆಯನ್ನು ಬಹಳ ವ್ಯವಸ್ಥಿತವಾಗಿ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ವೇದಿಕೆಯಲ್ಲಿ ಅತಿಥಿಗಳಿಗೆ ಶಿಷ್ಟಾಚಾರದಂತೆ ಆಸನ ವ್ಯವಸ್ಥೆ ಮಾಡುವುದು, ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಅಗತ್ಯ ಆಸನದ ವ್ಯವಸ್ಥೆ, ಆಗಮನ ಹಾಗೂ ನಿರ್ಗಮನಕ್ಕೆ ಪ್ರತ್ಯೇಕ ಗೇಟ್‌ ಗಳ ನಿರ್ಮಾಣ ಮಾಡಿಕೊಳ್ಳುವುದು ಹಾಗೂ ಅಗತ್ಯ ಮೂಲಭೂತ ಸೌಕರ್ಯಗಳ ಸಿದ್ಧತೆ ಮಾಡುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು. ಸಾವಿರಾರು ಸಂಖ್ಯೆಯಲ್ಲಿ ಬರುವ ಸಾರ್ವಜನಿಕರಿಗೆ ಕಾರ್ಯಕ್ರಮದಲ್ಲಿ ಯಾವುದೇ ಕಿರಿಕಿರಿ ಉಂಟಾಗಬಾರದು. ಇದು ಸರ್ಕಾರದ ಬೃಹತ್ ಸಮಾರಂಭವಾಗಿದ್ದು, ಪಾಲ್ಗೊಳ್ಳುವ ಎಲ್ಲರಿಗೂ ಕುಡಿಯುವ ನೀರು, ಶೌಚಾಲಯ, ಊಟ ಮತ್ತು ಸಾರಿಗೆ ವ್ಯವಸ್ಥೆಯನ್ನು ಸಮರ್ಪಕವಾಗಿ ಕೈಗೊಂಡು, ಯಾವುದಕ್ಕೂ ಕೊರತೆ ಉಂಟಾಗದಂತೆ ಸಮಾರಂಭ ನಡೆಸಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮಕ್ಕೆ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಭಾಗವಹಿಸಲಿದ್ದಾರೆ. ಹೀಗಾಗಿ, ಮೈಸೂರು, ಚಾಮರಾಜನಗರ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರೆಲ್ಲರೂ ಆಗಮಿಸಿ ಸಮಾರಂಭವನ್ನು ಯಶಸ್ವಿಗೊಳಿಸಬೇಕು ಎಂದು ಸೂಚನೆ ನೀಡಿದರು. ಇದಕ್ಕೆ ಸಭೆಯಲ್ಲಿದ್ದವರೆಲ್ಲರೂ ಸಹಮತ ವ್ಯಕ್ತಪಡಿಸಿದರು.

ಶಾಸಕರಾದ ತನ್ವೀರ್ ಸೇಠ್, ಸಿ.ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, ಕೆ.ಹರೀಶ್ ಗೌಡ, ಅನಿಲ್ ಚಿಕ್ಕಮಾದು, ಡಾ.ಡಿ.ತಿಮ್ಮಯ್ಯ, ಮಾಜಿ ಶಾಸಕರಾದ ಎಚ್.ಪಿ.ಮಂಜುನಾಥ್, ಎಂ.ಕೆ.ಸೋಮಶೇಖರ್, ಆರ್. ನರೇಂದ್ರ, ಸುನೀತಾ ವೀರಪ್ಪಗೌಡ, ಕಳಲೆ ಕೇಶವಮೂರ್ತಿ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಪಂ ಸಿಇಒ ಎಸ್. ಯುಕೇಶ್ ಕುಮಾರ್, ನಗರ ಪಾಲಿಕೆ ಆಯುಕ್ತ ಶೇಕ್ ತನ್ವೀರ್ ಆಷೀಫ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯ್ ಕುಮಾರ್, ನಗರಾಧ್ಯಕ್ಷ ಆರ್. ಮೂರ್ತಿ, ಮುಡಾ ಮಾಜಿ ಅಧ್ಯಕ್ಷ ಕೆ. ಮರೀಗೌಡ ಮೊದಲಾದವರು ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್
Karnataka News Live: ಕೊಳಕು ಪ್ಯಾಂಟ್‌ ಬಗ್ಗೆ ಮಾತನಾಡಿದ್ರು, ಮೊಮ್ಮಗನ ಸಿನಿಮಾಕ್ಕೆ ಸಮಸ್ಯೆ ತಂದ್ರು - Jaya Bachchan ಬಾಯ್ಕಾಟ್‌ ಆಗ್ತಾರಾ?