ಕಾಂಗ್ರೆಸ್‌ ಸರ್ಕಾರದಿಂದ ಮಹಿಳೆಯರ ಸುರಕ್ಷತೆಗೆ ಆದ್ಯತೆ: ಸಚಿವ ಪರಮೇಶ್ವರ್‌

By Kannadaprabha News  |  First Published Mar 7, 2024, 12:04 PM IST

ನಮ್ಮ ಸರ್ಕಾರವು ಮಹಿಳಾ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಈ ಹಿಂದೆ ಪೊಲೀಸ್ ಸಹಾಯವಾಣಿ ಮೂಲಕ ಬಂದ ದೂರುಗಳನ್ನು ಆಧರಿಸಿ, ಹೊಯ್ಸಳ ಸಿಬ್ಬಂದಿ ಸ್ಥಳಕ್ಕೆ ಹೋಗಲು 20 ನಿಮಿಷ ತೆಗೆದುಕೊಳ್ಳುತ್ತಿದ್ದರು. 


ಬೆಂಗಳೂರು (ಮಾ.07): ನಮ್ಮ ಸರ್ಕಾರವು ಮಹಿಳಾ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಈ ಹಿಂದೆ ಪೊಲೀಸ್ ಸಹಾಯವಾಣಿ ಮೂಲಕ ಬಂದ ದೂರುಗಳನ್ನು ಆಧರಿಸಿ, ಹೊಯ್ಸಳ ಸಿಬ್ಬಂದಿ ಸ್ಥಳಕ್ಕೆ ಹೋಗಲು 20 ನಿಮಿಷ ತೆಗೆದುಕೊಳ್ಳುತ್ತಿದ್ದರು. ಪ್ರಸ್ತುತ 7 ನಿಮಿಷದೊಳಗೆ ಸ್ಥಳದಲ್ಲಿ ಹಾಜರಿರುತ್ತಾರೆ. ಬೆಂಗಳೂರು ನಗರದಲ್ಲಿ 7,500 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪೊಲೀಸರು ನಿರಂತರ ಕಣ್ಗಾವಲು ಇಟ್ಟಿರುತ್ತಾರೆ ಎಂದು ಗೃಹ ಸಚಿವ ಡಾ। ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಬೆಂಗಳೂರು ನಗರ ಪೊಲೀಸ್‌ ಹಾಗೂ ಪರಿಹಾರ ಸಂಸ್ಥೆಯ ಸಹಯೋಗದಲ್ಲಿ ಬುಧವಾರ ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ನಡೆದ ‘ಮಹಿಳೆಯರ ಮೇಲಿನ ದೌರ್ಜನ್ಯ’ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಹೊಸದಾಗಿ ಆರು ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗುತ್ತಿದೆ. ಈಗಿರುವ ಪೊಲೀಸ್ ಸಿಬ್ಬಂದಿಗಳಲ್ಲಿ ಶೇ.8ರಷ್ಟು ಮಹಿಳೆಯರಿದ್ದಾರೆ. ಶೇ.25ರಷ್ಟಾಗಬೇಕು ಎಂಬುದು ಗುರಿ ಹೊಂದಲಾಗಿದೆ. ಮಹಿಳಾ‌ ಪೊಲೀಸ್ ಠಾಣೆಗಳಲ್ಲಿ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಯನ್ನು ನೇಮಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

Tap to resize

Latest Videos

ಬಿಎಸ್‌ವೈ, ಶೆಟ್ಟರ್, ಬೊಮ್ಮಾಯಿ ಕಾಲದಲ್ಲಿ ಬಾಂಬ್‌ ಸ್ಫೋಟಗಳಾಗಿರಲಿಲ್ಲವೆ?: ಸಚಿವ ಸಂತೋಷ್‌ ಲಾಡ್‌

ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ನಮ್ಮ ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಗ್ರಾಮೀಣ ಭಾಗದ ಮಹಿಳೆಯರ ಆರ್ಥಿಕ ಶಕ್ತಿ ಹೆಚ್ಚಿಸಬೇಕು ಎಂಬುದು ನಮ್ಮ ಸರ್ಕಾರದ ಉದ್ದೇಶ. ಮಹಿಳೆಯರ ಬಗ್ಗೆ ಅವಹೇಳನ ಮಾಡುವುದು, ಅವಾಚ್ಯ ಮಾತುಗಳನ್ನು ಹಾಗೂ ತಿರುಚಿದ ವೀಡಿಯೋಗಳನ್ನು ಪ್ರಕಟಿಸುವರ ವಿರುದ್ಧ ಕಾನೂನು ರಿತ್ಯ ಕ್ರಮ ಜರುಗಿಸಲಾಗುವುದು ಎಂದರು. ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ನಿಮ್ಹಾನ್ಸ್‌ ಸಂಸ್ಥೆಯ ಮನೋವೈದ್ಯಶಾಸ್ತ್ರ ಪ್ರಾಧ್ಯಾಪಕಿ ಡಾ.ಪ್ರಭಾ ಎಸ್‌.ಚಂದ್ರ, ವಕೀಲೆ ಸುಮಿತ್ರಾ ಆಚಾರ್ಯ ಉಪಸ್ಥಿತರಿದ್ದರು.

ಖಾಸಗಿ ಎಫ್‌ಎಸ್‌ಎಲ್‌ ವರದಿ ಒಪ್ಪಲ್ಲ: ವಿಧಾನಸೌಧದಲ್ಲಿ ‘ಜಿಂದಾಬಾದ್‌’ ಘೋಷಣೆ ಕೂಗಿರುವುದಕ್ಕೆ ಸಂಬಂಧಿಸಿದಂತೆ ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್‌)ದಿಂದ ವರದಿ ಬಂದಿಲ್ಲ. ವರದಿಯನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ. ಆದರೆ ಖಾಸಗಿಯವರು ನೀಡಿರುವ ವರದಿಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘೋಷಣೆಗೆ ಸಂಬಂಧಿಸಿದಂತೆ ಎಫ್‌ಎಸ್‌ಎಲ್‌ ವರದಿ ಇನ್ನೂ ಬಂದಿಲ್ಲ. ಸಂಪೂರ್ಣ ವರದಿ ಬಂದ ನಂತರ ಕ್ರಮ ಕೈಗೊಳ್ಳುತ್ತೇವೆ. ಕೂಗಿರುವುದು ನಿಜವಾಗಿದ್ದರೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು. ವರದಿ ಬಂದ ಬಳಿಕ ಬಹಿರಂಗಗೊಳಿಸಲಾಗುವುದು. 

5 ವರ್ಷದಲ್ಲಿ 2.5 ಲಕ್ಷ ಹುದ್ದೆ ಭರ್ತಿಗೆ ಕ್ರಮ: ಗೃಹ ಸಚಿವ ಪರಮೇಶ್ವರ್‌

ಕೃತ್ಯ ನಡೆದ ಮರುದಿನವೇ ವರದಿ ಬಂದಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿಕೆ ನೀಡಿರುವುದು ನನ್ನ ಗಮನಕ್ಕೆ ಬಂದಿಲ್ಲ ಎಂದು ಪ್ರತಿಕ್ರಿಯಿಸಿದರು. ಖಾಸಗಿಯವರು ವರದಿ ನೀಡಲು ಅವರ ಬಳಿ ಪ್ರಯೋಗಾಲಯ ಇದೆಯೇ? ವಿಶ್ಲೇಷಣೆ ಮಾಡಿದ್ದಾರಾ ಎಂಬುದು ಗೊತ್ತಿಲ್ಲ. ಅವರು ಯಾರೆಂದೂ ತಿಳಿದಿಲ್ಲ. ಯಾವ ಅನುಮತಿ ತೆಗೆದುಕೊಂಡು ವಿಶ್ಲೇಷಣೆ ಮಾಡುತ್ತಿದ್ದಾರೆ, ಅವರಿಗೆ ಅನುಮತಿ ನೀಡಿರುವುದು ಯಾರು ಎಂಬುದನ್ನು ಪರಿಶೀಲಿಸಲಾಗುವುದು. ಈ ರೀತಿ ವರದಿಗಳನ್ನು ಬಹಿರಂಗಗೊಳಿಸಲು ಅವರಿಗೆ ಅಧಿಕಾರ ಇದೆಯಾ ಎಂಬುದನ್ನೂ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ವಿವರಿಸಿದರು.

click me!