ಕಾಂಗ್ರೆಸ್‌ನವರಿಗೆ ಕೇಸರಿ ಅಂದ್ರೆ ಆಗಲ್ಲ. ಆದರೆ, ಮುಸ್ಲಿಮರ ಟೋಪಿಯನ್ನು ಆನಂದವಾಗಿ ಹಾಕಿಕೊಳ್ಳುತ್ತಾರೆ ಎಂದು ಮಾಜಿ ಸಚಿವ, ಬಿಜೆಪಿ ನಾಯಕ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.
ದಾವಣಗೆರೆ (ಅ.07): ಕಾಂಗ್ರೆಸ್‌ನವರಿಗೆ ಕೇಸರಿ ಅಂದ್ರೆ ಆಗಲ್ಲ. ಆದರೆ, ಮುಸ್ಲಿಮರ ಟೋಪಿಯನ್ನು ಆನಂದವಾಗಿ ಹಾಕಿಕೊಳ್ಳುತ್ತಾರೆ ಎಂದು ಮಾಜಿ ಸಚಿವ, ಬಿಜೆಪಿ ನಾಯಕ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ. ಬಿಜೆಪಿಯವರು ನಕಲಿ ಹಿಂದೂಗಳು ಎಂಬ ಕಾಂಗ್ರೆಸ್ಸಿಗರ ಹೇಳಿಕೆಗೆ ಪ್ರತಿಕ್ರಿಯಿಸಿ, ಹೌದು, ನಾವು ನಕಲಿ ಹಿಂದೂಗಳು. ಹೀಗಾಗಿಯೇ ಹಣೆಗೆ ತಿಲಕ ಇಟ್ಟುಕೊಳ್ಳುತ್ತೇವೆ. ಕೇಸರಿ ಪೇಟ ತೊಟ್ಟುಕೊಳ್ಳುತ್ತೇವೆ. ಅಸಲಿ ಹಿಂದೂಗಳು ಕುಂಕುಮ, ಕೇಸರಿ ಪೇಟ ಬೇಡ ಅಂತಾರೆ. ಮುಸ್ಲಿಮರ ಟೋಪಿಯನ್ನು ಆನಂದವಾಗಿ ಹಾಕಿಕೊಳ್ಳುತ್ತಾರೆ. ಕೇಸರಿ ಅಂದ್ರೆ ಇವರಿಗೆ ಆಗಲ್ಲ. ಇಂತಹವರು ನಾಳೆ ಒಸಾಮ ಬಿನ್ ಲಾಡೆನ್ ಪರವಾಗಿ ಮಾತನಾಡಿದರೂ ಆಶ್ಚರ್ಯವಿಲ್ಲ ಎಂದು ವ್ಯಂಗ್ಯವಾಡಿದರು.
ಶಿವಮೊಗ್ಗ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಲು ತೂರಿದವರನ್ನು ಹಾಗೂ ಕಲ್ಲೇಟು ತಿಂದವರನ್ನು ಒಂದೇ ತಕ್ಕಡಿಯಲ್ಲಿ ತೂಗುವ ಮೂಲಕ ಕಾಂಗ್ರೆಸ್ ಸರ್ಕಾರ ಮಾರ್ಜಾಲ ನ್ಯಾಯ ಅನುಸರಿಸುತ್ತಿದೆ. ಈದ್ ಮಿಲಾದ್ ಮೆರವಣಿಗೆಯಲ್ಲಿ ಔರಂಗಜೇಬ, ಟಿಪ್ಪು ಸುಲ್ತಾನ್ ಫೋಟೋ ಹಾಕಲು ಅವಕಾಶ ಕೊಟ್ಟಿದ್ದೇ ತಪ್ಪು. ಪ್ರಕರಣದಲ್ಲಿ ಮತಾಂಧರ ವಿರುದ್ಧ ಕ್ರಮ ಕೈಗೊಳ್ಳದೆ, ದೌರ್ಜನ್ಯಕ್ಕೊಳಗಾದವರಿಗೆ ಕಿರುಕುಳ ನೀಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದರು. ಇದರಿಂದ ಮತಾಂಧತೆಗೆ ಸರ್ಕಾರವೇ ಉತ್ತೇಜನ ನೀಡುವಂತಾಗುತ್ತದೆ. ಪ್ರಕರಣ ಕುರಿತು ಸರ್ಕಾರ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಕರ್ನಾಟಕಕ್ಕೆ ಮುಂದೆ ಬಹಳ ದೊಡ್ಡ ಅಪಾಯ ಕಾದಿದೆ: ಸಿ.ಟಿ.ರವಿ
ಶಿವಮೊಗ್ಗ ಗಲಭೆ ನ್ಯಾಯಾಂಗ ತನಿಖೆಗೆ ಆಗ್ರಹ: ಶಿವಮೊಗ್ಗ ಘಟನೆ ಹಿಂದೆ ರಾಜ್ಯದ ಶಾಂತಿ ಹಾಳು ಮಾಡುವ ಉದ್ದೇಶ ಇದ್ದಂತಿದೆ. ಘಟನೆಯ ನ್ಯಾಯಾಂಗ ತನಿಖೆ ಮಾಡಬೇಕು ಎಂದು ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಸಿ.ಟಿ.ರವಿ ಒತ್ತಾಯಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕಕ್ಕೆ ಮುಂದೆ ಬಹಳ ದೊಡ್ಡ ಅಪಾಯ ಕಾದಿದೆ. ಶಿವಮೊಗ್ಗ, ಕೋಲಾರ ಘಟನೆಗಳ ಮೂಲಕ ಟೆಸ್ಟಿಂಗ್ ಡೋಸ್ ಕೊಟ್ಟಿದ್ದಾರೆ. ಈಗ ಪಿಕ್ಚರ್ ಬಾಕಿ ಹೈ ಎಂಬಂತೆ ಟ್ರೈಲರ್ ತೋರಿಸುವ ಕೆಲಸ ಮಾಡಿದ್ದಾರೆ ಎಂದು ಎಚ್ಚರಿಕೆ ನೀಡಿದರು.
ಈಗ ಟಿಪ್ಪು, ಔರಂಗಜೇಬ್ ವೈಭವೀಕರಣ ನಡೆದಿದೆ. ಭವಿಷ್ಯದಲ್ಲಿ ಅಫ್ಜಲ್ ಗುರು, ಒಸಾಮ ಬಿನ್ ಲಾಡೆನ್, ಸದ್ದಾಂ ಹುಸೇನ್, ಮಹಮ್ಮದ್ ಆಲಿ ಜಿನ್ನಾ ವೈಭವೀಕರಣ ನಡೆದರೂ ಅಚ್ಚರಿಯಿಲ್ಲ ಎಂದು ಹೇಳಿದರು. ಶಿವಮೊಗ್ಗ ಅತಿ ಸೂಕ್ಷ್ಮ ಪ್ರದೇಶ. ಹರ್ಷನ ಹತ್ಯೆ ಆಗಿತ್ತು. ಕರ್ನಾಟಕವು 140 ದಿನಗಳಲ್ಲಿ ನಕಾರಾತ್ಮಕ ಕಾರಣಕ್ಕಾಗಿ ಸುದ್ದಿಯಾದುದೇ ಹೆಚ್ಚು. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು 140 ದಿನಗಳು ಕಳೆದಿವೆ. ಕೋಮುವಾದಿ ಶಕ್ತಿಗಳು ಸಾರ್ವಜನಿಕವಾಗಿ ವಿಜೃಂಭಿಸಲು ಅವಕಾಶ ಮಾಡಿಕೊಟ್ಟಿದ್ದೇ ಈ ಸಕರ್ಮರದ ಸಾಧನೆ ಎಂದು ವ್ಯಂಗ್ಯವಾಡಿದರು.
ಡಿಕೆಶಿಯವರದ್ದು ಗೂಂಡಾ, ದುರಹಂಕಾರಿ ವರ್ತನೆ: ಸಿ.ಟಿ.ರವಿ ಆರೋಪ
ಬಹುಶಃ ಋಣ ತೀರಿಸುವ ದೃಷ್ಟಿಯಿಂದ ತಾಲಿಬಾನಿಗಳನ್ನು ಬೆಂಬಲಿಸುವ ಕೆಟ್ಟ ಕೆಲಸವನ್ನು ರಾಜ್ಯದ ಕಾಂಗ್ರೆಸ್ ಸರಕಾರ ಮಾಡುತ್ತಿದೆ. ಈ ಸರಕಾರದ ನಡೆ ಅನುಮಾನಾಸ್ಪದ ಮತ್ತು ದುರುದ್ದೇಶದ ಹಿನ್ನೆಲೆಯಿಂದ ಕೂಡಿದೆ. ವಿಧಾನಸಭಾ ಚುನಾವಣಾ ಫಲಿತಾಂಶ ಬರುವ ಸಂದರ್ಭದಲ್ಲಿ ಬೆಳಗಾವಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗುತ್ತಾರೆ. ಭಟ್ಕಳದಲ್ಲಿ ಹಿಂದೂಗಳ ಹೆಣ ಎತ್ತಲು ಕೂಡ ಜನ ಇರಬಾರದು ಎಂದು ಮುಸ್ಲಿಮರೊಬ್ಬರು ಬರಹ ಬರೆದಿದ್ದರು. ಬೆಳಗಾವಿಯಲ್ಲಿ ಜೈನಮುನಿಯ ಭೀಕರ ಹತ್ಯೆ ಆಗಿದೆ. ಟಿ.ನರಸೀಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ನಡೆದಿದೆ. ಫಲಿತಾಂಶ ಬಂದ ಮರುದಿನವೇ ಹೊಸಕೋಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಹತ್ಯೆ ನಡೆದಿದೆ ಎಂದು ವಿವರಿಸಿದರು.