
ಬೆಳಗಾವಿ(ಮೇ.06): ವಿಧಾನಸಭಾ ಚುನಾವಣೆ ಬಹಿರಂಗ ಪ್ರಚಾರ ಕೊನೆಯ ದಿನ ಬರುತ್ತಿದ್ದಂತೆಯೇ ತಮ್ಮ ಪರ ಪ್ರಚಾರಕ್ಕೆ ಅಭ್ಯರ್ಥಿಗಳು ಸ್ಟಾರ್ ನಟರಿಗೆ ಮಣೆಹಾಕಿದ್ದಾರೆ.
ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ನಟ, ಕಿಚ್ಚ ಸುದೀಪ ಭರ್ಜರಿ ಪ್ರಚಾರ ಮಾಡಿ ಹೋದ ಬೆನ್ನ ಹಿಂದೆಯೇ ಈಗ ಇಂದು(ಶನಿವಾರ) ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳಕರ ಪರವಾಗಿ ಪ್ರಚಾರ ನಡೆಸಲಿದ್ದಾರೆ.
ಭ್ರಷ್ಟಾಚಾರ ಬಿಟ್ಟರೆ ಬೇರೇನೂ ಸಾಧನೆ ಮಾಡದ ಬಿಜೆಪಿ: ಲಕ್ಷ್ಮೀ ಹೆಬ್ಬಾಳಕರ
ಸಂಜೆ 4 ಗಂಟೆಗೆ ಬೆಳಗಾವಿ ತಾಲೂಕಿನ ಸುಳೆಬಾವಿಗೆ ಆಗಮಿಸಲಿರುವ ಅವರು ಅಲ್ಲಿನ ಶ್ರೀ ಮಹಾಲಕ್ಷ್ಮೀ ದೇವಿ ದರ್ಶನ ಪಡೆದು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸಿ ಚುನಾವಣೆ ಪ್ರಚಾರ ಕಾರ್ಯ ಆರಂಭಿಸಲಿದ್ದಾರೆ. ಸಂಜೆ 5 ಗಂಟೆಗೆ ಶಿಂದೊಳ್ಳಿ ಗ್ರಾಮದಲ್ಲಿ ರೋಡ್ ಶೋ ನಡೆಸಿ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಸಂಜೆ 7 ಗಂಟೆಗೆ ಹೊನ್ನಿಹಾಳ ಗ್ರಾಮದಲ್ಲಿ ರೋಡ್ ಶೋ ನಡೆಸಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.