ನಟಿ ಅಮೂಲ್ಯ ರಾಜಕೀಯಕ್ಕೆ ಎಂಟ್ರಿ, ಸ್ಟಾರ್ ಪ್ರಚಾರಕಿ ಆಗ್ತಾರಾ..?

By Suvarna News  |  First Published Oct 19, 2020, 3:19 PM IST

ಚಿತ್ರರಂಗದಿಂದ ದೂರ ಉಳಿದಿರುವ ಸ್ಯಾಂಡಲ್‌ವುಡ್ ನಟಿ ಅಮೂಲ್ಯ ಅವರು ರಾಜಕೀಯ ಅಖಾಡಕ್ಕಿಳಿದಿದ್ದಾರೆ. ಅಲ್ಲದೇ ಬೈ ಎಲೆಕ್ಷನ್‌ ಪ್ರಚಾರಲ್ಲಿ ಪಾಲ್ಗೊಳ್ಳುತ್ತಾರಾ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.
 


ಬೆಂಗಳೂರು, (ಅ.19): ಸ್ಯಾಂಡಲ್‌ವುಡ್ ಅಮೂಲ್ಯ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ.  ಜೆಡಿಎಸ್ ಮುಖಂಡರಾಗಿದ್ದ ಮಾವ ಜಿ.ಎಚ್.ರಾಮಚಂದ್ರ ಅವರ ಜೊತೆಯಲ್ಲೇ ಅಮೂಲ್ಯ ಸಹ ಭಾನುವಾರ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. 

ರಾಮಚಂದ್ರ ಅವರ ನಿವಾಸದಲ್ಲಿಯೇ ನಡೆದ ಸರಳ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಸಮ್ಮುಖದಲ್ಲಿ ಅಮೂಲ್ಯ ಅಧಿಕೃತವಾಗಿ ಬಿಜೆಪಿ ಸೇರಿದರು. 

Tap to resize

Latest Videos

ಬರ್ತಡೇ ದಿನ ಗುಡ್ ನ್ಯೂಸ್‌ ಕೊಟ್ರಾ ನಟಿ ಅಮೂಲ್ಯ?

ರಾಮಚಂದ್ರ ಅವರು ಜೆಡಿಎಸ್‌ನ ಮುಖಂಡರಾಗಿದ್ದು, 2018ರ ವಿಧಾನಸಭಾ ಚುನಾವಣೆಯಲ್ಲಿ ಆರ್‌ಆರ್‌ ನಗರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆಗ ನಟಿ ಅಮೂಲ್ಯ ಸಹ ಮಾವನ ಪರವಾಗಿ ಪ್ರಚಾರದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.

ಆದರೆ ನಂತರ ನಡೆದ ರಾಜಕೀಯ ಬೆಳವಣಿಗೆಗಳಲ್ಲಿ ರಾಮಚಂದ್ರ ಅವರು ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡಿದ್ದು, ಇದೀಗ  ಅಧಿಕೃತವಾಗಿ ಬಿಜೆಪಿ ಸೇರ್ಪಡಿದ್ದು, ಉಪಚುನಾವಣೆಯಲ್ಲಿ ಬಿಜೆಪಿಗೆ ಮತ್ತಷ್ಟು ಬಲ ಬಂದಂತಾಗಿದೆ.

ಮದುವೆಯ ಬಳಿಕ ಸಿನಿಮಾಗಳಿಂದ ದೂರ ಉಳಿದಿರುವ ನಟಿ ಅಮೂಲ್ಯ, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ಪತಿಯೊಂದಿಗೆ ಸೇರಿ ಕೊರೋನಾ ಲಾಕ್‌ಡೌನ್ ಸಮಯದಲ್ಲಿ ಸಾಕಷ್ಟು ಸಮಾಜಿಕ ಕಾರ್ಯಗಳನ್ನು ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಇನ್ನು ಅಮೂಲ್ಯ ಪ್ರಸ್ತುತ ರಾಜರಾಜೇಶ್ವರಿ ನಗರ ಉಪಚುನಾವಣೆಯ ಸ್ಟಾರ್ ಪ್ರಚಾರಕಿಯಾಗುತ್ತಾರಾ ಎನ್ನುವುದನ್ನು ಕಾದುಬೋಡಬೇಕಿದೆ.

click me!