ಬೆಂಗಳೂರು: ಖ್ಯಾತ ಹಾಸ್ಯನಟ ಟೆನ್ನಿಸ್‌ ಕೃಷ್ಣ ಆಮ್‌ ಆದ್ಮಿ ಪಕ್ಷಕ್ಕೆ ಸೇರ್ಪಡೆ

Published : Aug 05, 2022, 06:19 AM IST
ಬೆಂಗಳೂರು: ಖ್ಯಾತ ಹಾಸ್ಯನಟ ಟೆನ್ನಿಸ್‌ ಕೃಷ್ಣ ಆಮ್‌ ಆದ್ಮಿ ಪಕ್ಷಕ್ಕೆ ಸೇರ್ಪಡೆ

ಸಾರಾಂಶ

ದೇಶದ ರಾಜಕೀಯದಲ್ಲಿ ಬದಲಾವಣೆ ತರುವ ಪ್ರಯತ್ನದಲ್ಲಿ ಆಮ್‌ ಆದ್ಮಿ ಪಕ್ಷ ಯಶಸ್ವಿಯಾಗುತ್ತಿದೆ: ಟೆನ್ನಿಸ್‌ ಕೃಷ್ಣ

ಬೆಂಗಳೂರು(ಆ.05):  ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಟೆನ್ನಿಸ್‌ ಕೃಷ್ಣ ಅವರು ಆಮ್‌ ಆದ್ಮಿ ಪಕ್ಷಕ್ಕೆ (ಎಎಪಿ) ಸೇರ್ಪಡೆಯಾಗಿದ್ದಾರೆ. ಗುರುವಾರ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಅವರು ಕೃಷ್ಣ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಸೇರ್ಪಡೆ ಬಳಿಕ ಮಾತನಾಡಿದ ಟೆನ್ನಿಸ್‌ ಕೃಷ್ಣ, ದೇಶದ ರಾಜಕೀಯದಲ್ಲಿ ಬದಲಾವಣೆ ತರುವ ಪ್ರಯತ್ನದಲ್ಲಿ ಆಮ್‌ ಆದ್ಮಿ ಪಕ್ಷ ಯಶಸ್ವಿಯಾಗುತ್ತಿದೆ. ದೆಹಲಿಯಲ್ಲಿ ಶಿಕ್ಷಣ, ಆರೋಗ್ಯ, ಕ್ರೀಡೆ ಮುಂತಾದ ಕ್ಷೇತ್ರಗಳಲ್ಲಿ ಸಾಧಿಸಿ ತೋರಿಸಿರುವ ಪಕ್ಷವು ಈಗ ಪಂಜಾಬ್‌ನಲ್ಲಿಯೂ ಮೋಡಿ ಮಾಡುತ್ತಿದೆ. ಭ್ರಷ್ಟಪಕ್ಷಗಳನ್ನು ಬದಿಗೊತ್ತಿ ದೇಶವನ್ನು ಕಾಪಾಡಲು ಆಮ್‌ ಆದ್ಮಿ ಪಕ್ಷದಿಂದ ಮಾತ್ರ ಸಾಧ್ಯ. ಸಾಮಾನ್ಯ ಜನರ ಬಗ್ಗೆ ಅಪಾರ ಕಾಳಜಿಯುಳ್ಳ ಈ ಪಕ್ಷದ ಮೂಲಕ ರಾಜಕೀಯ ಪ್ರವೇಶಿಸುತ್ತಿರುವುದಕ್ಕೆ ಹೆಮ್ಮೆಯಾಗುತ್ತಿದೆ. ಪಕ್ಷವನ್ನು ಬಳಸಿಕೊಂಡು ದೇಶದ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ರಾಜಕೀಯ ಪ್ರವೇಶಿಸಬೇಕು ಎಂದು ಹೇಳಿದರು.

ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಮಾತನಾಡಿ, ರಾಜ್ಯದಲ್ಲಿ ಪಕ್ಷವು ಭದ್ರವಾಗಿ ಬೇರೂರುತ್ತಿದೆ. ಸಿನಿಮಾ ಸಾಧಕರು, ದಕ್ಷ ಅಧಿಕಾರಿಗಳು, ರೈತ ನಾಯಕರು, ಸಮಾಜ ಸೇವಕರು, ವಕೀಲರು, ಉಪನ್ಯಾಸಕರು ಮತ್ತಿತರ ವಿವಿಧ ಕ್ಷೇತ್ರದ ಗಣ್ಯರು ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ದೇಶಕ್ಕೆ ಆಮ್‌ ಆದ್ಮಿ ಪಕ್ಷವೊಂದೇ ಆಶಾಕಿರಣ ಎಂಬುದು ಯುವಜನತೆಗೆ ಮನವರಿಕೆಯಾಗುತ್ತಿದೆ. ನಟ ಟೆನ್ನಿಸ್‌ ಕೃಷ್ಣರವರ ಸೇರ್ಪಡೆಯಿಂದ ಪಕ್ಷಕ್ಕೆ ಇನ್ನಷ್ಟುಬಲ ಬಂದಿದೆ. ಸ್ವಚ್ಛ ರಾಜಕೀಯ ಮತ್ತು ಪಾರದರ್ಶಕ ಆಡಳಿತವೇ ನಮ್ಮೆಲ್ಲರ ಧ್ಯೇಯವಾಗಿದ್ದು, ಇದನ್ನು ಸಾಧಿಸಲು ಒಗ್ಗಟ್ಟಿನಿಂದ ಶ್ರಮಿಸಲಿದ್ದೇವೆ ಎಂದರು.

ಮೋದಿಗೆ ಠಕ್ಕರ್, ಗುಜರಾತ್ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಆಪ್!

ಬೆಂಗಳೂರು ನಗರ ಅಧ್ಯಕ್ಷ ಮೋಹನ್‌ ದಾಸರಿ ಮಾತನಾಡಿ, ಟೆನ್ನಿಸ್‌ ಕೃಷ್ಣ ಅವರ ತಂದೆಯವರು ಮಾಜಿ ಮುಖ್ಯಮಂತ್ರಿ ಕೆಂಗಲ್‌ ಹನುಮಂತಯ್ಯ ಸೇರಿದಂತೆ ಅನೇಕ ಗಣ್ಯರಿಗೆ ಟೆನಿಸ್‌ ತರಬೇತಿ ನೀಡಿದವರು. ಕೃಷ್ಣ ಅವರು ಸಹ ತಂದೆಯ ಹಾದಿಯಲ್ಲಿಯೇ ಸಾಗಿ ಟೆನಿಸ್‌ ತರಬೇತಿ ನೀಡಿ, ಟೆನಿಸ್‌ ಕೃಷ್ಣ ಎಂದೇ ಮನೆಮಾತಾಗಿದ್ದಾರೆ. ಕನ್ನಡದ 650ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಹಾಸ್ಯನಟರಾಗಿ ನಗಿಸುವ ಮೂಲಕ ಕನ್ನಡಿಗರ ಆಯಸ್ಸು ಹೆಚ್ಚಿಸಿದ್ದಾರೆ ಎಂದು ತಿಳಿಸಿದರು. ಪಕ್ಷದ ಮುಖಂಡರಾದ ಸಂಚಿತ್‌ ಸೆಹ್ವಾನಿ, ಜಗದೀಶ್‌ ವಿ.ಸದಂ, ಪುರುಷೋತ್ತಮ್‌, ಸುರೇಶ್‌ ರಾಥೋಡ್‌, ಉಷಾ ಮೋಹನ್‌ ಇತರರು ಉಪಸ್ಥಿತರಿದ್ದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್
ದಯಮಾಡಿ ಅರ್ಥ ಮಾಡಿಕೊಳ್ಳಿ ತಪ್ಪು ತಿಳಿಯಬೇಡಿ: ಸೋದರನ ಪೋಸ್ಟ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ