ಸಚಿವ ಸಂಪುಟ ಪುನಾರಚನೆ ಸಾಧ್ಯತೆ, ಅನೇಕರಿಗೆ ಕೊಕ್‌: ಸಚಿವ ಸಂತೋಷ್ ಲಾಡ್ ಸುಳಿವು

Published : Nov 02, 2025, 05:59 AM IST
Santosh

ಸಾರಾಂಶ

ರಾಜ್ಯ ಸಚಿವ ಸಂಪುಟ ಬಹುಶಃ ಪುನಾರಚನೆಯಾಗಲಿದ್ದು, ಕೆಲವು ಸಚಿವರನ್ನು ಸಂಪುಟದಿಂದ ಕೈಬಿಡಲಾಗುತ್ತದೆ. ರೀಶಫಲ್ ಅಂದರೆ ಸಚಿವರನ್ನು ಕೈಬಿಡುವುದೆಂದು ತಾನೇ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.

ದಾವಣಗೆರೆ (ನ.02): ರಾಜ್ಯ ಸಚಿವ ಸಂಪುಟ ಬಹುಶಃ ಪುನಾರಚನೆಯಾಗಲಿದ್ದು, ಕೆಲವು ಸಚಿವರನ್ನು ಸಂಪುಟದಿಂದ ಕೈಬಿಡಲಾಗುತ್ತದೆ. ರೀಶಫಲ್ ಅಂದರೆ ಸಚಿವರನ್ನು ಕೈಬಿಡುವುದೆಂದು ತಾನೇ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಪೂರ್ಣ ಪ್ರಮಾಣದ ಸರ್ಕಾರವಿದ್ದಾಗ ಸಂಪುಟ ಪುನಾರಚನೆ ಆಗಿಯೇ ಆಗುತ್ತದೆ. ಸಂಪುಟ ಪುನಾರಚನೆ ವೇಳೆ ಕೆಲ ಸಚಿವರನ್ನು ಸಂಪುಟದಿಂದ ಕೈಬಿಡುವುದು ಸಹ ನಿಜ ಎಂದರು. ಹೈಕಮಾಂಡ್ ಮತ್ತು ಮುಖ್ಯಮಂತ್ರಿ ಏನು ಮಾನದಂಡ ಹಾಕುತ್ತಾರೋ ಗೊತ್ತಿಲ್ಲ. ಆದರೆ, ಸಂಪುಟ ಪುನಾರಚನೆಯಾಗುತ್ತದೆ. ನವೆಂಬರ್ ಕ್ರಾಂತಿ ಅಂತಾ ಏನೇನೂ ಇಲ್ಲ. ಅದೆಲ್ಲಾ ಬರೀ ಚರ್ಚೆಗಳಷ್ಟೇ. ನನಗೆ ಅದರ ಬಗ್ಗೆ ಗೊತಿಲ್ಲ. ನಾನೊಬ್ಬ ಅಮಾಯಕ. ಸಿಎಂ ಬದಲಾವಣೆ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಹೇಳಿದರು.

ನವೆಂಬರ್‌ಗೆ ಸೀಮಿತವಾಗದಿರಲಿ ಕನ್ನಡದ ಪ್ರೀತಿ

ನಾಡು, ನುಡಿಯ ಪ್ರೀತಿಯನ್ನು ಕೇವಲ ನವೆಂಬರ್‌ ತಿಂಗಳಿಗೆ ಮಾತ್ರ ಸೀಮಿತವಾಗಿಸದೆ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ಕನ್ನಡದಲ್ಲೇ ಮಾತನಾಡುತ್ತೇನೆ, ಬರೆಯುತ್ತೇನೆ, ನಿತ್ಯ ಕನ್ನಡದಲ್ಲಿಯೇ ವ್ಯವಹರಿಸುತ್ತೇನೆ, ಕನ್ನಡೇತರರಿಗೆ ಕನ್ನಡ ಕಲಿಸುತ್ತೇನೆ ಎಂದು ಪಣತೊಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಜಿಲ್ಲಾಡಳಿತ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 70ನೇ ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಕರ್ನಾಟಕ ಏಕೀಕರಣ ಚಳವಳಿ ಹುಟ್ಟುಹಾಕಿದ್ದು ಧಾರವಾಡ ಜಿಲ್ಲೆ. ಆಲೂರ ವೆಂಕಟರಾಯರು ಇದರ ಮೂಲ ಪುರುಷರು. ಏಕೀಕರಣ ಚಳವಳಿಯ ಪ್ರಮುಖರಾದ ರಾ.ಹ. ದೇಶಪಾಂಡೆ, ಡೆ. ಚನ್ನಬಸಪ್ಪರವರು, ಅದರಗುಂಚಿ ಶಂಕರಗೌಡ ಪಾಟೀಲರು ಹಾಗೂ ಕನ್ನಡ ಭಾಷಾ ಬೆಳವಣಿಗೆಗೆ ಕೊಡುಗೆ ನೀಡಿದ ನಾಡಿನ ಹೆಸರಾಂತ ಕವಿ, ಸಾಹಿತಿ, ಸಂಗೀತಗಾರರನ್ನು ನೆನಪಿಸಿಕೊಳ್ಳುವುದು ನಮ್ಮ ಕರ್ತವ್ಯ ಎಂದರು.

ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನಾರದ ಜಿಲ್ಲೆಯ ಶಿಕ್ಷಣ ತಜ್ಞ ಹಾಗೂ ನಿವೃತ್ತ ಇತಿಹಾಸ ಪ್ರಾಧ್ಯಾಪಕ ಪ್ರೊ. ರವೀಂದ್ರ ಕೋರಿಶೆಟ್ಟರ್‌, ಚಿತ್ರಕಲಾವಿದ ಬಿ. ಮಾರುತಿ ಅವರಿಗೆ ಜಿಲ್ಲೆಯ ಪರವಾಗಿ ಅಭಿನಂದನೆಯನ್ನು ಸಚಿವರು ತಿಳಿಸಿದರು. ವಿಪ ಸದಸ್ಯ ಎಫ್.ಎಚ್. ಜಕ್ಕಪ್ಪನವರ, ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಜಿಲ್ಲಾಧಿಕಾರಿ ದಿವ್ಯಪ್ರಭು, ಪೊಲೀಸ್‌ ಆಯುಕ್ತ ಎನ್. ಶಶಿಕುಮಾರ, ಜಿಪಂ ಸಿಇಒ ಭುವನೇಶ ಪಾಟೀಲ, ಎಸ್ಪಿ ಗುಂಜನ ಆರ್ಯ, ಐಎಎಸ್ ಪ್ರೊಬೆಷನರಿ ಅಧಿಕಾರಿ ರೀತಿಕಾ ವರ್ಮಾ ಸೇರಿದಂತೆ ಅನೇಕರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!