ಸಿಡಿ ಕೇಸ್​​​​​​​​​​​​​​​​​​​​​​​​​ನಲ್ಲಿದ್ದ ಮಹಾನಾಯಕನ ತಂಡ ಸಂತೋಷ್​ ಕೇಸ್​ನಲ್ಲೂ ಇದೆ, ಗಂಭೀರ ಆರೋಪ

Published : Apr 14, 2022, 04:39 PM IST
ಸಿಡಿ ಕೇಸ್​​​​​​​​​​​​​​​​​​​​​​​​​ನಲ್ಲಿದ್ದ ಮಹಾನಾಯಕನ ತಂಡ ಸಂತೋಷ್​ ಕೇಸ್​ನಲ್ಲೂ ಇದೆ, ಗಂಭೀರ ಆರೋಪ

ಸಾರಾಂಶ

* ನನ್ನ ಸಿಡಿ ಕೇಸ್​​​​​​​​​​​​​​​​​​ನಲ್ಲಿದ್ದ ಮಹಾನಾಯಕನ ತಂಡ ಸಂತೋಷ್​ ಕೇಸ್​ನಲ್ಲೂ ಇದೆ * ಅದಕ್ಕೆ ಈಶ್ವರಪ್ಪ ರಾಜೀನಾಮೆ ಕೊಡಬಾರದು * ಪರೋಕ್ಷವಾಗಿ ಡಿಕೆಶಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಆರೋಪ

ಬೆಳಗಾವಿ, (ಏ.14): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜಕೀಯದಲ್ಲಿ ಅಲ್ಲೋಲ-ಕಲ್ಲೋಲ ಸೃಷ್ಟಿಸಿದೆ. ಅಲ್ಲದೇ   ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್  ಈಶ್ವರಪ್ಪ ರಾಜೀನಾಮೆ ನೀಡಲೇ  ಬೇಕೆಂದು ಕಾಂಗ್ರೆಸ್ ಪ್ರತಿಭಟನೆ ತೀವ್ರಗೊಳಿಸಿದೆ. ಈ ಹಿನ್ನೆಲೆಯಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ  ಇಕ್ಕಟ್ಟಿಗೆ ಸಿಲುಕಿದ್ದಾರೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಬೆಳಗಾವಿ ತಾಲೂಕಿನ ಬಡಸ ಗ್ರಾಮದ ಗುತ್ತಿಗೆದಾರ ಸಂತೋಷ್​ ಪಾಟೀಲ್​ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಸಂತೋಷ್‌ ಆತ್ಮಹತ್ಯೆ ಹಿಂದೆ ರಾಜಕೀಯ ಷಡ್ಯಂತ್ರ: ಸಚಿವ ಸುಧಾಕರ್‌

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಪಾಟೀಲ್​ ನನ್ನ ಹಳೆಯ ಕಾರ್ಯಕರ್ತ.ಅವನು‌ ಆತ್ಮಹತ್ಯೆ ಮಾಡಿಕೊಳ್ಳಬಾರದಿತ್ತು. ಇದರಲ್ಲಿ ಈಶ್ವರಪ್ಪ ತಪ್ಪಿದ್ದರೆ ಶಿಕ್ಷೆಯಾಗಲಿ. ಆದರೆ,ತನಿಖೆ ಆಗಬೇಕು ಎಂದು ಆಗ್ರಹಿಸಿದರು. 

ಸೋಮವಾರ ಸುದ್ದಿಗೋಷ್ಠಿ ನಡೆಸಿ ಎಲ್ಲವನ್ನೂ ಬಿಚ್ಚಿಡುತ್ತೇನೆ. ಈ ಪ್ರಕರಣದ ಹಿಂದೆಯೂ ಮಹಾನಾಯಕ‌ ಇದ್ದಾನೆ. ನನ್ನ ಸಿಡಿ ಕೇಸ್​​​​​​​​​​​​​​​​​​ನಲ್ಲಿದ್ದ ಮಹಾನಾಯಕನ ತಂಡ ಸಂತೋಷ ಕೇಸ್​ನಲ್ಲೂ ಇದೆ. ಆ ನಾಯಕನ ಟೀಮ್​ ಇಲ್ಲಿ ಕೆಲಸ ಮಾಡಿದೆ.ಅದಕ್ಕೆ ಈಶ್ವರಪ್ಪ ರಾಜೀನಾಮೆ ಕೊಡಬಾರದು.  ನನ್ನ ಸಿಡಿ ಪ್ರಕರಣ ಮತ್ತು ಸಂತೋಷ್ ಪಾಟೀಲ್​ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಪರೋಕ್ಷವಾಗಿ ಡಿಕೆಶಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ವಾಗ್ದಾಳಿ ನಡೆಸಿದರು.

ಈಶ್ವರಪ್ಪ ಬಂಧನಕ್ಕೆ ಕಾಂಗ್ರೆಸ್ ಬಿಗಿಪಟ್ಟು
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣವಾಗಿರುವ ಸಚಿವ ಕೆ.ಎಸ್ ಈಶ್ವರಪ್ಪ ಬಂಧನಕ್ಕೆ ಒತ್ತಾಯಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಮತ್ತು ರಾಜ್ಯ ಉಸ್ತುವಾರಿ ವಹಿಸಿರುವ ರಣದೀಪ್ ಸಿಂಗ್ ಸುರ್ಜೇವಾಲ ಸೇರಿ ನೂರಾರು ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದ್ದಾರೆ.

ಪ್ರತಿಭಟನೆಯನ್ನು ಉದ್ದೇಶಿಸಿ ಸಿದ್ದರಾಮಯ್ಯನವರು ಮಾತನಾಡಿ, “ಇಂದು ದೇಶಾದ್ಯಂತ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಗುತ್ತಿದೆ. ಆದರೆ ಬಿಜೆಪಿ ಸರ್ಕಾರ ಅಂಬೇಡ್ಕರ್ ರಚಿಸಿದ ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ” ಎಂದು ಆರೋಪಿಸಿದರು.

ಡಿ.ಕೆ ಶಿವಕುಮಾರ್‌ರವರು ಮಾತನಾಡಿ, “40% ಭ್ರಷ್ಟಾಚಾರದಲ್ಲಿ ಭಾಗಿಯಾಗಿ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣವಾಗಿರುವ ಸಚಿವ ಈಶ್ವರಪ್ಪನವರನ್ನು ಬಂಧಿಸಿ ತನಿಖೆ ನಡೆಸಬೇಕು. ಅವರಿಂದ ರಾಜೀನಾಮೆ ಪಡೆಯಬೇಕು” ಎಂದು ಒತ್ತಾಯಿಸಿದರು.

ಗುತ್ತಿಗೆದಾರರ ಸಂಘದ ಪ್ರತಿಕ್ರಿಯೆ
ಸಂತೋಷ ಅವರು ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ಪರ್ಸೆಂಟೇಜ್ ಕುರಿತ ಆರೋಪದಲ್ಲಿ ಯಾವುದೇ ಉತ್ಪ್ರೇಕ್ಷೆ ಇಲ್ಲ, ಎಲ್ಲಾ ಇಲಾಖೆಗಳ ಸಚಿವರು ಲಂಚ ತೆಗೆದುಕೊಳ್ಳದೆ ಕೆಲಸ ಮಾಡುವುದಿಲ್ಲ. ಸಚಿವರುಗಳ ಲಂಚಗುಳಿತನಕ್ಕೆ ನಮ್ಮಲ್ಲಿ ಸಾಕ್ಷ್ಯಾಧಾರಗಳಿವೆ ಎಂದು ಕೆಂಪಣ್ಣ ಹೇಳಿದ್ದಾರೆ.

ಸಂತೋಷ ಪಾಟೀಲ (Santosh Patil) ಅವರು ಮಂಗಳವಾರ ಉಡುಪಿಯಲ್ಲಿ ಆತ್ಮಹತ್ಯೆಯ ಮೂಲಕ ಸಾವನ್ನಪ್ಪಿದ್ದು ಅವರ ಪಿತ್ತ ಕೆರಳಿಸಿದೆ. ಬೆಂಗಳೂರಿನಲ್ಲಿ ಬುಧವಾರ ಪತ್ರಿಕಾ ಗೋಷ್ಟಿಯೊಂದನ್ನು ನಡೆಸಿ ಮಾತಾಡಿದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಸರ್ಕಾರ ಮಟ್ಟದಲ್ಲಿ ಭ್ರಷ್ಟಾಚಾರ ಯಾವ ಮಟ್ಟದಲ್ಲಿ ಹಾಸು ಹೊಕ್ಕಿದೆ ಅನ್ನೋದನ್ನು ವಿವರಿಸಿದರು. ಸಂತೋಷ ಅವರು ವರ್ಕ್​ ಆರ್ಡರ್​ (work order) ಇಲ್ಲದೆ ಕೆಲಸ ಮಾಡಿಸಿದ್ದ ವಿಷಯಕ್ಕೆ ಸಂಬಂಧಿಸಿದಂತೆ ಮಾತಾಡಿದ ಕೆಂಪಣ್ಣ ಅವರು ದಶಕಗಳಿಂದ ಅದು ನಡೀತಾ ಬರುತ್ತಿದೆ, ತುರ್ತು ಸಂದರ್ಭಗಳಲ್ಲಿ ವರ್ಕ್​ ಆರ್ಡರ್ ಇಲ್ಲದೆ ಕೆಲಸ ಮಾಡಿಸಿ, ನಂತರ ಅದನ್ನು ಅಪ್ರೂವ್ ಮಾಡಲಾಗುತ್ತದೆ ಎಂದರು. ಸಂತೋಷ ತನಗಾಗಿರುವ ಅನ್ಯಾಯದ ಬಗ್ಗೆ ಪ್ರಧಾನ ಮಂತ್ರಿಯವರಿಗೆ ಪತ್ರ ಬರೆದಿದ್ದನೆಂದರೆ ಅವನೆಷ್ಟು ನೊಂದುಕೊಂಡಿದ್ದ ಅನ್ನೋದನ್ನು ಎಲ್ಲರೂ ಯೋಚಿಸಬೇಕಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌