ಗೃಹ ಸಚಿವ ಆರಗ ಜ್ಞಾನೇಂದ್ರ ಮನೆಯಲ್ಲಿ ಹಣ ಎಣಿಸುತ್ತಿರುವ ಫೋಟೋ ವೈರಲ್ ಆಗಿದೆ ಎಂಬ ಹೆಚ್‍ಡಿ ಕುಮಾರಸ್ವಾಮಿ ಹೇಳಿಕೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ತಿರುಗೇಟು ನೀಡಿದ್ದಾರೆ.
ತೀರ್ಥಹಳ್ಳಿ ಜ.9: ಗೃಹ ಸಚಿವ ಆರಗ ಜ್ಞಾನೇಂದ್ರ ಮನೆಯಲ್ಲಿ ಹಣ ಎಣಿಸುತ್ತಿರುವ ಫೋಟೋ ವೈರಲ್ ಆಗಿದೆ ಎಂಬ ಹೆಚ್‍ಡಿ ಕುಮಾರಸ್ವಾಮಿ ಹೇಳಿಕೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ತಿರುಗೇಟು ನೀಡಿದ್ದಾರೆ. ಸ್ಯಾಂಟ್ರೋ ರವಿ(Santro ravi) ನನ್ನ ನಿವಾಸದಲ್ಲಿ ಹಣ ಎಣಿಸಿದ್ದಾರೆಂಬುದು ಸುಳ್ಳು. ಎಚ್.ಡಿ ಕುಮಾರಸ್ವಾಮಿ(HD Kumaraswamy) ಹಸಿ ಸುಳ್ಳು ಹೇಳುವುದರ ಮೂಲಕ ಹತಾಶ ಸ್ಥಿತಿಗೆ ತಲುಪಿದ್ದಾರೆ. ಕುಮಾರಸ್ವಾಮಿ ನನ್ನ ಮೇಲೆ ಮಾಡಿದ ಆರೋಪ ಸಾಬೀತುಪಡಿಸಬೇಕು ಎಂದು ಹೇಳಿದರು.
ಸ್ಯಾಂಟ್ರೋ ರವಿಯ ಅನೇಕ ವಿವಾದ ವಿವಾದಗಳನ್ನು ಹೆಚ್.ಡಿ.ಕುಮಾರಸ್ವಾಮಿ ಎತ್ತಿದ್ದಾರೆ. ಇದಕ್ಕೆ ನಮ್ಮದೇನು ಅಭ್ಯಂತರವಿಲ್ಲ. ಮೈಸೂರಿನ ಕಮಿಷನರ್ ಮತ್ತು ಅಧಿಕಾರಿಗಳಿಗೆ ಈ ಬಗ್ಗೆ ನಿರ್ದೇಶನ ನೀಡಲಾಗಿದೆ. ಅವನು ಯಾರು, ಅವನ ಹಿನ್ನೆಲೆ ಏನು, ಅವನ ಮೇಲೆ ಎಷ್ಟು ಕೇಸು ಇದೆ, ಯಾರಿಗೆ ಬ್ಲ್ಯಾಕ್ ಮೇಲ್ ಮಾಡಿದ್ದಾರೆ ಎಂದು ತಿಳಿಯಲು ಹೇಳಿದ್ದೇನೆ. ನನ್ನ ಮನೆಯಲ್ಲಿ ಆತ ಹಣದ ಗಂಟನ್ನು ಬಿಚ್ಚಿದ್ದಾನೆ ಎಂದು ಕುಮಾರಸ್ವಾಮಿ ಸತ್ಯಕ್ಕೆ ಅಪಚಾರವಾಗುವಂತಹ ಆಪಾದನೆ ಮಾಡಿದ್ದಾರೆ.
undefined
ಸ್ಯಾಂಟ್ರೋ ರವಿ ಪ್ರಕರಣ: ನಮ್ಮ ಸರ್ಕಾರ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ: ಬಿಎಸ್‌ವೈ
ನನ್ನನ್ನು ಯಾವ ಕಾರಣದಿಂದ ತೇಜೋವಧೆ ಮಾಡುತ್ತಿದ್ದಾರೆ ಎಂದು ತಿಳಿದಿಲ್ಲ. ಇದರಿಂದ ಅವರಿಗೆ ಯಾವ ರೀತಿ ಲಾಭವಾಗುತ್ತದೆ ಗೊತ್ತಿಲ್ಲ. ಗೃಹ ಸಚಿವನಾದ ನನ್ನನ್ನು ಸಮಾಜದ ಕಟ್ಟಕಡೆಯ ಜನರೂ ಒಳಗೊಂಡಂತೆ ದಿನನಿತ್ಯ ನೂರಾರು ಮಂದಿ ಭೇಟಿ ಮಾಡುತ್ತಾರೆ. ಪ್ರತಿಯೊಬ್ಬರ ಹಿನ್ನೆಲೆಯನ್ನೂ ಸೋಸಿ ನೋಡಲಾಗುವುದಿಲ್ಲ ಎಂದು ಸಚಿವ ಆರಗ ಜ್ಞಾನೇಂದ್ರ(Araga jnanendra)ಎಂದರು.
ರಾಜ್ಯದ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ. ಕುಮಾರಸ್ವಾಮಿಯವರು, ಅತ್ಯಂತ ಬೇಜವಾಬ್ದಾರಿಯಿಂದ ಸ್ಯಾಂಟ್ರೋ ರವಿ ನನ್ನ ನಿವಾಸದಲ್ಲಿ ಹಣ ಎಣಿಸಿದ್ದ ಎಂಬ ಹಸಿ ಸುಳ್ಳನ್ನು ಹೇಳುವುದರ ಮೂಲಕ ಎಷ್ಟರ ಮಟ್ಟಿಗೆ ರಾಜಕೀಯವಾಗಿ ಹತಾಶ ಸ್ಥಿತಿಗೆ ತಲುಪಿದ್ದಾರೆ ಎಂದು ವೇದ್ಯವಾಗುತ್ತದೆ. ನಾನು ಸಾರ್ವಜನಿಕ ಜೀವನದಲ್ಲಿ ನೈತಿಕತೆಯಿಂದ ಬದುಕಿದವನು. ಹೇಗಿರಬೇಕೆಂದು ನನಗೆ ಗೊತ್ತಿದೆ ಎಂದು ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸ್ಯಾಂಟ್ರೋ ರವಿ ಬಗ್ಗೆ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಬಾಂಬ್!
ಬೀದರ್ ಜಿಲ್ಲೆ ಬಸವಕಲ್ಯಾಣ(Basavakalyana)ದಲ್ಲಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಗೃಹ ಸಚಿವರ ಮನೆಯಲ್ಲಿ ಹಣದ ಲೆಕ್ಕ ಹಾಕಿರುವ ಫೋಟೋ ವೈರಲ್(Photo viral) ಆಗಿದೆ. ಆರಗ ಮನೆಯಲ್ಲಿ ಲೆಕ್ಕ ಹಾಕಿದ ಹಣದ ಫೋಟೋ ತೆಗೆದವರು ಯಾರು? ಎಸಿಪಿ ವರ್ಗಾವಣೆ ಮಾಡಿಸಲು 15 ಲಕ್ಷ ಹಣ ಎಣಿಸುತ್ತಿರುವುದಂತೆ. ಇದು ಗೃಹಸಚಿವರ ನಿವಾಸದಲ್ಲೇ ನಡೆದಿದೆ, ಈ ಬಗ್ಗೆ ತನಿಖೆಯಾಗಲಿ ಎಂದು ಆಗ್ರಹಿಸಿದ್ದರು.