ಕೆಪಿಸಿಸಿ ಅಧ್ಯಕ್ಷಗಿರಿ ರೇಸ್‌ಗೆ ಜಾರಕಿಹೊಳಿ: ಸತೀಶ್ ಎಂಟ್ರಿಯಿಂದ ರೋಚಕ ತಿರುವು!

Published : Jan 15, 2025, 04:28 AM IST
ಕೆಪಿಸಿಸಿ ಅಧ್ಯಕ್ಷಗಿರಿ ರೇಸ್‌ಗೆ ಜಾರಕಿಹೊಳಿ: ಸತೀಶ್ ಎಂಟ್ರಿಯಿಂದ ರೋಚಕ ತಿರುವು!

ಸಾರಾಂಶ

ಹಾಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರ ಬದಲಾವಣೆ ಸಂದರ್ಭದಲ್ಲಿ ತಮ್ಮನ್ನು ಹುದ್ದೆಗೆ ಪರಿ ಗಣಿಸಬೇಕು ಎಂದು ಪ್ರಬಲ ಹಕ್ಕೊತ್ತಾಯವನ್ನು ಸತೀಶ್ ಹೈಕಮಾಂಡ್ ಮುಂದೆ ಮಂಡಿಸಿದ್ದಾರೆ. ಅಲ್ಲದೆ, ಪಕ್ಷದ 50ಕ್ಕೂ ಹೆಚ್ಚು ಶಾಸಕರು ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವಂತೆ ತಮ್ಮ ಮೇಲೆ ಒತ್ತಡ ನಿರ್ಮಾಣ ಮಾಡುತ್ತಿದ್ದು, ಬೆಂಬಲ ವ್ಯಕ್ತಪಡಿಸಿದ್ದಾರೆ.   

ಬೆಂಗಳೂರು(ಜ.15): ಮಹತ್ವದ ಬೆಳವಣಿಗೆಯೊಂದರಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಇದೇ ಮೊದಲ ಬಾರಿಗೆ ಹೈಕಮಾಂಡ್ ಸಮ್ಮುಖ ಕೆಪಿಸಿಸಿ ಅಧ್ಯಕ್ಷ ಹುದ್ದೆಯ ಬಯಕೆ ವ್ಯಕ್ತಪಡಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. 

ಹಾಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರ ಬದಲಾವಣೆ ಸಂದರ್ಭದಲ್ಲಿ ತಮ್ಮನ್ನು ಹುದ್ದೆಗೆ ಪರಿ ಗಣಿಸಬೇಕು ಎಂದು ಪ್ರಬಲ ಹಕ್ಕೊತ್ತಾಯವನ್ನು ಸತೀಶ್ ಹೈಕಮಾಂಡ್ ಮುಂದೆ ಮಂಡಿಸಿದ್ದಾರೆ. ಅಲ್ಲದೆ, ಪಕ್ಷದ 50ಕ್ಕೂ ಹೆಚ್ಚು ಶಾಸಕರು ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವಂತೆ ತಮ್ಮ ಮೇಲೆ ಒತ್ತಡ ನಿರ್ಮಾಣ ಮಾಡುತ್ತಿದ್ದು, ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬದಲಾವಣೆ ವೇಳೆ ತಮಗೆ ಅಧ್ಯಕ್ಷ ಹುದ್ದೆ ನೀಡುವಂತೆ ಹೈಕಮಾಂಡ್ ಅನ್ನು ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಸತೀಶ್‌ ಜಾರಕಿಹೊಳಿ ಸಿಎಂ ಆಗಲೆಂದು ಶಬರಿಮಲೆ ಅಯ್ಯಪ್ಪಸ್ವಾಮಿಗೆ ಹರಕೆ!

ಸೋಮವಾರ ತಡರಾತ್ರಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇ ವಾಲಾ ಅವರನ್ನು ಭೇಟಿ ಮಾಡಿ ಸುದೀರ್ಘ ಚರ್ಚೆ ನಡೆಸಿದ ಜಾರಕಿ ಹೊಳಿ ಅವರು ಈ ವೇಳೆ ಅಧ್ಯಕ್ಷ ಹುದ್ದೆಗೆ ತಮ್ಮನ್ನು ಪರಿಗಣಿಸು ವಂತೆ ಹೇಳಿದರು ಎನ್ನಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಹೊಸಬರನ್ನು ತರುವ ನಿರ್ಧಾರವನ್ನು ಹೈಕಮಾಂಡ್ ಮಾಡುವ ಸಂದರ್ಭದಲ್ಲಿ ಈ ಹುದ್ದೆಗೆ ತಮ್ಮನ್ನು ಪರಿಗಣಿಸಬೇಕು ಎಂದು ವಿಸ್ತ್ರತವಾಗಿ ಸುರ್ಜೇವಾಲಾ ಅವರಿಗೆ ಸತೀಶ್ ವಿವರಿಸಿದ್ದಾರೆ ಎಂದೂ ಮೂಲಗಳು ತಿಳಿಸಿವೆ. 

ಕಾಂಗ್ರೆಸ್‌ನಲ್ಲಿ ನಡೆದಿರುವ ರಾಜಕಾರಣ ತಿಳಿಗೊಳಿಸುವ ಉದ್ದೇಶದಿಂದಲೇ ಬೆಂಗಳೂರಿಗೆ ಆಗಮಿಸಿ ಪದಾಧಿಕಾರಿಗಳ ಸಭೆ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಿದ ರಣದೀಪ್ ಸಿಂಗ್ ಸುರ್ಜೇವಾಲಾ ಅವರುಮುಖ್ಯಮಂತ್ರಿ ಬದಲಾವಣೆ ಸೇರಿದಂತೆ ಕಾಂಗ್ರೆಸ್ ಪಕ್ಷಕ್ಕೆ ಸಂಬಂಧಿಸಿದ ಯಾವುದೇ ವಿಚಾರದ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ನಾಯಕರು ಹಾಗೂ ಶಾಸಕರಿಗೆ ತಾಕೀತು ಮಾಡಿದ್ದರು. ಇದಾದ ನಂತರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾ‌ರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ಪ್ರತ್ಯೇಕವಾಗಿ ಚರ್ಚಿಸಿದರು. ಈ ವೇಳೆಗೆ ತಡರಾತ್ರಿಯಾಗಿತ್ತು. ಇದಾದ ನಂತರ ಸತೀಶ್ ಜಾರಕಿಹೊಳಿ ಅವರು ಪ್ರತ್ಯೇಕವಾಗಿ ಸುರ್ಜೇವಾಲಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದು, ಈ ವೇಳೆ ಕೆಪಿಸಿಸಿ ಹುದ್ದೆಗೆ ತಮ್ಮ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. 

ಬಜೆಟ್‌ವರೆಗೂ ಯಾವ ಬೆಳವಣಿಗೆಯಿಲ್ಲ: 

ರಾಜ್ಯ ಕಾಂಗ್ರೆಸ್ ನ ವಿವಿಧ ಬಣಗಳು ಮುಖ್ಯಮಂತ್ರಿ ಹುದ್ದೆ ಹಾಗೂ ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಸಂಬಂಧಿಸಿದಂತೆ ಮೇಲಾಟ ನಡೆಸುತ್ತಿದ್ದರೂ ದೆಹಲಿ ಚುನಾವಣೆಯ ಬ್ಯುಸಿಯಲ್ಲಿರುವ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಬಜೆಟ್ ಮುಗಿಯುವವರೆಗೂ ಇಂತಹ ಯಾವುದೇ ಬೆಳವಣಿಗೆ ಬಗ್ಗೆ ಚಿಂತಿಸುವ ಮನಸ್ಥಿತಿ ಹೊಂದಿಲ್ಲ ಎನ್ನಲಾಗಿದೆ. ಇದು ರಾಜ್ಯ ಕಾಂಗ್ರೆಸ್ ನಾಯಕರಿಗೂ ಗೊತ್ತಿದೆ. ಹೀಗಾಗಿಯೇ ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಹೈಕಮಾಂಡ್ ಚಿಂತನೆ ನಡೆಸಿದರೆ ಆ ಸಂದರ್ಭದಲ್ಲಿ ತಮ್ಮನ್ನು ಸದರಿ ಹುದ್ದೆಗೆ ಪರಿಗಣಿಸಬೇಕು ಎಂಬ ಬೇಡಿಕೆಯನ್ನು ಇದೀಗ ಸತೀಶ್ ಜಾರಕಿಹೊಳಿ ಮಂಡಿಸಿದ್ದಾರೆ. 

ರಾಜ್ಯದಲ್ಲಿ ನಾಯಕ ಸಮುದಾಯದ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಲು ತಾವು ವಹಿಸಿದ ಪಾತ್ರ, ಪಕ್ಷ ಸಂಘಟನೆಯಲ್ಲಿ ತಮ್ಮ ಕೊಡುಗೆ ಹಾಗೂ ತಮಗಿರುವ ಶಾಸಕರ ಬೆಂಬಲದ ವಿವರವನ್ನು ಇದೇ ವೇಳೆ ಸುರ್ಜೇವಾಲಾ ಅವರಿಗೆ ನೀಡಿರುವ ಸತೀಶ್ ಜಾರಕಿಹೊಳಿ ಅವರು ಪಕ್ಷದ ಅಧ್ಯಕ್ಷ ಹುದ್ದೆಯನ್ನು ನೀಡಿದರೆ ಪಕ್ಷ ಸಂಘಟನೆಯನ್ನು ಸಮರ್ಥವಾಗಿ ಮುಂದುವರೆಸಿಕೊಂಡು ಹೋಗುವ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಸಿಎಂ ಸ್ಥಾನ ಹಂಚಿಕೆ ವಿಷಯ ಹೈಕಮಾಂಡ್ ಬಳಿ ಕೇಳಿ: ಸಚಿವ ಸತೀಶ್ ಜಾರಕಿಹೊಳಿ

ವಾಸ್ತವವಾಗಿ ಕೆಪಿಸಿಸಿ ಅಧ್ಯಕ್ಷ ಹುದ್ದೆ ಬದಲಾವಣೆ ಮಾಡುವ ಸಂದರ್ಭ ಎದುರಾದರೆ ಆಗಲಿಂಗಾಯತ ಸಮುದಾಯಕ್ಕೆ ಹುದ್ದೆ ನೀಡಬೇಕು ಎಂಬ ಚಿಂತನೆ ಪಕ್ಷದಲ್ಲಿತ್ತು. ಹೀಗಾಗಿ ಲಿಂಗಾಯತ ಸಮುದಾಯದ ಈಶ್ವರ್ ಖಂಡ್ರೆ ಅವರ ಹೆಸರು ಪ್ರಧಾನವಾಗಿ ಕೇಳಿ ಬರುತ್ತಿತ್ತು. ಇದೀಗ ಹಠಾತ್ ಆಗಿ ಸತೀಶ್ ಜಾರಕಿಹೊಳಿ ಅವರು ನೇರವಾಗಿ ಹುದ್ದೆ ಆಕಾಂಕ್ಷೆಯನ್ನು ಹೈಕಮಾಂಡ್ ಮುಂದೆ ನೇರವಾಗಿ ವ್ಯಕ್ತಪಡಿಸಿರುವುದು ಕುತೂಹಲ ಮೂಡಿಸಿದೆ.

ಸತೀಶ್ ಎಂಟ್ರಿಯಿಂದ ರೋಚಕ ತಿರುವು 

• ನನಗೇ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಸತೀಶ್ ವಾದ 
• ಅಧ್ಯಕ್ಷ ಆಗುವಂತೆ 50 ಶಾಸಕರಿಂದ ತಮಗೆ ಒತ್ತಡ ಇದೆ ಎಂದು ಹೇಳಿಕೆ 
• ಇದರಿಂದ ಲಿಂಗಾಯತರಿಗೆ ಪಟ್ಟ ಕಟ್ಟಲು ಮುಂದಾಗಿದ್ದ ಪಕ್ಷಕ್ಕೆ ಪೇಚು . ಆದರೆ ದಿಲ್ಲಿ ಚುನಾವಣೆ ಮುಗಿಯು ವವರೆಗೂ ಹೊಸ ನೇಮಕವಿಲ್ಲ 
• ರಾಜ್ಯ ಬಜೆಟ್‌ವರೆಗೂ ಅಧ್ಯಕ್ಷಗಿರಿ ಬದಲಾವಣೆಗೆ ಪಕ್ಷಕ್ಕೆ ಮನಸ್ಸಿಲ್ಲ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!
ವಿಧಾನಸಭೆಯಲ್ಲಿ 'ಉತ್ತರ ಕರ್ನಾಟಕ' ವಿವಾದ: ಶಿವಲಿಂಗೇಗೌಡರ ಮಾತುಗಳಿಗೆ ಗರಂ ಆದ ಯತ್ನಾಳ್, ಗ್ಯಾರಂಟಿ, ಗುಂಡಿ ವಿಚಾರಕ್ಕೆ ಜಟಾಪಟಿ!