ಬಡವರನ್ನು ಬಡವರಾಗಿಯೇ ಮಾಡುವುದೇ ಬಿಜೆಪಿ ಸಿದ್ಧಾಂತ: ಸತೀಶ್ ಜಾರಕಿಹೊಳಿ

Published : Apr 03, 2022, 11:22 PM IST
ಬಡವರನ್ನು ಬಡವರಾಗಿಯೇ ಮಾಡುವುದೇ ಬಿಜೆಪಿ ಸಿದ್ಧಾಂತ: ಸತೀಶ್ ಜಾರಕಿಹೊಳಿ

ಸಾರಾಂಶ

ಬಡವರನ್ನು ಬಡವರಾಗಿಯೇ ಮಾಡುವುದೇ ಬಿಜೆಪಿ ಸಿದ್ಧಾಂತವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು ಹೇಳಿದರು. ಗೋಕಾಕ ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಇರೊವರೆಗೂ ಬೆಲೆ ಏರಿಕೆ ಇದ್ದೇ ಇರುತ್ತದೆ. 

ಬೆಳಗಾವಿ (ಏ.03): ಬಡವರನ್ನು ಬಡವರಾಗಿಯೇ ಮಾಡುವುದೇ ಬಿಜೆಪಿ (BJP) ಸಿದ್ಧಾಂತವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ (Satish Jarkiholi) ಅವರು ಹೇಳಿದರು. ಗೋಕಾಕ ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಇರೊವರೆಗೂ ಬೆಲೆ ಏರಿಕೆ ಇದ್ದೇ ಇರುತ್ತದೆ. ಯಾಕೆಂದರೆ ಅವರ ಸಿದ್ಧಾಂತವೇ ಅದೇ ಆಗಿದೆ. ಎಲ್ಲರನ್ನೂ ತೊಂದರೆಯಲ್ಲಿ ಇಡಬೇಕು, ಬಡವರನ್ನು ಬಡವರಾಗಿ ಇರು​ವಂತೆ ನೋಡಿ​ಕೊ​ಳ್ಳು​ವು​ದು ಅವರ ಸಿದ್ಧಾಂತವಾಗಿದೆ ಎಂದು ಕಿಡಿಕಾರಿದರು. ಬಿಜೆಪಿ ಸರ್ಕಾರ ಪೆಟ್ರೋಲ್, ​ಡೀಸೆಲ್ ಸೇರಿದಂತೆ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದು, ಜನ ಸಾಮಾನ್ಯರಿಗೆ ತೊಂದರೆ ಆಗುತ್ತಿದೆ. ಆದರೆ ಜನರ ಸಮಸ್ಯೆಗೆ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸ್ಪಂದಿಸಲ್ಲ ಎಂದು ಆರೋಪಿಸಿದರು.

ಚುನಾ​ವಣೆ​ಗೆ ನಾವು ಸಿದ್ಧ: ಯಾವಾಗ ಚುನಾವಣೆ ಬಂದರೂ ನಾವು ಎದುರಿಸಲು ಸಿದ್ಧರಿದ್ದೇವೆ. ಸಿಎಂ ಅಭ್ಯರ್ಥಿ ಘೋಷಣೆ ಮಾಡೋದಿಲ್ಲ. ಸಾಮೂಹಿಕ ನಾಯಕತ್ವದಲ್ಲಿಯೇ ಚುನಾವಣೆ ಎದುರಿಸುತ್ತೇವೆ. ಚುನಾವಣೆ ಮಾಡಲು ನಾವು ತಯಾರಿದ್ದೇವೆ. ರಾಹುಲ್ ಗಾಂಧಿ (Rahul Gandhi) ಅವರು ಕೂಡ ಬಂದು ಹೋಗಿದ್ದಾರೆ. ಚುನಾವಣೆಗೆ ನಾವು ಏನು ತಯಾರಿ ಮಾಡಿದ್ದೇವೆ ಅದೆಲ್ಲವನ್ನು ಚರ್ಚೆ ಮಾಡಿದ್ದೇವೆ. ಯಾವಾಗ ಚುನಾವಣೆ ನಡೆದರೂ ಕೂಡ ನಮ್ಮ ಪಕ್ಷ ಸಿದ್ಧವಿದೆ. ಗುಜರಾತ ಚುನಾವಣೆ ಜೊತೆ, ಇಲ್ಲವೇ ಮೇ 23ಕ್ಕೆ ಚುನಾವಣೆ ನಡೆಯಬಹುದು ಎಂದರು.

Karnataka Politics: ಬಿಜೆಪಿಗೆ ಹೋದವರೆಲ್ಲ ವಾಪಸ್‌ ಕಾಂಗ್ರೆಸ್‌ಗೆ ಬರ್ತಾರಾ?: ಜಾರಕಿಹೊಳಿ ಹೇಳಿದ್ದಿಷ್ಟು

ಇನ್ನು ಅಭ್ಯರ್ಥಿಗಳನ್ನು ಬೇಗನೇ ಘೋಷಣೆ ಮಾಡಬೇಕು ಎಂದು ಪದೇ ಪದೇ ಒತ್ತಡ ಮಾಡುತ್ತಿದ್ದೇವೆ. ಪಕ್ಷ ಯಾವ ರೀತಿ ತೀರ್ಮಾನ ತೆಗೆದುಕೊಳ್ಳುತ್ತೆ ನೋಡಬೇಕಿದೆ. ಅದೇ ರೀತಿ ಕರ್ನಾಟಕದಲ್ಲಿ ಸಿಎಂ ಅಭ್ಯರ್ಥಿ ಘೋಷಣೆ ವಿಚಾರಕ್ಕೆ ಇಲ್ಲಿ ಆ ಪ್ರಶ್ನೆಯೇ ಉದ್ಬವಿಸೋದಿಲ್ಲ. ಯಾವಾಗಾಲೂ ಘೋಷಣೆ ಮಾಡಿಲ್ಲ. ಈಗಲೂ ಮಾಡೋದಿಲ್ಲ. ಸಾಮೂಹಿಕ ನಾಯಕತ್ವದಲ್ಲಿಯೇ ಚುನಾವಣೆ ಎದುರಿಸುತ್ತೇವೆ. ನಮ್ಮ ಕಾರ್ಯಕರ್ತರಿಗೆ ತರಬೇತಿ ಕಡ್ಡಾಯ ಮಾಡಿದ್ದೇವೆ. ತರಬೇತಿ ಇಲ್ಲದೇ ಇವತ್ತಿನ ಸನ್ನಿವೇಶ ಎದುರಿಸಲು ಕಷ್ಟವಾಗುತ್ತದೆ. ತರಬೇತಿ ಇದ್ದರೆ ನಾವು ಎಲ್ಲವನ್ನೂ ಸಮರ್ಥವಾಗಿ ಎದುರಿಸಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಿಜವಾಗ್ಲೂ ಡಿಕೆಶಿ, ಸಿದ್ದು ಮಧ್ಯೆ ಭಿನ್ನಾಭಿಪ್ರಾಯ ಇದ್ಯಾ: ರಾಜ್ಯದ ವಿಧಾನಸಭೆಗೆ 6 ತಿಂಗಳ ಮೊದಲೇ ಚುನಾವಣೆ ಬರುವ ಸಾಧ್ಯತೆ ಇದೆ. ಆ ನಿಟ್ಟಿನಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳನ್ನು ಚುನಾವಣೆಯ 6 ತಿಂಗಳ ಮೊದಲು ಘೋಷಣೆ ಮಾಡಬೇಕೆನ್ನುವ ಒತ್ತಡವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಚುನಾವಣೆ ಯಾವ ಸಂದರ್ಭದಲ್ಲಿ ಬಂದರು ಸಹ ಎದುರಿಸಲು ಪಕ್ಷ ಸಿದ್ಧವಾಗಿದೆ. ಅಭ್ಯರ್ಥಿಗಳನ್ನು ಬೇಗನೆ ಘೋಷಣೆ ಮಾಡಬೇಕೆನ್ನುವ ಒತ್ತಡವು ಸಹ ಇರುವುದರಿಂದ ಪಕ್ಷ ಈ ನಿಟ್ಟಿನಲ್ಲಿ ಯೋಚಿಸಲಿದೆ ಎಂದರು.

ಸಿಎಂ ಮಾಡುವಾಗಲೇ 6 ತಿಂಗ್ಳು ಷರತ್ತು ಹಾಕಿ ಪ್ರಮಾಣವಚನಕ್ಕೆ ಅವಕಾಶ, ಜಾರಕಿಹೊಳಿ ಬಾಂಬ್

ಪಕ್ಷದಲ್ಲಿ ಡಿ.ಕೆ.ಶಿವಕುಮಾರ (DK Shivakumar), ಸಿದ್ದರಾಮಯ್ಯ (Siddaramaiah) ಅವರ ನಡುವೆ ಯಾವ ಭಿನ್ನಾಭಿಪ್ರಾಯಗಳು ಇಲ್ಲ. ಯಾರು ಸಹ ಪಕ್ಷವನ್ನು ಬಿಟ್ಟು ಹೋಗುವ ವಿಚಾರ ಸಹ ಇಲ್ಲ. ಎಲ್ಲರೂ ಒಗ್ಗಟ್ಟಾಗಿ ಪಕ್ಷವನ್ನು ಮುನ್ನಡೆಸುತ್ತೇವೆ ಎಂದು ತಿಳಿಸಿದರು. ಹಿಜಾಬ್‌ (Hijab) ಸಂಬಂಧದ ವಿಷಯದಲ್ಲಿ ಮಾತನಾಡುವ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಹಿಂದೂ ಸ್ವಾಮೀಜಿಗಳು ಸಹ ತಲೆ ಮೇಲೆ ಬಟ್ಟೆ ಹಾಕುತ್ತಾರೆ ಎಂಬ ಹೇಳಿಕೆ ಕುರಿತು ನನಗೆ ಗೊತ್ತಿಲ್ಲ. ನನಗೆ ಗೊತ್ತಿರುವ ವಿಷಯದ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ. ಯಾವ ರೀತಿಯಿಂದ ಅವರು ಹೇಳಿದ್ದಾರೆ ಎಂಬುವುದು ಗೊತ್ತಿಲ್ಲ. ಹೀಗಾಗಿ ಏನು ಪ್ರತಿಕ್ರಿಯಿಸುವುದಿಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ
Karnataka News Live: ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ - ಸಿಎಂ ಡಿಸಿಎಂ