ನೂತನ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಅಷ್ಟೇ ಅಲ್ಲ, ಮುಂದೆ ಮುಖ್ಯಮಂತ್ರಿ ಕೂಡ ಆಗುವ ಎಲ್ಲ ಅರ್ಹತೆ ಇದೆ. ಅದಕ್ಕೆ ಕಾಲ ಕೂಡಿ ಬರಬೇಕು ಅಷ್ಟೆಎಂದು ನೂತನ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಬೆಳಗಾವಿ (ಮೇ.29): ನೂತನ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಅಷ್ಟೇ ಅಲ್ಲ, ಮುಂದೆ ಮುಖ್ಯಮಂತ್ರಿ ಕೂಡ ಆಗುವ ಎಲ್ಲ ಅರ್ಹತೆ ಇದೆ. ಅದಕ್ಕೆ ಕಾಲ ಕೂಡಿ ಬರಬೇಕು ಅಷ್ಟೆಎಂದು ನೂತನ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಸಚಿವರಾಗಿ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿದ ವೇಳೆ ಭಾನುವಾರ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಸತೀಶ್ ಜಾರಕಿಹೊಳಿ ಅವರಿಗೆ ಇಂದಲ್ಲ, ನಾಳೆ ಸತೀಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ ಎಂದರು. ಅಂಗನವಾಡಿ ಕಾರ್ಯಕರ್ತೆಯರಿಗೆ 10 ಸಾವಿರ ವೇತನ ಹೆಚ್ಚಳ ಹೇಳಿಕೆಗೆ ಪ್ರತಿಕ್ರಿಯಿಸಿ, ಮೊದಲನೆಯದಾಗಿ ಅಧಿಕೃತವಾಗಿ ಖಾತೆ ಹಂಚಿಕೆ ಆಗಬೇಕು. ಇಲಾಖಾವಾರು ಅಧಿಕಾರ ತೆಗೆದುಕೊಂಡು ಸಭೆ ಮಾಡಬೇಕು. ನಾವೇನು ವಾಗ್ದಾನ ಮಾಡಿದ್ದೇವೆ, ಅವುಗಳನ್ನು ಸಂಪೂರ್ಣ ಮಾಡಲು ಪ್ರಯತ್ನಿಸುತ್ತೇವೆ ಎಂದರು.
ಅಯೋಧ್ಯೆ ರಾಮ ವಿಗ್ರಹ ಕೆತ್ತನೆಗೆ ರಾಜ್ಯದ ಇಬ್ಬರು: ಏಕಕಾಲಕ್ಕೆ 3 ಪ್ರತಿಮೆಗಳು ಸಿದ್ಧ
ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ: ಕಾಂಗ್ರೆಸ್ ಪಕ್ಷ ಭರವಸೆ ನೀಡಿದಂತೆ ಗ್ಯಾರಂಟಿ ಯೋಜನೆಗಳನ್ನು ಮೊದಲು ಜಾರಿಗೆ ತರುವ ಮೂಲಕ ವಿಶೇಷವಾಗಿ ಮಹಿಳೆಯರಿಗೆ ನೆಮ್ಮದಿಯ ಜೀವನ ಕಲ್ಪಿಸಿಕೊಡುವುದಾಗಿ ನೂತನ ಸಚಿವೆ ಲಕ್ಷ್ಮೇ ಹೆಬ್ಬಾಳಕರ ಭರವಸೆ ನೀಡಿದರು. ಸಚಿವೆಯಾಗಿ ಬೆಳಗಾವಿಗೆ ಮೊದಲ ಭಾರಿಗೆ ಆಗಮಿಸಿದ ಲಕ್ಷ್ಮೇ ಹೆಬ್ಬಾಳಕರ ಅವರನ್ನು ಅವರ ಗೃಹ ಕಚೇರಿಯಲ್ಲಿ ಗ್ರಾಮೀಣ ಕ್ಷೇತ್ರದ ವಿವಿಧ ಮಹಿಳಾ ಸಂಘಟನೆಗಳ ವತಿಯಿಂದ ಭಾನುವಾರ ಸನ್ಮಾನಿಸಲಾಯಿತು.
ಈ ವೇಳೆ ಮಾತನಾಡಿದ ಅವರು, ಉಚಿತ ಬಸ್ ಪ್ರಯಾಣ, ತಿಂಗಳಿಗೆ . 2 ಸಾವಿರ, ಉಚಿತ್ ವಿದ್ಯುತ್ ಮೊದಲಾದ ಯೋಜನೆಗಳಿಂದ ಮಹಿಳೆಯರಿಗೆ ನೆಮ್ಮದಿಯ ಜೀವನ ಲಭಿಸಲಿದೆ. ಅದನ್ನು ಮೊದಲ ಆದ್ಯತೆಯ ಮೇಲೆ ಜಾರಿಗೊಳಿಸಲಾಗುವುದು. ನಂತರದಲ್ಲಿ ಜಿಲ್ಲೆಗೆ ಮತ್ತು ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತರುತ್ತೇನೆ ಎಂದು ಅವರು ಭರವಸೆ ನೀಡಿದರು. ನಾನು ಇಡೀ ಗ್ರಾಮೀಣ ಕ್ಷೇತ್ರದ ಮನೆ ಮಗಳು. ಇಡೀ ಕ್ಷೇತ್ರದ ಜನರ ಆಶಿರ್ವಾದದಿಂದಾಗಿ ನಾನು ಮಂತ್ರಿಯಾಗಿದ್ದೇನೆ. ನಿಮ್ಮೆಲ್ಲರ ಪ್ರೀತಿ, ವಿಶ್ವಾಸಕ್ಕೆ ನಾನು ಸದಾ ಋುಣಿಯಾಗಿರುತ್ತೇನೆ ಎಂದು ಹೆಬ್ಬಾಳ್ಕರ ತಿಳಿಸಿದರು.
ಜೀವನಾಂಶ ವಿಚಾರಣೆ ವೇಳೆ ಮದುವೆ ಸಿಂಧುತ್ವ ನಿಷ್ಕರ್ಷೆ ಸಲ್ಲ: ಹೈಕೋರ್ಟ್ ಮಹತ್ವದ ಆದೇಶ
ಇದಕ್ಕೂ ಮೊದಲು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಕಾರ್ಯಕರ್ತರು ಅವರನ್ನು ಅದ್ಧೂರಿಯಾಗಿ ಸ್ವಾಗತಿಸಿದರು. ಅಲ್ಲಿಂದ ಸುಳೇಬಾವಿಗೆ ತೆರಳಿ ಮಹಾಲಕ್ಷ್ಮೀಯ ದರ್ಶನ, ಆಶಿರ್ವಾದಪಡೆದರು. ನಂತರ ಹಿಂಡಲಗಾ ಗಣಪತಿ ದರ್ಶನ ಪಡೆದು, ರಾಜಹಂಸಗಡಕ್ಕೆ ತೆರಳಿ ಛತ್ರಪತಿ ಶಿವಾಜಿ ಮಹಾರಾಜರ ಪಾದಕ್ಕೆ ನಮಸ್ಕರಿಸಿದರು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಹಲವಾರು ಮುಖಂಡರು ಜತೆಗಿದ್ದರು.