ಬೈ ಎಲೆಕ್ಷನ್ ಸಮರ : ಅತ್ತ ಡಿಕೆಶಿಗೆ ಜಾಮೀನು: ಇತ್ತ ಕಾಂಗ್ರೆಸ್‌ಗೆ ಹಿನ್ನಡೆ

By Web DeskFirst Published Oct 23, 2019, 2:53 PM IST
Highlights

ಬೈ ಎಲೆಕ್ಷನ್‌ ಸಂಬಂಧ ತಕ್ಷಣ ನೀತಿ ನೀತಿ ಸಂಹಿತೆ ಜಾರಿ ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದ ಕರ್ನಾಟಕ ಕಾಂಗ್ರೆಸ್‌ಗೆ ಹಿನ್ನಡೆಯಾಗಿದ್ದು, ಚುನಾವಣೆ ಆಯೋಗಕ್ಕೆ ಆರಂಭಿಕ ಮುನ್ನಡೆ ಸಿಕ್ಕಿದೆ.

ನವದೆಹಲಿ/ಬೆಂಗಳೂರು, (ಅ.23): ರಾಜ್ಯದ 15 ಕ್ಷೇತ್ರಗಳಿಗೆ ಉಪ ಚುನಾವಣೆಯ ನೀತಿ ಸಂಹಿತೆ ಜಾರಿ ಪ್ರಶ್ನಿಸಿದ್ದ ಕಾಂಗ್ರೆಸ್‌ಗೆ ಸುಪ್ರೀಂ ಕೋರ್ಟ್‌ ಶಾಕ್ ನೀಡಿದೆ.

ಡಿಕೆಶಿಗೆ ಬಿಗ್ ರಿಲೀಫ್: ಕೊನೆಗೂ ತಿಹಾರ್ ಜೈಲಿನಿಂದ ಹೊರಕ್ಕೆ

ನೀತಿ ಸಂಹಿತೆ ಜಾರಿ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ನಡೆಸದಂತೆ ಕರ್ನಾಟಕ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಸೂಚಿಸಿ ಇಂದು (ಬುಧವಾರ) ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಕಾಂಗ್ರೆಸ್‌ಗೆ ಹಿನ್ನಡೆಯಾಗಿದ್ದು, ಚುನಾವಣೆ ಆಯೋಗಕ್ಕೆ ಆರಂಭಿಕವಾಗಿ ಮುನ್ನಡೆ ಸಿಕ್ಕಿದೆ.

15 ಕ್ಷೇತ್ರಗಳಿಗೆ ಉಪ ಚುನಾವಣೆ: ಪೆಂಡಿಂಗ್ ಇದ್ದ ಮತ ಎಣಿಕೆ ದಿನಾಂಕ ಪ್ರಕಟ

ಕೆಲವು ದಿನಗಳ ಹಿಂದೆ ಚುನಾವಣಾ ಆಯೋಗ ಉಪಚುನಾವಣೆಗೆ ಮುಹೂರ್ತ ನಿಗದಿಪಡಿಸಿತ್ತು. ಡಿಸೆಂಬರ್ 5ರಂದು ಮತದಾನ ನಡೆಯಲಿದ್ದು, ಡಿ.9ಕ್ಕೆ ಮತ ಎಣಿಕೆ ಎಂದು ಚುನಾವಣೆ ಆಯೋಗ ಅಧಿಸೂಚನೆ ಹೊರಡಿಸಿತ್ತು. ಆದರೆ ವಿಚಿತ್ರ ಬೆಳವಣಿಗೆಯಲ್ಲಿ ನವೆಂಬರ್‌ 11ರಿಂದ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ಹೇಳಿತ್ತು. 

ಇದರಿಂದ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ತಕ್ಷಣದಿಂದ ನೀತಿ ಸಂಹಿತೆ ಜಾರಿಗೊಳಿಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಪತ್ರ ನೀಡಿತ್ತು. ಅಷ್ಟೇ ಅಲ್ಲದೇ ಈ ಬಗ್ಗೆ ಹೈಕೋರ್ಟ್ ಮೆಟ್ಟಿಲೇರಿತ್ತು.

ಹೊಸ ಉಪ ಚುನಾವಣೆ ವೇಳಾಪಟ್ಟಿ 
ನವೆಂಬರ್ 11 : ನಾಮಪತ್ರ ಸಲ್ಲಿಕೆ ಆರಂಭ
ನವೆಂಬರ್ 18 ನಾಮಪತ್ರ ಸಲ್ಲಿಕೆಗೆ ಕೊನೆ ದಿನ,
ನವೆಂಬರ್ 19 ನಾಮಪತ್ರಗಳ ಪರಿಶೀಲನೆ
 ನವೆಂಬರ್ 21 ನಾಮಪತ್ರ ವಾಪಸ್ ಪಡೆಯಲು ಕೊನೆ ದಿನ
 ಡಿಸೆಂಬರ್ 5 ಮತದಾನ (7 ಗಂಟೆಯಿಂದ 6)
 ಡಿಸೆಂಬರ್ 9 ಮತ ಎಣಿಕೆ.

ಉಪಚುನಾವಣೆ ನಡೆಯಲಿರುವ ಕ್ಷೇತ್ರಗಳು
1) ಚಿಕ್ಕಬಳ್ಳಾಪುರ 2) ಮಹಾಲಕ್ಷ್ಮಿ ಲೇಔಟ್ 3) ಹೊಸಕೋಟೆ 4) ಹುಣಸೂರು 5) ಗೋಕಾಕ್, 6) ಯಶವಂತಪುರ 7) ಅಥಣಿ 8) ಕಾಗವಾಡ 9)ಶಿವಾಜಿನಗರ 10) ಕೆ.ಆರ್.ಪೇಟೆ 11) ಕೆ.ಆರ್.ಪುರಂ 12) ಹಿರೇಕೆರೂರು 13) ರಾಣೆಬೆನ್ನೂರು 14) ವಿಜಯನಗರ 15) ಯಲ್ಲಾಪುರ

click me!