ಬಿಜೆಪಿ ಭದ್ರಕೋಟೆಯಾಗಿದ್ದ ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಹಾಲಿ ಸಂಸದರಾಗಿದ್ದ ಅಣ್ಣಾಸಾಹೇಬ ಜೊಲ್ಲೆ ವಿರುದ್ಧ ಸಚಿವ ಸತೀಶ ಜಾರಕಿಹೊಳಿ ಪುತ್ರಿ, ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಮೊದಲ ಬಾರಿಗೆ ಲೋಕಸಭೆ ಪ್ರವೇಶಿಸಿದ್ದಾರೆ.
ಬೆಳಗಾವಿ(ಜೂ.06): ಗೋಕಾಕದ ಜಾರಕಿಹೊಳಿ ಕುಟುಂಬದ ಕುಡಿ, ಸಚಿವ ಸತೀಶ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಈಗ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗುವ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ.
ಜಾರಕಿಹೊಳಿ ಕುಟುಂಬ ರಾಜ್ಯ ರಾಜಕಾರಣದ ಮೇಲೆ ಬಿಗಿ ಹಿಡಿದ ಹೊಂದಿದೆ. ರಾಜ್ಯದಲ್ಲಿ ಯಾವುದೇ ಸರ್ಕಾರ ಬಂದರೂ ಅದರಲ್ಲಿ ಜಾರಕಿಹೊಳಿ ಕುಟುಂಬದ ಸದಸ್ಯರೊಬ್ಬರು ಸಚಿವರಾಗುತ್ತಲೇ ಬಂದಿದ್ದಾರೆ. ಸದ್ಯ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸತೀಶ ಜಾರಕಿಹೊಳಿ ಅವರು ಲೋಕೋಪಯೋಗಿ ಸಚಿವರಾಗಿದ್ದಾರೆ. ಗೋಕಾಕ ಶಾಸಕ ರಮೇಶ ಜಾರಕಿಹೊಳಿ, ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಗೂ ಡಾ.ಭೀಮಶಿ ಜಾರಕಿಹೊಳಿ ಬಿಜೆಪಿಯಲ್ಲಿದ್ದಾರೆ. ಲಖನ್ ಜಾರಕಿಹೊಳಿ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಹೀಗೆ ರಾಜಕಾರಣದಲ್ಲಿ ಜಾರಕಿಹೊಳಿ ಕುಟುಂಬ ಹಿಡಿತ ಸಾಧಿಸುತ್ತ ಬಂದಿದೆ. ಈವರೆಗೂ ರಾಜ್ಯ ರಾಜಕಾರಣಕ್ಕೆ ಮಾತ್ರ ಸೀಮಿತವಾಗಿದ್ದ ಜಾರಕಿಹೊಳ ಕುಟುಂಬ ಇದೀಗ ರಾಷ್ಟ್ರ ರಾಜಕಾರಣದ ಮೇಲೆ ಹಿಡಿತ ಸಾಧಿಸಿದೆ.
5 ಲಕ್ಷ ಲಿಂಗಾಯತರಿದ್ದರೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಸೋಲು: ಸತೀಶ್ ಜಾರಕಿಹೊಳಿ
ಬಿಜೆಪಿ ಭದ್ರಕೋಟೆಯಾಗಿದ್ದ ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಹಾಲಿ ಸಂಸದರಾಗಿದ್ದ ಅಣ್ಣಾಸಾಹೇಬ ಜೊಲ್ಲೆ ವಿರುದ್ಧ ಸಚಿವ ಸತೀಶ ಜಾರಕಿಹೊಳಿ ಪುತ್ರಿ, ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಮೊದಲ ಬಾರಿಗೆ ಲೋಕಸಭೆ ಪ್ರವೇಶಿಸಿದ್ದಾರೆ.
ಪ್ರಧಾನಿ ಮೋದಿ ಅಲೆಯ ನಡುವೆಯೂ ಚಿಕ್ಕೋಡಿ ಮತದಾರ ಪ್ರಭುಗಳು ಜಾರಕಿಹೊಳಿ ಕುಟುಂಬಕ್ಕೆ ಜೈ ಎಂದಿದ್ದಾರೆ. ತಂದೆ ಸಚಿವ ಸತೀಶ ಜಾರಕಿಹೊಳಿ ಪುತ್ರ ರಾಹುಲ್ ಜಾರಕಿಹೊಳಿ ಹಾಗೂ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಹಗಲಿರುಳು ಕ್ಷೇತ್ರದಲ್ಲಿ ಗೆಲುವಿಗಾಗಿ ಶ್ರಮಿಸಿದ್ದರು. ಅಲ್ಲದೇ, ಸಾಮಾನ್ಯ ಮೀಸಲು ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲ್ಲುವುದೇ ಕಷ್ಟ ಎನ್ನುತ್ತಿದ್ದವರಿಗೆ ಜಾತಿಗಿಂತ ವ್ಯಕ್ತಿ ಮುಖ್ಯ ಎನ್ನುವ ಸಂದೇಶವನ್ನು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಜನರು ಸಾರಿದ್ದಾರೆ. ಗೋಕಾಕ ಮತ್ತು ಅರಬಾವಿ ಸಾಮಾನ್ಯ ಕ್ಷೇತ್ರದಿಂದ ರಮೇಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಸತತವಾಗಿ ಆಯ್ಕೆ ಆಗುತ್ತ ಬಂದಿದ್ದಾರೆ.
ಕಿರಿಯ ವಯಸ್ಸಿನ ಸಂಸದೆ ಪ್ರಿಯಾಂಕಾ
27 ವರ್ಷ ವಯಸ್ಸಿನ ಕಾಂಗ್ರೆಸ್‌ನ ಪ್ರಿಯಾಂಕಾ ಜಾರಕಿಹೊಳಿ ಅವರು ಕಿರಿಯ ವಯಸ್ಸಿನ ಸಂಸದೆಯಾಗಿ ಆಯ್ಕೆಯಾಗುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಚುನಾವಣೆಯಲ್ಲಿ ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿದ್ದರೂ, ಕೇವಲ 27ನೇ ವಯಸ್ಸಿನಲ್ಲಿ, ಅವರು ಚಿಕ್ಕೋಡಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ್ ಜೊಲ್ಲೆ ಅವರನ್ನು ಸೋಲಿಸಿ ಭಾರತದಲ್ಲಿ ಅತಿ ಕಿರಿಯ ಸಂಸದೆ ಎಂಬ ಕೀರ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.