ಎಸ್ಸಿ, ಎಸ್ಟಿ ಜನರಿಗೆ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಅವರ ಬದುಕಿಗೆ ನೇರ ಪ್ರಯೋಜನ ಆಗುತ್ತಿರುವ ಹಿನ್ನೆಲೆಯಲ್ಲಿ ನಿಯಮಾವಳಿಗಳ ಅಡಿಯಲ್ಲೇ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಕಾಯ್ದೆಯಡಿ ಭಾಗಶಃ ಅನುದಾನವನ್ನು ನೀಡಲಾಗಿದೆ.
ಮೈಸೂರು (ಆ.05): ಎಸ್ಸಿ, ಎಸ್ಟಿ ಜನರಿಗೆ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಅವರ ಬದುಕಿಗೆ ನೇರ ಪ್ರಯೋಜನ ಆಗುತ್ತಿರುವ ಹಿನ್ನೆಲೆಯಲ್ಲಿ ನಿಯಮಾವಳಿಗಳ ಅಡಿಯಲ್ಲೇ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಕಾಯ್ದೆಯಡಿ ಭಾಗಶಃ ಅನುದಾನವನ್ನು ನೀಡಲಾಗಿದ್ದು, ಇಲ್ಲಿ ಎಲ್ಲಿಯೂ ಕಾಯ್ದೆಯ ನಿಯಮಾವಳಿಗಳನ್ನು ಮೀರಿಲ್ಲ ಮತ್ತು ಅದರ ಆಶಯಗಳಿಗೆ ಧಕ್ಕೆ ಆಗುವಂತೆ ನಡೆದುಕೊಂಡಿಲ್ಲ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಈ ಹಿಂದಿನ ಅವಧಿಯ ಕಾಂಗ್ರೆಸ್ ಸರ್ಕಾರದಲ್ಲಿ ಎಸ್ಸಿ, ಎಸ್ಟಿಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಹಂಚಿಕೆ ಮಾಡುವ ಉದ್ದೇಶದಿಂದ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಕಾಯ್ದೆ ಅನುಷ್ಠಾನಕ್ಕೆ ತಂದು, ಸಮುದಾಯದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿ ಎಸ್ಸಿ, ಎಸ್ಟಿಸಮುದಾಯದ ಅಭಿವೃದ್ಧಿಗೆ ಸರ್ಕಾರವು ಹಲವಾರು ಕಾರ್ಯಕ್ರಮ ಅನುಷ್ಟಾನ ಮಾಡುತ್ತಿದ್ದು, ಅದರಿಂದ ಸಾವಿರಾರು ಜನರು ಅನುಕೂಲವನ್ನು ಪಡೆದಿರುತ್ತಾರೆ ಎಂಬುದು ಈ ಕಾಯ್ದೆಯು ಉಂಟುಮಾಡಿದ ಮಹತ್ತರ ಪರಿಣಾಮಗಳಲ್ಲಿ ಒಂದಾಗಿದೆ ಎಂದಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆ: ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಆಪರೇಷನ್ ಹಸ್ತ!
ಈ ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆಯಲ್ಲಿ 2023-24ನೇ ಸಾಲಿನಲ್ಲಿ ಒಟ್ಟಾರೆ .34294 ಕೋಟಿ ಅನುದಾನವನ್ನು ಒದಗಿಸಲಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿಯ ಅನುದಾನದ ಪ್ರಮಾಣವು ಶೇ.13 ಅಂದರೆ ಸುಮಾರು .4031 ಕೋಟಿ ಹೆಚ್ಚಳವಾಗಿದೆ. ನಮ್ಮ ಸರ್ಕಾರವು ಎಸ್ಸಿ, ಎಸ್ಟಿಸಮಗ್ರ ಅಭಿವೃದ್ಧಿಗೆ ಬದ್ಧವಾಗಿದ್ದು, ಇದಕ್ಕೆ ಪೂರಕವಾಗಿ ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆ 2013ರ ಸೆಕ್ಷನ್ 7(ಡಿ) ಯನ್ನು ಕೈಬಿಡಬೇಕೆಂಬ ಸಮುದಾಯಗಳ ಬೇಡಿಕೆಗೆ ಸ್ಪಂದಿಸಿ 7(ಡಿ) ಅನ್ನು ರದ್ದುಪಡಿಸುವ ಕೆಲಸವನ್ನು ಮಾಡಿದೆ ಎಂದು ತಿಳಿಸಿದ್ದಾರೆ.
ಇಷ್ಟೇ ಅಲ್ಲದೇ ಎಸ್ಸಿ, ಎಸ್ಟಿಗುತ್ತಿಗೆದಾರಿಗೆ ನೀಡುತ್ತಿದ್ದ .50 ಲಕ್ಷ ಗುತ್ತಿಗೆ ಮೊತ್ತದ ಪ್ರಮಾಣವನ್ನು .1 ಕೋಟಿಗೆ ಏರಿಸಿದೆ. ಇದರೊಂದಿಗೆ ಪಿಟಿಸಿಎಲ್ ಕಾಯ್ದೆಗೆ ಇದ್ದ ಕಾಲಮಿತಿಯನ್ನು ರದ್ದುಪಡಿಸುವ ಮೂಲಕ ಚುನಾವಣೆಗೂ ಮುನ್ನವೇ ಭರವಸೆ ನೀಡಿದಂತೆ ನಮ್ಮ ಸರ್ಕಾರವು ನಡೆದುಕೊಂಡಿದೆ ಎಂದು ಹೇಳಿದ್ದಾರೆ. ಈ ಬಾರಿಯ ಆಯವ್ಯಯದಲ್ಲಿ 7(ಡಿ) ಅನ್ನು ರದ್ದು ಮಾಡಿದ ನಂತರದಲ್ಲಿ 2022- 23ನೇ ಸಾಲಿನಲ್ಲಿ ಎಸ್‌ಸಿಎಸ್‌ಪಿ, ಟಿಎಸ್‌ಪಿ ಅಡಿ ವಿವಿಧ ಇಲಾಖೆಗಳಿಗೆ ಡೀಮ್‌್ಡ ವೆಚ್ಚ ಸೇರಿ ಹಂಚಿಕೆ ಮಾಡಲಾಗಿದ್ದ .7450 ಕೋಟಿಯು 2023- 24ನೇ ಸಾಲಿನಲ್ಲಿ ಸುಮಾರು .2787 ಕೋಟಿಗೆ ಇಳಿಕೆಯಾಗಿದೆ. ಪ್ರಸಕ್ತ ಸಾಲಿನಲ್ಲಿ ಈ ಡೀಮ್‌್ಡ ಹಂಚಿಕೆಯನ್ನು ರದ್ದುಪಡಿಸಿರುವ ಕಾರಣ ಸರ್ಕಾರದ ವಿವಿಧ ಇಲಾಖೆಗಳಿಗೆ ನೀಡುತ್ತಿದ್ದ ಅನುದಾನದ ಪ್ರಮಾಣವನ್ನು ಕಡಿತಗೊಳಿಸಿ ಅದನ್ನು ಫಲಾನುಭವಿ ಆಧಾರಿತ ಕಾರ್ಯಕ್ರಮಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಎಸ್ಸಿ, ಎಸ್ಟಿಏಳಿಗೆಗಾಗಿ ನಮ್ಮ ಸರ್ಕಾರವು ಈ ಹಿಂದೆ ನುಡಿದಂತೆಯೇ ನಡೆದುಕೊಂಡಿದ್ದು, ಶೋಷಿತ ಸಮುದಾಯಗಳ ಮೇಲೆ ನಮಗಿರುವುದು ಕರುಣೆ ಮಾತ್ರವಲ್ಲ ಜವಾಬ್ದಾರಿ ಎಂಬ ಸಂದೇಶವನ್ನೂ ಸ್ಪಷ್ಟವಾಗಿಯೇ ನೀಡಿದ್ದೇವೆ. ಹೀಗಿದ್ದರೂ ಈ ಹಿಂದೆ ಎಸ್ಸಿ, ಎಸ್ಟಿಗೆ ಮೀಸಲಾಗಿದ್ದ ಹಣವನ್ನು ಈ ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರವು ಕಾಯ್ದೆಯ ಆಶಯಕ್ಕೆ ವಿರುದ್ಧವಾಗಿ ಬೇರೆ ಬೇರೆ ಕಾಮಗಾರಿಗಳಿಗೆ ಬಳಸಿಕೊಂಡಿತ್ತು. ಇಂತಹ ಪಕ್ಷದ ನಾಯಕರು ಈ ದಿನ ಎಸ್ಸಿ, ಎಸ್ಟಿಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿರುವ ನಮ್ಮ ಸರ್ಕಾರದ ಬಗ್ಗೆ ಟೀಕಿಸುತ್ತಿರುವುದು ವಿಪರ್ಯಾಸದ ಸಂಗತಿ. ನೈತಿಕತೆ ಇಲ್ಲದೇ ಮಾತನಾಡುತ್ತಿರುವ ಇವರ ಮಾತುಗಳು ಸರಿಯಲ್ಲ ಎಂದು ಅವರು ತೀವ್ರವಾಗಿ ಖಂಡಿಸಿದ್ದಾರೆ.
ಗ್ಯಾರಂಟಿಗಳು ಸಿಂಗಾಪುರದಲ್ಲಿ ಕುಳಿತವರ ತಲೆ ಕೆಡಿಸ್ತಿವೆ: ಎಚ್‌ಡಿಕೆಗೆ ಶಾಸಕ ಬಾಲಕೃಷ್ಣ ಟಾಂಗ್
ಎಸ್‌ಸಿಎಸ್‌ಪಿ, ಟಿಎಸ್‌ಪಿ ಅಧಿನಿಯಮ 2103ರ ಅನ್ವಯ ಎಸ್ಸಿ, ಎಸ್ಟಿಗೆ ನೇರವಾಗಿ ಪ್ರಯೋಜನವಾಗುವ ವೈಯಕ್ತಿಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ ಹಂಚಿಕೆ ಮಾಡಲು ಅವಕಾಶವಿದ್ದು, ಈ ನಿಯಮದ ಅಡಿಯಲ್ಲಿ ಅನುಸೂಚಿತ ಜಾತಿ ಉಪ ಯೋಜನೆಗಳು ಹಾಗೂ ಬುಡಕಟ್ಟು ಉಪ ಯೋಜನೆಗಳ ಅಡಿಯಲ್ಲಿ ಇತರೆ ಸಮುದಾಯಗಳೊಂದಿಗೆ ಎಸ್ಸಿ, ಎಸ್ಟಿವ್ಯಕ್ತಿಗಳು ಮತ್ತು ಕುಟುಂಬಗಳಿಗೆ ಪ್ರಯೋಜನ ಒದಗಿಸುವ ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಮುಂತಾದ ಸಾಮಾನ್ಯ ಸಾಮಾಜಿಕ ವಲಯದ ಯೋಜನೆಗಳನ್ನು ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆಯಡಿ ಸೇರಿಸಲು ಅವಕಾಶ ಇರುತ್ತದೆ. ಅದರಂತೆಯೇ ಕಳೆದ 10 ವರ್ಷಗಳಿಂದ ಸರ್ಕಾರದ ವಿವಿಧ ಇಲಾಖೆಗಳಿಗೆ ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನವನ್ನು ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.