
ಬೆಂಗಳೂರು (ಮಾ.01): ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ 2023ರ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಸೋಶಿಯಲ್ ಡೆಮೋಕ್ರ್ಯಾಟಿಕ್ ಪಾರ್ಟಿ ಆಫ್ ಇಂಡಿಯಾ (SDPI)ದಿಂದ ಸ್ಪರ್ಧೆ ಮಾಡುವ 2ನೇ ಪಟ್ಟಿಯನ್ನು ಎಸ್‌ಡಿಪಿಐ ಅಧ್ಯಕ್ಷರು ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆಯ ಆರೋಪಿ ಶಫಿ ಬೆಳ್ಳಾರೆ ಅವರಿಗೆ ಟಿಕೆಟ್ ನೀಡಲಾಗುತ್ತಿದೆ.
ಈ ಹಿಂದೆ ಜನವರಿ ತಿಂಗಳಲ್ಲಿ ಮೊದಲ ಪಟ್ಟಿಯಲ್ಲಿ ಒಟ್ಟು 10 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಆದರೆ, ಇಂದು ಎರಡನೇ ಪಟ್ಟಿಯಲ್ಲಿ ಒಟ್ಟು 9 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇಂದಿನ ಒಂಭತ್ತು ಅಭ್ಯರ್ಥಿಗಳ ಪಟ್ಟಿಯಲ್ಲಿ ಇಬ್ಬರು ಹಿಂದೂ ಧರ್ಮೀಯರಿಗೆ ಟಿಕೆಟ್ ಹಂಚಿಕೆ ಮಾಡಲಾಗಿದೆ. ಒಟ್ಟು 43 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಖಚಿತವಾಗಿದೆ ಎಂದು ಈ ಹಿಂದೆ ಹೇಳಿಕೆ ನೀಡಿದ್ದು, ಮತ್ತೊಂದು ಪಟ್ಟಿಯಲ್ಲಿ ಉಳಿದವರ ಹೆಸರನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ.
ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗೆ SDPI ಟಿಕೆಟ್: ಸಚಿವ ಆರ್.ಅಶೋಕ್ ಆಕ್ರೋಶ
2023 ಕರ್ನಾಟಕ ವಿಧಾನಸಭಾ ಚುನಾವಣೆ SDPI ಆಭ್ಯರ್ಥಿಗಳ 2ನೇ ಪಟ್ಟಿಯ ವಿವರ ಇಲ್ಲಿದೆ.
ವಿಧಾನಸಭಾ ಕ್ಷೇತ್ರ (ಜಿಲ್ಲೆ) ಅಭ್ಯರ್ಥಿಗಳ ಹೆಸರು
ಮೊದಲ ಪಟ್ಟಿಯಲ್ಲಿ ಯಾರ ಹೆಸರಿದೆ?: ಈ ಹಿಂದೆ ಜನವರಿ 7ರಂದು ಬೆಂಗಳೂರು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಜಿ ಅವರು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಕರ್ನಾಟಕ ( ಎಸ್‌ಡಿಪಿಐ) ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿ ಬಿಡುಗಡೆಗೊಳಿಸಿದ್ದರು. ಮೊದಲನೇ ಪಟ್ಟಿಯಲ್ಲಿ ಘೋಷಣೆ ಮಾಡಲಾದ ಅಭ್ಯರ್ಥಿಗಳ ವಿವರ ಇಲ್ಲಿದೆ.
ವಿಧಾನಸಭಾ ಕ್ಷೇತ್ರ (ಜಿಲ್ಲೆ) ಅಭ್ಯರ್ಥಿಗಳ ಹೆಸರು
ಹಿಂದುಗಳನ್ನು ಕೊಲೆ ಮಾಡಿದವರನ್ನು ಸನ್ಮಾನಿಸುವುದೇ ಇಸ್ಲಾಂ ಸಂಸ್ಕೃತಿ: ಪ್ರಮೋದ್ ಮುತಾಲಿಕ್ ಆರೋಪ
ಕಾಂಗ್ರೆಸ್, ಜೆಡಿಎಸ್‌ಗೆ ಪರ್ಯಾಯ ಪಕ್ಷ: ಎಸ್‌ಡಿಪಿಐ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ನಂತರ ಮಾತನಾಡಿದ್ದ ಅಧ್ಯಕ್ಷ ಎಂಕೆ ಫೈಜಿ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಕೂಡ ಪ್ರಜಾಪ್ರಭುತ್ವ ರಕ್ಷಣೆ ಮಾಡಬೇಕು. ಆದರೆ ಅವರ ಕೈಯಲ್ಲೂ ಕೂಡ ಸಾಧ್ಯ ಆಗ್ತಿಲ್ಲ. ಹೀಗಾಗಿ SDPI ಹೊಸ ಪರ್ಯಾಯ ಪಕ್ಷವಾಗಿದೆ. ಪ್ರಜಾಪ್ರಭುತ್ವ ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ಹೇಳಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.