ನನ್ನ ಅಭಿವೃದ್ಧಿ ನೋಡಿ ಮತ್ತೊಮ್ಮೆ ನನಗೆ ಆಶೀರ್ವದಿಸಿ: ಶಾಸಕ ಹರ್ಷವರ್ಧನ್‌

By Kannadaprabha News  |  First Published Apr 1, 2023, 11:30 PM IST

ಕ್ಷೇತ್ರದಲ್ಲಿ ಮತ್ತೊಮ್ಮೆ ಬಿಜೆಪಿ ಗೆಲುವುದು ಖಚಿತ ಎಂದು ಶಾಸಕ ಬಿ. ಹರ್ಷವರ್ಧನ್‌ ಹೇಳಿದರು. ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದ ಶ್ರೀ ಬೇಲದ ಕುಪ್ಪೆ ಮಹದೇಶ್ವರ ದೇವಸ್ಥಾನಕ್ಕೆ ಅಪಾರ ಬೆಂಬಲಗರೊಂದಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ನಂತರ ಕ್ಷೇತ್ರದ ಬಂಕಹಳ್ಳಿ ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸಿ ಅವರು ಮಾತನಾಡಿದರು. 


ಮಲ್ಕುಂಡಿ (ಏ.01): ಕ್ಷೇತ್ರದಲ್ಲಿ ಮತ್ತೊಮ್ಮೆ ಬಿಜೆಪಿ ಗೆಲುವುದು ಖಚಿತ ಎಂದು ಶಾಸಕ ಬಿ. ಹರ್ಷವರ್ಧನ್‌ ಹೇಳಿದರು. ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದ ಶ್ರೀ ಬೇಲದ ಕುಪ್ಪೆ ಮಹದೇಶ್ವರ ದೇವಸ್ಥಾನಕ್ಕೆ ಅಪಾರ ಬೆಂಬಲಗರೊಂದಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ನಂತರ ಕ್ಷೇತ್ರದ ಬಂಕಹಳ್ಳಿ ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸಿ ಅವರು ಮಾತನಾಡಿದರು. ನಾನು ಶಾಸಕನಾಗಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದೇನೆ, ಬಿಜೆಪಿ ಸರ್ಕಾರದ ಜನಪರ ಯೋಜನೆಗಳನ್ನು ಪ್ರತಿಯೊಬ್ಬ ಕಾರ್ಯಕರ್ತರು ಮತದಾರರಿಗೆ ತಿಳಿಸಬೇಕು, ನನ್ನ ಅಭಿವೃದ್ಧಿ ನೋಡಿ ಮತ್ತೊಮ್ಮೆ ನನಗೆ ಆಶೀರ್ವದಿಸಿ ಮತ್ತೊಮ್ಮೆ ತಮ್ಮ ಸೇವೆಗೆ ಅವಕಾಶ ಕಲ್ಪಿಸಿಕೊಡಬೇಕು ಎಂದರು. 

ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಆಗಬೇಕಿದೆ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಲವು ರೈತಪರ ಯೋಜನೆಗಳನ್ನು ಜಾರಿಗೆ ತಂದು ಉತ್ತಮ ಆಡಳಿತ ನೀಡಿದೆ. ರಾಜ್ಯದಲ್ಲಿ ಅಭಿವೃದ್ಧಿ ಪಡಿಸಿರುವ ಬಿಜೆಪಿ ಸರ್ಕಾರ ಮತ್ತೊಮ್ಮೆ 150 ಸ್ಥಾನ ಗೆದ್ದು ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲಿದೆ ಅದೇ ರೀತಿ ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಮತ್ತೊಮ್ಮೆ ಬಿಜೆಪಿ ಬಾವುಟ ಹಾರುವುದು ಖಚಿತ ಎಂದು ವಿಶ್ವಾಸ ವ್ಯಕ್ತ ಪಡಿಸಿದರು. ಬಿಜೆಪಿ ತಾಲೂಕು ಅಧ್ಯಕ್ಷ ಪಿ. ಮಹೇಶ್‌, ಮುಖಂಡರಾದ ಕುಂಬ್ರಳ್ಳಿ ಸುಬ್ಬಣ್ಣ, ಎಚ್‌.ಎಂ. ಕೆಂಡಗಣ್ಣಪ್ಪ, ತಾಪಂ ಮಾಜಿ ಅಧ್ಯಕ್ಷ ಬಿ.ಎಸ್‌. ಮಹದೇವಪ್ಪ, ಹುರ ಗ್ರಾಪಂ ಅಧ್ಯಕ್ಷ ಚಂದ್ರು, ಹಲ್ಲರೆ ಗ್ರಾಪಂ ಅಧ್ಯಕ್ಷ ಮಹದೇವಸ್ವಾಮಿ, ಹರದನಹಳ್ಳಿ ಬಸಪ್ಪ, ತಾಪಂ ಮಾಜಿ ಸದಸ್ಯ ಎಸ್‌. ಬಸವರಾಜ, ನಗರ ಸಭಾ ಅಧ್ಯಕ್ಷ ಮಹದೇವಸ್ವಾಮಿ, ನೆಲ್ಲಿತಾಳಪುರ ಗ್ರಾಪಂ ಅಧ್ಯಕ್ಷ ಮಹದೇವಸ್ವಾಮಿ, ನೂರಾರು ಕಾರ್ಯಕರ್ತರು ಇದ್ದರು.

Latest Videos

undefined

ಅಭ್ಯರ್ಥಿಗಳ ಆಯ್ಕೆ ಬಿಜೆಪಿ ಸಂಸದೀಯ ಸಭೆಯಲ್ಲಿ ಅಂತಿಮ: ಶಾಸಕ ಬಸನಗೌಡ ಯತ್ನಾಳ

ಬಿಎಸ್‌ವೈ, ಶ್ರೀನಿವಾಸಪ್ರಸಾದ್‌ಗೆ ಗೆಲುವಿನ ಉಡುಗೊರೆ ನೀಡಿ: ಈ ಬಾರಿ ಬಹಿರಂಗ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಹಿರಿಯ ನಾಯಕರಾದ ಬಿ.ಎಸ್‌. ಯಡಿಯೂರಪ್ಪ ಹಾಗೂ ವಿ. ಶ್ರೀನಿವಾಸಪ್ರಸಾದ್‌ ನಂತರ ನಿವೃತ್ತರಾಗಲಿದ್ದು, ನಂಜನಗೂಡಿನಲ್ಲಿ ಬಿಜೆಪಿ ಬಾವುಟ ಹಾರಿಸುವ ಮೂಲಕ ಈ ನಾಯಕರಿಗೆ ಗೆಲುವಿನ ಉಡುಗೊರೆ ನೀಡಲು ಕಾರ್ಯಕರ್ತರು ಸನ್ನದ್ಧರಾಗಬೇಕಿದೆ ಎಂದು ಶಾಸಕ ಬಿ. ಹರ್ಷವರ್ಧನ್‌ ಹೇಳಿದರು. ತಮ್ಮ ಬೆಂಬಲಿಗರು ಹಾಗೂ ಕಾರ್ಯಕರ್ತರೊಂದಿಗೆ ಬೇಲದಕುಪ್ಪೆ ಮಹದೇಶ್ವರಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.

ತಮ್ಮ ಇಳಿವಯಸ್ಸಿನಲ್ಲೂ ಅತ್ಯಂತ ಉತ್ಸುಕರಾಗಿ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಬಿ.ಎಸ್‌. ಯಡಿಯೂರಪ್ಪ ಹಾಗೂ ಸಂಸದ ವಿ. ಶ್ರೀನಿವಾಸಪ್ರಸಾದ್‌ ಅವರು ಈ ಚುನಾವಣೆ ನಂತರ ಚುನಾವಣಾ ಪ್ರಚಾರದಿಂದ ನಿವೃತ್ತರಾಗುವುದರಿಂದ ನಂಜನಗೂಡು ಕ್ಷೇತ್ರದ ಗೆಲುವಿನ ಆತ್ಮತೃಪ್ತಿಯೊಂದಿಗೆ ಈ ಇಬ್ಬರು ನಾಯಕರಿಗೆ ಉಡುಗೊರೆ ನೀಡಬೇಕು ಎಂದರು. ಯಾವುದೇ ಚುನಾವಣೆಯಾದರೂ ಮೊದಲು ಬೇಲದಕುಪ್ಪೆ ಮಹದೇಶ್ವರಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿಯೇ ಪ್ರಚಾರ ಕೈಗೊಳ್ಳುತ್ತೇನೆ. ಅಂತೆಯೇ ಈ ಬಾರಿಯೂ ಪೂಜೆ ಸಲ್ಲಿಸಿದ್ದು, ನಂಜನಗೂಡಿನಲ್ಲಿ ಮತ್ತೆ ಬಿಜೆಪಿ ಬಾವುಟ ಹಾರಿಸುವ ಮೂಲಕ ಬಿಜೆಪಿ ಭದ್ರಕೋಟೆ ಎಂಬುದನ್ನು ಮತ್ತೊಮ್ಮೆ ರುಜುವಾತು ಮಾಡಲು ಪೂಜೆ ಸಲ್ಲಿಸಿ ಪ್ರಚಾರಕ್ಕೆ ಧುಮುಕುತ್ತಿರುವುದಾಗಿ ತಿಳಿಸಿದರು.

ಬಿಜೆಪಿ ಟಿಕೆಟ್‌ ವಿಚಾರದಲ್ಲಿ ಗೊಂದಲ ಇಲ್ಲ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ನಾನು ಕಳೆದ ಬಾರಿ ಚುನಾವಣೆ ಸಂದರ್ಭದಲ್ಲಿ ನೀಡಿದ ಬಹುತೇಕ ಎಲ್ಲ ಭರವಸೆಗಳನ್ನು ಸಾಕಾರಗೊಳಿಸಿರುವ ಬಗ್ಗೆ ಆತ್ಮತೃಪ್ತಿಯಿದೆ. ವಿಶೇಷವಾಗಿ ನುಗು ಏತ ನೀರಾವರಿ ಯೋಜನೆ, ಶ್ರೀಕಂಠೇಶ್ವರಸ್ವಾಮಿ ಬೆಳ್ಳಿರಥ, 75 ಕೊಠಡಿಗಳ ಅತಿಥಿಗೃಹ, ಹೆಡಿಯಾಲ ಭಾಗದ ಕೆರೆಗಳ ತುಂಬಿಸುವ ಯೋಜನೆ ಹೀಗೆ ಹಲವು ಮಹತ್ವದ ಯೋಜನೆಗಳನ್ನು ಕ್ಷೇತ್ರಕ್ಕೆ ತಂದಿದ್ದೇನೆ. ಮುಂದೆಯೂ ಕೂಡ ಮತದಾರರ ನಿರೀಕ್ಷೆಗೆ ತಕ್ಕಂತೆ ಅಭಿವೃದ್ಧಿಗೆ ಒತ್ತು ನೀಡುವ ಸಲುವಾಗಿ ಮತದಾರರ ಮನೆಗೆ ಬಾಗಿಲಿಗೆ ತೆರಳಿ ಪ್ರಚಾರ ಕೈಗೊಳ್ಳುವುದಾಗಿ ಹೇಳಿದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

click me!