
ಗಂಗಾವತಿ(ಡಿ.23): ಚುನಾವಣೆಗೆ ಸ್ಪರ್ಧಿಸುವುದಾಗಿ ಈಗಾಗಲೇ ಪ್ರಕಟಿಸಿದ್ದೇನೆ. ಆದರೂ ಅಂತಿಮ ನಿರ್ಧಾರವನ್ನು ಬೆಂಗಳೂರಿನಲ್ಲಿ ಡಿ.25ರಂದು ಘೋಷಿಸುತ್ತೇನೆ. ಅಂದೇ ನನ್ನ ಜತೆ ಯಾರಾರಯರು ಬರುತ್ತಾರೆ, ಬರುವುದಿಲ್ಲ ಎಂಬುದು ನಿಮಗೆ ಗೊತ್ತಾಗಲಿದೆ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಂಗಾವತಿ ನಗರ ನನಗೆ ಅಚ್ಚುಮೆಚ್ಚಿನ ತಾಣ. ಇದೇ ನಗರದಲ್ಲಿ ಜೀವಮಾನವಿಡೀ ಕಳೆಯುತ್ತೇನೆ. ಬಳ್ಳಾರಿ ಜಿಲ್ಲೆ ಮತ್ತು ಕೊಪ್ಪಳ ಜಿಲ್ಲೆಯ ಗಂಗಾವತಿ ಜನತೆಯ ಬಗ್ಗೆ ಹೆಚ್ಚಿನ ಪ್ರೀತಿ, ವಿಶ್ವಾಸ ಇದೆ ಎಂದು ತಿಳಿಸಿದರು.
ಡಿ.25 ರಂದು ಹೊಸ ಪಕ್ಷ ಘೋಷಣೆ ಮಾಡ್ತಾರಾ ಜನಾರ್ದನ ರೆಡ್ಡಿ..?
ಬಳ್ಳಾರಿಯಲ್ಲಿ ಗ್ರಾಮದೇವತೆ ದುರ್ಗಾದೇವಿ ನಮಗೆ ಆಶೀರ್ವಾದ ಮಾಡಿದ್ದಾರೆ. ಅದರಂತೆ ಗಂಗಾವತಿ ಗ್ರಾಮ ದೇವತೆ ದುರ್ಗಾದೇವಿಯ ಆಶೀರ್ವಾದವನ್ನೂ ಪಡೆಯುತ್ತೇನೆ. ನನಗೆ ಅಂಜನಾದ್ರಿ ಆಂಜನೇಯಸ್ವಾಮಿ ಆಶೀರ್ವಾದವೂ ಇದೆ ಎಂದರು.
ಕಳೆದ ವಾರ ಗಂಗಾವತಿ ನಗರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ನಿಮ್ಮ ಬೆಂಬಲವಾಗಿದ್ದರು. ಈಗ ಮರೆಯಾಗಿದ್ದಾರಲ್ವಾ ಎಂಬ ಪ್ರಶ್ನೆಗೆ, ಎಲ್ಲರೂ ನಮ್ಮವರೇ. ಮುಂಬರುವ ದಿನಗಳಲ್ಲಿ ಎಲ್ಲರೂ ನಮ್ಮ ಜತೆ ಇರುತ್ತಾರೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.