ಸಿದ್ದು VS ಡಿಕೆಶಿ: ಮುಖ್ಯಮಂತ್ರಿ ಆಯ್ಕೆ ಹೈಕಮಾಂಡ್‌ ಅಂಗಳಕ್ಕೆ

By Kannadaprabha News  |  First Published May 15, 2023, 6:20 AM IST

ರಾಜ್ಯ ಕಾಂಗ್ರೆಸ್‌ನ ದಿಗ್ಗಜರಾದ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿ ಹುದ್ದೆಗೆ ಪಟ್ಟು ಹಿಡಿದ ಕಾರಣ ಭಾನುವಾರ ಸಂಜೆ ನಡೆದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ಬಹಿರಂಗ ಆಯ್ಕೆ ಪ್ರಕ್ರಿಯೆ ನಡೆಯಲಿಲ್ಲ. 


ಬೆಂಗಳೂರು (ಮೇ.15): ರಾಜ್ಯ ಕಾಂಗ್ರೆಸ್‌ನ ದಿಗ್ಗಜರಾದ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿ ಹುದ್ದೆಗೆ ಪಟ್ಟು ಹಿಡಿದ ಕಾರಣ ಭಾನುವಾರ ಸಂಜೆ ನಡೆದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ಬಹಿರಂಗ ಆಯ್ಕೆ ಪ್ರಕ್ರಿಯೆ ನಡೆಯಲಿಲ್ಲ. ಬದಲಾಗಿ, ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿರ್ಧಾರಕ್ಕೆ ಬಿಡುವ ಒಂದು ಸಾಲಿನ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಯಿತು. ಇದೇ ವೇಳೆ, ಪಕ್ಷದ ವೀಕ್ಷಕರು ಶಾಸಕರ ಮೌಖಿಕ ಅಭಿಪ್ರಾಯ ಸಂಗ್ರಹಿಸಿದ್ದಾರೆ.

ತನ್ಮೂಲಕ ಕರುನಾಡಿನ ಮುಂದಿನ ಮುಖ್ಯಮಂತ್ರಿ ಯಾರು ಎಂಬ ನಿರ್ಧಾರ ದೆಹಲಿ ಅಂಗಳಕ್ಕೆ ರವಾನೆಯಾಗಿದೆ. ಹೈಕಮಾಂಡ್‌ ವರಿಷ್ಠರಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಅವರು ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ನಿರ್ಧರಿಸಲಿದ್ದಾರೆ. ಈ ನಿರ್ಧಾರ ಕೈಗೊಳ್ಳುವ ಮುನ್ನ ಅವರು ಹುದ್ದೆಯ ಆಕಾಂಕ್ಷಿಗಳಾದ ಸಿದ್ದರಾಮಯ್ಯ ಹಾಗೂ ಶಿವಕುಮಾರ್‌ ಅವರೊಂದಿಗೆ ಸಮಾಲೋಚನೆ ನಡೆಸುವ ಅಗತ್ಯವಿರುವುದರಿಂದ ಉಭಯ ನಾಯಕರು ಸೋಮವಾರ ದೆಹಲಿಗೆ ತೆರಳುವ ಸಾಧ್ಯತೆಯಿದೆ.

Tap to resize

Latest Videos

ಸಿಎಂ ಹುದ್ದೆಗೆ ಡಿ.ಕೆ.ಶಿವಕುಮಾರ್‌-ಸಿದ್ದರಾಮಯ್ಯ ಬಿಗಿಪಟ್ಟು: ನೂತನ ಸಿಎಂ ಆಯ್ಕೆ ಕಾಂಗ್ರೆಸ್ಸಿಗೆ ಕಗ್ಗಂಟು

ಮೂಲಗಳ ಪ್ರಕಾರ ಸೋಮವಾರ ಅಥವಾ ಮಂಗಳವಾರದ ವೇಳೆಗೆ ದೆಹಲಿ ವರಿಷ್ಠರು ಉಭಯ ನಾಯಕರೊಂದಿಗೆ ಚರ್ಚಿಸಿ ಅನಂತರ ತಮ್ಮ ನಿರ್ಧಾರವನ್ನು ಪ್ರಕಟಿಸುವ ಸಾಧ್ಯತೆಯಿದೆ. ಕುತೂಹಲಕಾರಿ ಸಂಗತಿಯೆಂದರೆ ನಗರದ ಪಂಚತಾರಾ ಹೊಟೇಲ್‌ನಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಖುದ್ದು ಸಿದ್ದರಾಮಯ್ಯ ಮಂಡಿಸಿದ ಶಾಸಕಾಂಗ ಪಕ್ಷದ ನಾಯಕ ಆಯ್ಕೆ ನಿರ್ಧಾರವನ್ನು ಎಐಸಿಸಿ ಅಧ್ಯಕ್ಷರಿಗೆ ಬಿಡುವ ನಿರ್ಣಯವನ್ನು ಡಿ.ಕೆ. ಶಿವಕುಮಾರ್‌ ಅನುಮೋದಿಸಿದರು. ಹೀಗೆ ಮುಖ್ಯಮಂತ್ರಿ ನಿರ್ಧಸುವ ಹೊಣೆಯನ್ನು ಹೈಕಮಾಂಡ್‌ಗೆ ಬಿಟ್ಟನಂತರವೂ ಶಾಸಕರ ಅಭಿಪ್ರಾಯ ಸಂಗ್ರಹಿಸುವ ತೀರ್ಮಾನವನ್ನು ಸಭೆಯಲ್ಲಿ ಕೈಗೊಳ್ಳಲಾಯಿತು.

ಮೌಖಿಕ ಅಭಿಪ್ರಾಯ ಸಂಗ್ರಹ: ಒಂದು ಸಾಲಿನ ನಿರ್ಣಯ ಕೈಗೊಂಡ ನಂತರ ಶಾಸಕರಿಗೆ ಊಟದ ವಿರಾಮ ನೀಡಲಾಯಿತು. ಇದಾದ ನಂತರ ವೀಕ್ಷಕರಾಗಿ ಆಗಮಿಸಿರುವ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಸುಶೀಲ್‌ ಕುಮಾರ್‌ ಶಿಂಧೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೀತೇಂದ್ರ ಸಿಂಗ್‌, ಎಐಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ದೀಪಕ್‌ ಬಬಾರಿಯಾ ಅವರು ಪ್ರತ್ಯೇಕವಾಗಿ ಶಾಸಕರಿಂದ ಮೌಖಿಕ ಅಭಿಪ್ರಾಯ ಸಂಗ್ರಹಿಸುವ ಪ್ರಕ್ರಿಯೆ ಆರಂಭಿಸಿದರು. ಈ ಪ್ರಕ್ರಿಯೆ ತಡರಾತ್ರಿಯವರೆಗೂ ಮುಂದುವರೆದಿದ್ದು, ಸೋಮವಾರವೂ ನಡೆಯುವ ಸಾಧ್ಯತೆಯಿದೆ. ಈ ವೀಕ್ಷಕರು ಶಾಸಕರ ಅಭಿಪ್ರಾಯ ಸಂಗ್ರಹಿಸಿ ಹೈಕಮಾಂಡ್‌ಗೆ ವರದಿ ಸಲ್ಲಿಸಲಿದ್ದಾರೆ. ಹೈಕಮಾಂಡ್‌ ಮುಂದಿನ ಮುಖ್ಯಮಂತ್ರಿ ನಿರ್ಣಯ ವೇಳೆ ಶಾಸಕರ ಈ ಅಭಿಪ್ರಾಯವನ್ನು ಪರಿಗಣನೆಗೆ ತೆಗೆದುಕೊಳ್ಳಲಿದೆ ಎಂದು ಮೂಲಗಳು ಹೇಳಿವೆ.

ಸೈನಿಕನನ್ನು ಮಕಾಡೆ ಮಲಗಿಸಿದ ದಳಪತಿ: ಯೋಗೇಶ್ವರ್‌ ವಿರುದ್ಧ ಎರಡನೇ ಬಾರಿ ಗೆದ್ದ ಎಚ್‌ಡಿಕೆ

ವಾಸ್ತವವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಹೈಕಮಾಂಡ್‌ ನಿರ್ಧರಿಸಲಿ ಎಂದು ವಾದ ಮಂಡಿಸಿದ್ದರು. ಇದೇ ವೇಳೆ ಸಿದ್ದರಾಮಯ್ಯ ಅವರು ಶಾಸಕರ ಅಭಿಪ್ರಾಯದಂತೆಯೇ ಶಾಸಕಾಂಗ ಪಕ್ಷದ ನಾಯಕನ ತೀರ್ಮಾನವಾಗಬೇಕು ಎಂದು ಪಟ್ಟು ಹಿಡಿದಿದ್ದರು. ಇದೀಗ ಮುಖ್ಯಮಂತ್ರಿ ಹುದ್ದೆ ನಿರ್ಧಾರವನ್ನು ಹೈಕಮಾಂಡ್‌ಗೆ ಬಿಡುವ ತೀರ್ಮಾನದ ಜತೆಗೆ ಶಾಸಕರ ಅಭಿಪ್ರಾಯ ಸಂಗ್ರಹವನ್ನು ಮಾಡುವ ಮೂಲಕ ಹೈಕಮಾಂಡ್‌ ಉಭಯ ನಾಯಕರ ಬೇಡಿಕೆಗೆ ಮನ್ನಣೆ ನೀಡಿದಂತಾಗಿದೆ.

click me!