ಕೊರೋನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಆಸ್ಪತ್ರೆಯಿಂದ ತಪ್ಪಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ತಿರುಪತಿ, (ಆ.29): ಕೊರೋನಾ ಪಾಸಿಟಿವ್ ಫಲಿತಾಂಶ ಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಆಂಧ್ರಪ್ರದೇಶದ ಕಡಪಾ ಜಿಲ್ಲೆಯಲ್ಲಿ ನಡೆದಿದೆ.
ಕಡಪಾ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಸಿರಿಗಿರಿರೆಡ್ಡಿ ಗಂಗಿ ರೆಡ್ಡಿ (55) ಎಂಬುವವರೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಫಲಿತಾಂಶ ಬಂದ ಕಾರಣಕ್ಕೆ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಗಂಗಾವತಿ: ಕೊರೋನಾ ಸೋಂಕಿಗೆ ಬಿಜೆಪಿ ಮುಖಂಡ ಬಲಿ
ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಫಲಿತಾಂಶ ಬಂದ ಮೇಲೆ ಗಂಗಿ ರೆಡ್ಡಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಆದರೆ ಕಳೆದ ಭಾನುವಾರ ಅವರು ಆಸ್ಪತ್ರೆಯಿಂದ ನಾಪತ್ತೆಯಾಗಿದ್ದರು. ಇದೀಗ ಅವರ ಶವ ರೈಲು ಹಳಿಗಳ ಮೇಲೆ ದೊರೆತಿದ್ದು, ಕೊರೋನಾ ಸೋಂಕು ತಗುಲಿರುವ ಕಾರಣಕ್ಕೆ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಗಂಗಿ ರೆಡ್ಡಿ ಅವರ ಕುಟುಂಬ ವರ್ಗದವರಿಗೂ ಕೊರೋನಾ ಸೋಂಕು ತಗುಲಿದ್ದು, ಈ ಕಾರಣಕ್ಕೆ ಬೇಸತ್ತ ಗಂಗಿ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.