BSY ರಾಜಕೀಯ ಕಾರ್ಯದರ್ಶಿಯಾಗಿ ಮರಂಕಲ್ ನೇಮಕ| 30 ವರ್ಷಗಳ ಕಾಲ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯ ಮೈಸೂರು ವರದಿಗಾರರಾಗಿದ್ದ ಮರಂಕಲ್| ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಆದೇಶ.
ಬೆಂಗಳೂರು, [ಅ.30]: ಸಿಎಂ ಬಿಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿಯಾಗಿ ಹಿರಿಯ ಪತ್ರಕರ್ತ ಎಂ.ಬಿ ಮರಂಕಲ್ ನೇಮಕವಾಗಿದ್ದಾರೆ.
ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಇಂದು [ಬುಧವಾರ] ಸರ್ಕಾರ ಆದೇಶಿಸಿದೆ. ಮೂಲತಃ ಕಲಬುರಗಿ ಜಿಲ್ಲೆಯವರಾದ ಮರಂಕಲ್, ಮೈಸೂರಿನಲ್ಲಿ ಪತ್ರಕರ್ತರಾಗಿ ಕೆಲಸ ಮಾಡಿದ್ದಾರೆ.
ಪತ್ರಕರ್ತ, ಬ್ಲಾಗರ್ ಬೇಳೂರು ಸುದರ್ಶನಗೆ ಸಂಪುಟ ದರ್ಜೆ ಸ್ಥಾನ, ಯಾವ ಹುದ್ದೆ?
30 ವರ್ಷಗಳ ಕಾಲ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯ ಮೈಸೂರು ವರದಿಗಾರರಾಗಿ ಕೆಲಸ ಮಾಡಿದ್ದಾರೆ. ಕಳೆದ ನಾಲ್ಕು ವರ್ಷದಿಂದ ಪತ್ರಿಕೋದ್ಯಮದಿಂದ ನಿವೃತ್ತಿ ಹೊಂದಿ, ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ.
ಇತ್ತೀಚೆಗೆ ದೇವದುರ್ಗದ ಪ್ರವಾಸಿ ಮಂದಿರದಲ್ಲಿ ಬಿಎಸ್ ವೈ ಆರಪೇಷನ್ ಕಮಲ ಆಡಿಯೋ ಪ್ರಕರಣದಲ್ಲಿ ಮರಂಕಲ್ ಅವರ ದನಿಯೂ ಇದೆ ಎಂದು ಸುದ್ದಿಯಾಗಿತ್ತು. ಹೈದರಾಬಾದ್ ಕರ್ನಾಟಕಕ್ಕೆ ಪ್ರಾತಿನಿಧ್ಯ ನೀಡೋ ಹಿನ್ನಲೆಯಲ್ಲಿ ಈ ನೇಮಕ ನಡೆದಿದೆ ಎನ್ನಲಾಗಿದೆ.
ಮೊನ್ನೇ ಅಷ್ಟೇ ಪತ್ರಕರ್ತ, ಬ್ಲಾಗರ್ ಬೇಳೂರು ಸುದರ್ಶನ ಅವರನ್ನು ಸಚಿವ ಸಂಪುಟ ಸ್ಥಾನಮಾನದೊಂದಿಗೆ ಇ- ಆಡಳಿತ ವಿಭಾಗದ ಮುಖ್ಯಮಂತ್ರಿ ಸಲಹೆಗಾರ ಹುದ್ದೆ ನೀಡಿರುವುದನ್ನು ಇಲ್ಲಿ ಸ್ಮರಿಸಬಹುದು.