
ವಿಜಯಪುರ, (ಜುಲೈ.06): ಕೇಂದ್ರ ಸಂಪುಟ ವಿಸ್ತರಣೆ ಮಧ್ಯೆ ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ ಕುಟುಂಬ ಸಮೇತ ದೆಹಲಿಗೆ ತೆರಳಿರುವುದು ಕುತೂಹಲ ಮೂಡಿಸಿದೆ.
ಇದರ ಬೆನ್ನಲ್ಲೇ ಕರ್ನಾಟಕ ರಾಜ್ಯದಲ್ಲೇ ಬಿಜೆಪಿ ಹಿರಿಯ ಸಂಸದರಾಗಿರುವ ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಅವರಿಗೆ ಕೇಂದ್ರದಿಂದ ದೆಹಲಿ ಬುಲಾವ್ ಬಂದಿದೆ. ತಮಗೆ ದೆಹಲಿಗೆ ಬರುವಂತೆ ಬುಲಾವ್ ಬಂದಿರವುದನ್ನು ರಮೇಶ್ ಜಿಗಜಿಣಗಿ ಖಚಿತ ಪಡಿಸಿದ್ದಾರೆ. ಇದರಿಂದ ಇವರಿಗೂ ಮಂತ್ರಿ ಭಾಗ್ಯ ಸಿಗುವುದು ಸಾಧ್ಯತೆಗಳಿವೆ.
ಕೇಂದ್ರ ಸಂಪುಟ ವಿಸ್ತರಣೆ: ಕುಟುಂಬ ಸಮೇತ ದಿಲ್ಲಿಗೆ ಹೊರಟ ಕರ್ನಾಟಕದ ಸಂಸದ
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಹಿರಿಯ ಕೇಂದ್ರ ಮಂತ್ರಿಗಳಿಂದ ಜುಲೈ 8ರಂದು ದೆಹಲಿಗೆ ಬರಲು ಸೂಚನೆ ಬಂದಿದೆ. ಈ ಹಿನ್ನೆಲೆಯಲ್ಲಿ ಇಂದು (ಮಂಗಳವಾರ( ಸಂಜೆ ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದೇನೆ. ನನ್ನ ಹಾಗೆ ಇತರ ಸಂಸದರಿಗೂ ಬುಲಾವ್ ಬಂದಿದೆ. ಸಚಿವ ಸ್ಥಾನ ಸಿಗುವ ಬಗ್ಗೆ ಇನ್ನೂ ಪಕ್ಕಾ ಇಲ್ಲ ಎಂದ ಸಂಸದ ಜಿಗಜಿಣಗಿ ಸ್ಪಷ್ಟಪಡಿಸಿದರು.
ಮೋದಿ ಅವರ ಕೇಂದ್ರದ ಮೊದಲ ಅವಧಿ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದ ರಮೇಶ್ ಜಿಗಜಿಣಗಿ ಅವರಿಗೆ ಎರಡನೇ ಅವಧಿ ಸರ್ಕಾರ ರಚನೆ ಸಂದರ್ಭದಲ್ಲಿ ಸಚಿವ ಸ್ಥಾನ ಸಿಕ್ಕಿರಲಿಲ್ಲ. ಆದ್ರೆ, ಇದೀಗ ಜುಲೈ 8ರಂದು ಕೇಂದ್ರ ಸಂಪುಟ ವಿಸ್ತರಣೆಯಲ್ಲಿ ಮತ್ತೆ ಸಚಿವ ಸ್ಥಾನ ದಕ್ಕುವ ನಿರೀಕ್ಷೆ ಇದೆ.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.