ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲಲು ಹಿರಿಯ ನಾಯಕರು ನಾನು, ನಾನು ಎಂದದ್ದೇ ಕಾರಣವಾಯಿತು ಸ್ವ ಪಕ್ಷದ ಹಿರಿಯ ನಾಯಕರೇ ಪರೋಕ್ಷವಾಗಿ ಸ್ವಾರ್ಥಿಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು
ಚಾಮರಾಜನಗರ (ಜ.7) : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲಲು ಹಿರಿಯ ನಾಯಕರು ನಾನು, ನಾನು ಎಂದದ್ದೇ ಕಾರಣವಾಯಿತು ಸ್ವ ಪಕ್ಷದ ಹಿರಿಯ ನಾಯಕರೇ ಪರೋಕ್ಷವಾಗಿ ಸ್ವಾರ್ಥಿಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿ, ಹಿರಿಯ ನಾಯಕರು ಚುನಾವಣೆಗೆ ಮುನ್ನ ನಾವು ಎನ್ನುತ್ತಾರೆ, ಚುನಾವಣೆ ಗೆದ್ದ ಬಳಿಕ ನಾನು, ನಾನು ಎನ್ನುತ್ತಾರೆ. ಅದನ್ನು ಬಿಟ್ಟು, ನಾವೆಲ್ಲರೂ ಒಂದೇ ಎಂದು ತಿಳಿದುಕೊಂಡಿದ್ದರೇ ಚುನಾವಣೆಯಲ್ಲಿ ಸೋಲುತ್ತಿರಲಿಲ್ಲ, ಕಳೆದ ವಿಧಾನಸಭಾ ಚುನಾವಣೆ ಸೋಲಿಗೆ ಬಿಜೆಪಿ ಕಾರಣವಲ್ಲ, ಕಾರ್ಯಕರ್ತರು ಕಾರಣವಲ್ಲ, ನಾಯಕರು ಕಾರಣ ಎಂದು ಗುಡುಗಿದರು.
undefined
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಜಿಪಿಎಸ್ ಟೋಲ್ ಶೀಘ್ರ: ದೇಶದಲ್ಲಿ ಇದೇ ಮೊದಲು!
ರಾಜ್ಯ ಬಿಜೆಪಿ ಅಧ್ಯಕ್ಷನಾದ ಬಳಿಕ ರಾಜ್ಯ ಪ್ರವಾಸ ಮಾಡುತ್ತಿದ್ದೇನೆ. ಬಿಎಸ್‌ವೈ ನನಗೆ ಒಂದು ಮಾತು ಹೇಳಿದ್ದಾರೆ, ರಾಜ್ಯದಲ್ಲಿ ಅನೇಕ ಹಿರಿಯ ನಾಯಕರು ಇದ್ದರೂ ಪಕ್ಷ ನಿನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟಿದೆ, ಒಂದು ದಿನ ನೀನು ಮನೆಯಲ್ಲಿ ಕೂರಬಾರದು. ಲೋಕಭೆಯಲ್ಲಿ 28 ಕ್ಷೇತ್ರವನ್ನೂ ಗೆಲ್ಲಬೇಕು ಎಂದಿದ್ದಾರೆ, ಅವರೂ ಕೂಡ ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ ಎಂದು ಹೇಳಿದರು.
ದೇಶದಲ್ಲಿ ಮನಮೋಹನ್ ಸಿಂಗ್ ಆಡಳಿತ ಇದ್ದಾಗ ಭ್ರಷ್ಟಾಚಾರ ನಡೆಯುತ್ತಿತ್ತು. ಇದೀಗ ದೇಶದ ಆಡಳಿತದಲ್ಲಿ ಇಂದು ಭ್ರಷ್ಟಾಚಾರ ಒಂದೂ ಆರೋಪ ಇಲ್ಲ. ನರೇಂದ್ರ ಮೋದಿ ಮತ್ತೆ ಪ್ರಧಾನ ಮಂತ್ರಿ ಆಗುವುದನ್ನು ಯಾವ ದುಷ್ಟ ಶಕ್ತಿಯು ತಡೆಯುದಕ್ಕೆ ಆಗಲ್ಲ, ಕಾಂಗ್ರೆಸ್ ಗೂ ಇದು ಮನದಟ್ಟಾಗಿದ್ದು ಹತಾಶೆ ಹೇಳಿಕೆ ಕೊಡುತ್ತಿದ್ದಾರೆ ಎಂದರು.
ಚುನಾವಣೆ ಬಂದ್ರೆ ಕಾಂಗ್ರೆಸ್ ನವರು ಅಂಬೇಡ್ಕರ್ ಹೆಸರು ಹೇಳುತ್ತಾರೆ. ಕಾಂಗ್ರೆಸ್ ಪಕ್ಷ ಅಂಬೇಡ್ಕರ್ ಅಂತ್ಯ ಸಂಸ್ಕಾರಕ್ಕೆ ಜಾಗ ಕೊಡಲಿಲ್ಲ. ಆದ್ರೆ ಚುನಾವಣೆ ವೇಳೆ ಅಂಬೇಡ್ಕರ್ ಹೆಸರು ಬೇಕು, ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದಾಗ ಕಲಾಪ ನಡೆಯುತ್ತಿತ್ತು, ಸಿಎಂ ಸಿದ್ದರಾಮಯ್ಯ ಬೆಳಗಾವಿ ಅಧಿವೇಶನದಲ್ಲಿ ಇದ್ದರೂ ಮಹಿಳೆ ಭೇಟಿ ಮಾಡಲಿಲ್ಲ, ಅದೇ ಯಡಿಯೂರಪ್ಪ ಸಿಎಂ ಆಗಿದ್ದರೇ ಕೂಡಲೇ ಭೇಟಿ ಮಾಡಿ ಸಾಂತ್ವನ ಹೇಳುತ್ತಿದ್ದರು ಎಂದು ಹೇಳಿದರು.
ಯಡಿಯೂರಪ್ಪ ಮಗ ವಿಜಯೇಂದ್ರ ಅಧ್ಯಕ್ಷನಾದ ಬಳಿಕ ಕಾಂಗ್ರೆಸ್ ನವರಿಗೆ ಭಯ ಶುರುವಾಗಿದೆ, 28 ಕ್ಷೇತ್ರಗಳಲ್ಲೂ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳು ಗೆಲ್ಲಲ್ಲಿದ್ದು ಮುಂಬುರುವ ವಿಧಾನಸಭಾ ಚುನಾವಣೆಯಲ್ಲೂ ಕಮಲ ಅರಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿ ನಡೆಸಿ ವಾಗ್ದಾಳಿ:
ವೇದಿಕೆ ಕಾರ್ಯಕ್ರಮದ ಬಳಿಕ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಸರ್ಕಾರ ಬಂದು ಏಳು ತಿಂಗಳು ಕಳೆದಿದೆ. ಒಬ್ಬ ಅನುಭವಿ ಮುಖ್ಯಮಂತ್ರಿ 14 ಬಜೆಟ್ ಮಂಡನೆ ಮಾಡಿರುವ ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾರೆ. ರಾಜ್ಯದ ಸಾಕಷ್ಟು ನೀರಿಕ್ಷೆ ಇತ್ತು. ನೀರಿಕ್ಷೆಗಳು ಹುಸಿಯಾಗಿದೆ. ನಾವುಗಳು ಮೋಸ ಹೋಗಿದ್ದೇವೆ ಎಂಬ ಭಾವನೆ ಜನರಲ್ಲಿದೆ ಎಂದರು.
ಗ್ಯಾರೆಂಟಿಗಳನ್ನ ಅರೆ ಭರೆ ಘೋಷಣೆ ಮಾಡಿ ಎಷ್ಟು ಜನರಿಗೆ ತಲುಪಿದೆ ಗೊತ್ತಿಲ್ಲ. ಸರ್ಕಾರದ ನಡವಳಿಕೆಯಿಂದ ರೈತರು ಹತಾಶರಾಗಿದ್ದಾರೆ. ಎಸ್ಸಿ ಎಸ್ಟಿ ಹಣವನ್ನ ಬೇರೆಡೆಗೆ ವರ್ಗಾ ಮಾಡಿಕೊಂಡಿದೆ. ಸಿದ್ದರಾಮಯ್ಯ ಅವರ ಸರ್ಕಾರ ದಲಿತ ಸಮಾಜಗಳಿಗೆ ಅನ್ಯಾಯ ಮಾಡುತ್ತಿದೆ. ಹೊಸ ಯೋಜನೆ ಜಾರಿ ತರುತ್ತಿಲ್ಲ. ಯಾವೊಬ್ಬ ಶಾಸಕನು ಕೂಡ ಸ್ವ ಕ್ಷೇತ್ರದಲ್ಲಿ ಓಡಾಡಲು ಸಾಧ್ಯವಾಗಿಲ್ಲ. ರಸ್ತೆ ಅಭಿವೃದ್ಧಿಯಾಗುತ್ತಿಲ್ಲ, ಆಸ್ಪತ್ರೆ ಕಟ್ಟಲು ಸಾಧ್ಯವಾಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ದುಷ್ಟ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಜನರು ತಕ್ಕ ಪಾಠ ಕಲಿಸುತ್ತಾರೆ. ವಿಧಾನ ಸಭಾ ಚುನಾವಣೆ ಸೋಲಿಗೆ ಸಾಕಷ್ಟು ಕಾರಣಗಳಿದೆ. ಸಂಪೂರ್ಣ ಶ್ರಮ ಹಾಕಬೇಕಿತ್ತು. ಅದು ಕೊರತೆಯಾಯ್ತು ಎಂದು ಪ್ರಶ್ನೆಗೆ ಉತ್ತರಿಸಿದರು.
ಸೋಮಣ್ಣ, ಯತ್ನಾಳ್ ಅವರ ವಿಚಾರದಲ್ಲಿ ಎಲ್ಲವೂ ಸರಿಯಾಗಿದೆ ಎಂದು ಹೇಳುವುದಿಲ್ಲ. ಸಾಕಷ್ಟು ಬದಲಾವಣೆಯಾಗಿದೆ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿಹೋಗುತ್ತೆ. ಸೋಮಣ್ಣ ಚುನಾವಣೆ ಸ್ಪರ್ಧೆ ಬಗ್ಗೆ ನನಗೆ ಗೊತ್ತಿಲ್ಲ. ಕೇಂದ್ರದ ವರಿಷ್ಟರು ತೀರ್ಮಾನ ಮಾಡುತ್ತಾರೆ. ಸೋಮಣ್ಣ ಹಿರಿಯರು ಅವರ ಕೊಡುಗೆ ಪಕ್ಷಕ್ಕೆ ಇದೆ.ವಎರೆಡು ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸ ಇತ್ತು, ಆದರೂ ಸೋಲಾಗಿದೆ. ಇದಕ್ಕೆ ಬೇರೆ ಬೇರೆ ಕಾರಣ ಇದೆ. ಸೋಮಣ್ಣ ಅವರ ಜೊತೆ ಕುಳಿತು ಚರ್ಚೆ ಮಾಡುತ್ತೇವೆ. ಮುಂದಿನ ಚುನಾವಣೆಯಲ್ಲಿ ಹೆಚ್ಚು ಪ್ರಚಾರ ಮಾಡುತ್ತೇನೆ ಎಂದರು.
ವಿಜಯೇಂದ್ರ, ಅಶೋಕ್‌ಗೆ ಎಲ್ಲರನ್ನೂ ಜೊತೆಗೊಯ್ಯುವ ಜವಾಬ್ದಾರಿ: ಡಿ.ವಿ.ಸದಾನಂದಗೌಡ
ಭರ್ಜರಿ ರೋಡ್ ಶೋ: ರಾಜ್ಯಾಧ್ಯಕ್ಷರಾದ ಬಳಿಕ ಚಾಮರಾಜನಗರಕ್ಕೆ ಇದೇ ಮೊದಲ ಬಾರಿಗೆ ಬಿ.ವೈ.ವಿಜಯೇಂದ್ರ ಭೇಟಿ ನೀಡಿದ್ದು ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು. ಚಾಮರಾಜನಗರದ ಸಂತೇಮರಹಳ್ಳಿ ವೃತ್ತಕ್ಕೆ ವಿಜಯೇಂದ್ರ ಆಗಮಿಸಿದ ವೇಳೆ ಬೃಹತ್ ಹೂವಿನ ಹಾರ ಹಾಗೂ ಸೇಬಿನ ಹಾರವನ್ನು ಹಾಕಲಾಯಿತು. ಬಳಿಕ, ಮಹರ್ಷಿ ವಾಲ್ಮೀಕಿ ಮತ್ತು ಪ್ರಭು ಶ್ರೀರಾಮಚಂದ್ರರ ಭಾವಚಿತ್ರಕ್ಕೆ ಬಿವೈವಿ ಪುಷ್ಪಾರ್ಚನೆ ಸಲ್ಲಿಸಿದರು. ಸಂತೇಮರಹಳ್ಳಿ ವೃತ್ತದಿಂದ ತೆರೆದ ವಾಹನದಲ್ಲಿ ಬಿ.ವೈ.ವಿಜಯೇಂದ್ರ ರೋಡ್ ಶೋ ನಡೆಸಿದರು. ಭುವನೇಶ್ವರಿ ವೃತ್ತದಲ್ಲೂ ವಿಜಯೇಂದ್ರಗೆ ಕೇಸರಿ ಮಳೆ ಸುರಿಸಿದ ಕಾರ್ಯಕರ್ತರು ಬೃಹತ್ ಸೇಬಿನ ಹಾರ ಹಾಕಿದರು.