
ಮೈಸೂರು, (ಜೂನ್.27): ಮೈಸೂರು ಮಹಾನಗರ ಪಾಲಿಕೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಸಿದ್ದರಾಮಯ್ಯಗೆ ಸೆಡ್ಡು ಹೊಡೆದಿದ್ದ ಶಾಸಕ ತನ್ವೀರ್ ಸೇಠ್‌ಗೆ ಶಾಕ್ ಕೊಟ್ಟಿದ್ದಾರೆ.
ಹೌದು...ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದ ಶಾಸಕ ತನ್ವೀರ್ ಸೇಠ್‌ಗೆ ಮೈಸೂರು ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷರ ನೇಮಕ ವಿಚಾರದಲ್ಲಿ ಭಾರೀ ಹಿನ್ನಡೆಯಾಗಿದೆ.
ಸಸ್ಪೆಂಡ್ ಮಾಡಿದ್ರೂ ಓಕೆ: ಸಿದ್ದರಾಮಯ್ಯ ವಿರುದ್ಧ ಗುಡುಗಿದ ಕಾಂಗ್ರೆಸ್ ಶಾಸಕ
ಶಾಸಕ ಜಮೀರ್ ಅಹಮದ್ ಖಾನ್ ಬೆಂಬಲಿಗನಿಗೆ ವಕ್ಫ್ ಬೋರ್ಡ್ ಅಧ್ಯಕ್ಷ ಪಟ್ಟ ಕಟ್ಟುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ಈ ಮೂಲಕ ಶಾಸಕ ತನ್ವೀರ್‌ಸೇಠ್‌ಗೆ ತಿರುಗೇಟು ಕೊಟ್ಟಿದ್ದಾರೆ.
ಮೈಸೂರು ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನಕ್ಕಾಗಿ ಶಾಸಕ ತನ್ವೀರ್ ಸೇಠ್ ತಮ್ಮ ಬೆಂಬಲಿಗ ಅಬ್ದುಲ್ ಖಾದರ್ ಹೆಸರು ಶಿಫಾರಸು ಮಾಡಿದ್ದರು. ಆದರೆ, ಸಿದ್ದರಾಮಯ್ಯ, ಶಾಸಕ ಜಮೀರ್ ಅಹಮದ್ ಆಪ್ತ ಅಕ್ರಂಗೆ ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನ ಕೊಡಿಸಿದ್ದು, ತಮ್ಮ ಎದುರಾಳಿಗಿಗೆ ತಮ್ಮ ಶಕ್ತಿ ತೋರಿಸಿದ್ದಾರೆ.
ಕಳೆದ ಬಾರಿ ಪಾಲಿಕೆ ಮೇಯರ್ ಚುನಾವಣೆ ಮೈತ್ರಿ ವಿಚಾರದಲ್ಲಿ ಸಿದ್ದರಾಮಯ್ಯ ಲೆಕ್ಕಾಚಾರವನ್ನು ತನ್ವೀರ್ ಸೇಠ್ ತಲೆಕೆಳಗಾಗಿಸಿದ್ದರು. ಅಂದಿನ ಕೋಪವನ್ನು ಸಿದ್ದರಾಮಯ್ಯಗೆ ಈಗ ತೀರಿಸಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.