
ಬೆಂಗಳೂರು, (ಮಾ.14): ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ. ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಈ ಕೇಸ್‌ನ್ನು ಎಸ್‌ಐಟಿ ತನಿಖೆ ನಡೆಸಿದೆ. ಇದರ ಮಧ್ಯೆ ರಮೆಶ್ ಜಾರಕಿಹೊಳಿ ಅವರು ದೂರು ನೀಡಿದ್ದಾರೆ.
ಈ ದೂರು ದಾಖಲಿಸಿದ ಕೆಲವೇ ಗಂಟೆಗಳಲ್ಲಿ ಸಂತ್ರಸ್ತೆ ಯುವತಿ ಅಂದ್ರೆ ಸಿ.ಡಿ. ಲೇಡಿ ಕೂಡ ಅಜ್ಞಾತ ಸ್ಥಳದಿಂದ ನನಗೆ ಬೆದರಿಕೆ ಇದೆ ರಕ್ಷಣೆ ಕೊಡಿ ಎಂದು ವಿಡಿಯೋ ಹರಿಬಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಪ್ರಕರಣ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ.ಇನ್ನು ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸಿದ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ.
ಜಾರಕಿಹೊಳಿ CD ಕೇಸ್: ಸಾರ್ವಜನಿಕವಾಗಿ ಕಾಣಿಸಿಕೊಂಡ ಯುವತಿ
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಉದ್ಯೋಗ ಕೇಳಿ ಬಂದ ಯುವತಿಯನ್ನು ದುರ್ಬಳಕೆ ಮಾಡಿಕೊಂಡಿರುವುದು ಆಕೆಯ ಹೇಳಿಕೆಯಿಂದ ಸ್ಪಷ್ಟವಾಗಿರುವುದರಿಂದ ರಮೇಶ್ ಜಾರಕಿಹೊಳಿ ವಿರುದ್ಧ ಸುಮೋಟೋ ಕೇಸ್ ದಾಖಲಿಸಿ, ಬಂಧಿಸಿ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ವಿಡಿಯೋ ಬಿಡುಗಡೆ ಮಾಡಿದ್ದು ರಮೇಶ್ ಜಾರಕಿಹೊಳಿಯವರೇ ಎಂದು ಯುವತಿ ನೇರವಾಗಿ ಆರೋಪಿಸಿದ್ದರೂ
ಗೃಹ ಇಲಾಖೆ ಮಾಜಿ ಸಚಿವರನ್ನ ವಿಚಾರಣೆ ನಡೆಸದೆ ಇನ್ನೂ ಮೀನಾಮೇಷ ಎಣಿಸುತ್ತಿರುವುದೇಕೆ? ಎಂದು ಪ್ರಶ್ನಿಸಿರುವ ಕಾಂಗ್ರೆಸ್, ಈ ಸರ್ಕಾರ ತಮ್ಮವರ ರಕ್ಷಣೆಗೆ ನಿಂತಿದಿಯೇ ಹೊರತು ರಾಜ್ಯದ ಜನತೆಯ ರಕ್ಷಣೆಗಲ್ಲ ಎನ್ನುವುದು ಬಿಜೆಪಿ ನಡವಳಿಕೆಗಳಿಂದ ತಿಳಿಯುತ್ತದೆ ಎಂದು ಆರೋಪಿಸಿದೆ.
ಯುವತಿ ಹಾಗೂ ಕುಟುಂಬಸ್ಥರಿಗೆ ಜೀವ ಬೆದರಿಕೆ ಇರುವುದು ಆಕೆಯ ಹೇಳಿಕೆಯಲ್ಲಿ ತಿಳಿಯುತ್ತದೆ. ರಕ್ಷಣೆ ನೀಡಬೇಕೆಂದು ಕೇಳಿಕೊಂಡಿದ್ದಾಳೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಕೂಡಲೇ ಆಕೆ ಹಾಗೂ ಕುಟುಂಬಕ್ಕೆ ಸೂಕ್ತ ರಕ್ಷಣೆ ಮಾಡಬೇಕು, ನೊಂದವರ ರಕ್ಷಣೆ ನಿಮ್ಮ ಜವಾಬ್ದಾರಿಯಾಗಿದೆ ಎಂದು ಟ್ವೀಟ್ ಮಾಡಿದೆ.
ವಿಡಿಯೋ ಬಿಡುಗಡೆ ಮಾಡಿದ್ದೇ ಮಹಾ ಅಪರಾಧ ಎನ್ನುವುದನ್ನ ಬಿಟ್ಟು ಸರ್ಕಾರಕ್ಕೆ ಮಹಿಳೆಯರ ಪರ ಗೌರವ ಇದಿದ್ದೇ ಆದರೆ ಯುವತಿಯ ಶೋಷಣೆ ಮಾಡಿದ ರಮೇಶ್ ಜಾರಕಿಹೊಳಿಯವರ ವಿರುದ್ಧ ಸುಮೋಟೋ ಕೇಸ್ ದಾಖಲಿಸಿ ಬಂಧಿಸಿ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.