ರಾಸಲೀಲೆ ಸಿಡಿ ಪ್ರಕರಣದ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ. ಇನ್ನು ರಾಜೀನಾಮೆ ಪತ್ರದಲ್ಲಿ ರಮೇಶ್ ಜಾರಕಿಹೊಳಿ ಹೇಳಿರುವುದು ಏನು?
ಬೆಂಗಳೂರು, (ಮಾ.3): ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ವಿಡಿಯೋ ರಿಲೀಸ್ ಆಗಿದ್ದು, ಫುಲ್ ವೈರಲ್ ಆಗುತ್ತಿದೆ.
ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇನ್ನು ಈ ಸಿ.ಡಿ. ರಾಜ್ಯ ರಾಜಕಾರಣದಲ್ಲಿ ಸಂಚನ ಮೂಡಿಸಿದೆ. ಸಿಡಿ ಪ್ರಕರಣದ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ.
undefined
ಸಿಡಿ ಸುಳಿಯಲ್ಲಿ ಜಾರಕಿಹೊಳಿ: ನೈತಿಕ ಹೊಣೆ ಹೊತ್ತು ಸಾಹುಕಾರ್ ರಾಜೀನಾಮೆ!
ಇಂದು (ಬುಧವಾರ) ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರಿಗೆ ರಮೇಶ್ ಜಾರಕಿಹೊಳಿ ಅವರು ರಾಜೀನಾಮೆ ಪತ್ರ ರವಾನೆ ಮಾಡಿದ್ದಾರೆ.
ರಾಜೀನಾಮೆ ಪತ್ರದಲ್ಲಿ ಅವರು ನನ್ನ ಮೇಲೆ ಬಂದಿರುವ ಆರೋಪಗಳು ಸತ್ಯಕ್ಕೆ ದೂರವಾಗಿದ್ದು, ಈ ಬಗ್ಗೆ ಶೀಃಘ್ರದಲ್ಲೇ ತನಿಖೆಯಾಗಬೇಕು, ನಾನು ನಿರ್ದೋಶಿಯಾಗುವ ವಿಶ್ವಾಸವಿದ್ದರೂ ಕೂಡ ನೈತಿಕ ಹೊಣೆಯನ್ನು ಹೊತ್ತು ನಾನು ನನ್ನ ಸಚಿವ ಸಂಪುಟ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿರುತ್ತೇನೆ. ದಯವಿಟ್ಟು ಇದನ್ನು ಅಂಗೀಕರಿಸುವಂತೆ ಸಿಎಂ ಬಿಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.
ರಾಸಲೀಲೆ ವಿಡಿಯೋ ರಿಲೀಸ್: ಸಚಿವ ರಮೇಶ್ ಜಾರಕಿಹೊಳಿ ಮೊದಲ ಪ್ರತಿಕ್ರಿಯೆ
ಇನ್ನು ರಾಜೀನಾಮೆಯನ್ನು ಅಂಗೀಕರಿಸದಂತೆ ಗೋಕಾಕ್‌ನಲ್ಲಿ ರಮೇಶ್ ಜಾರಕಿಹೊಳಿ ಅಭಿಮಾನಗಳು ಪ್ರತಿಭಟನೆ ಮಾಡುತ್ತಿದ್ದಾರೆ. ಅಲ್ಲದೇ ಬೆಳಗಾವಿ ಬಂದ್ ಮಾಡುವ ಎಚ್ಚಡಿಕೆಯನ್ನೂ ಸಹ ಕೊಟ್ಟಿದ್ದಾರೆ.