
ಬೆಂಗಳೂರು[ಫೆ.08]: ಕರ್ನಾಟಕ ರಾಜಕೀಯದಲ್ಲಿ ಸಂಚಲನವುಂಟು ಮಾಡುವ ಬೆಳವಣಿಗೆಗಳಾಗುತ್ತಿವೆ. ಒಂದೆಡೆ ಸಿಎಂ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ ಆಡಿಯೋ ಒಂದನ್ನು ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಬಿಜೆಪಿ ಹಾಗೂ ಯಡಿಯೂರಪ್ಪ ವಿರುದ್ಧ ಸ್ಪೀಕರ್ ಬುಕ್ ಮಾಡಿದ್ದಾರೆಂಬ ಆರೋಪ ಮಾಡಿದ್ದಾರೆ. ಇಷ್ಟೇ ಅಲ್ಲದೇ ಪ್ರಧಾನಿ ಮೋದಿ ವಿರುದ್ಧವೂ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ದೇವರ ಹೆಸರಲ್ಲಿ ಯಡಿಯೂರಪ್ಪ ದೇವದುರ್ಗ ಭೇಟಿ ರಹಸ್ಯ ಬಯಲು
ಕುಮಾರಸ್ವಾಮಿ ಆಡಿಯೋ ಬಿಡುಗಡೆ ಮಾಡಿದ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ 'ಆಡಿಯೋ ಕೇಳಿಸಿಕೊಳ್ಳಿ ನಿಮ್ಮ ಪಕ್ಷದ ನಿಯತ್ತೇನು ಎಂಬುವುದು ನಿಮಗೇ ತಿಳಿಯುತ್ತದೆ ನರೇಂದ್ರ ಮೋದಿಯವರೇ. ಮಾಡೋದೆಲ್ಲಾ ಅನಾಚಾರ, ಮನೆ ಮುಂದೆ ಬೃಂದಾವನ. Shame on You!!' ಎಂದು ಪ್ರಧಾನಿ ಮೋದಿಗೆ ಟಾಂಗ್ ನೀಡಿದ್ದಾರೆ.
ಇತ್ತ ಸಿಎಂ ಕುಮಾರಸ್ವಾಮಿ ತಮ್ಮ ಮೇಲೆ ಆರೋಪ ಮಾಡಿರುವ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಪ್ರತಿಪಕ್ಷ ನಾಯಕ ಬಿ. ಎಸ್ ಯಡಿಯೂರಪ್ಪ ಕೂಡಾ ಸುದ್ದಿಗೋಷ್ಠಿ ನಡೆಸಿ ತಮ್ಮ ವಿರುದ್ಧ ಮಾಡಿರುವ ಆರೋಪ ಸಾಬೀತುಪಡಿಸಿದ್ರೆ ರಾಜಕೀಯ ನಿವೃತ್ತಿ ಘೋಷಿಸುವುದಾಗಿ ಹೇಳಿದ್ದಾರೆ.
ಆಪರೇಷನ್ ಕಮಲ ಸಾಬೀತು ಮಾಡಿದ್ರೆ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ: ಬಿಎಸ್‌ವೈ
ಸದ್ಯ ಬಜೆಟ್ ದಿನವಾದ ಇಂದು ರಾಜ ರಾಜಕೀಯದಲ್ಲಿ ಮಹತ್ತರ ಬೆಳವಣಿಗೆಗಳು ನಡೆಯುತ್ತಿವೆ. ಬಜೆಟ್ ಗಿಂತಲೂ ಹೆಚ್ಚಾಗಿ ಸರ್ಕಾರ ಉಳಿಯುತ್ತದೋ, ಬೀಳುತ್ತದೋ ಎಂಬ ಚರ್ಚೆ ನಡೆಯುತ್ತಿದೆ ಎಂಬುವುದು ಗಮನಾರ್ಹ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.