ಜೆಡಿಎಸ್ ಮುಖಂಡ ಶರವಣ ಈ ರೀತಿಯಾಗಿ ಮನವಿ ಮಾಡಿಕೊಂಡಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಜನರಲ್ಲಿ ಮತ ಯಾಚನೆ ಮಾಡಿದ್ದಾರೆ
ಬೆಂಗಳೂರು (ನ.02): ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ಪ್ರಾದೇಶಿಕ ಪಕ್ಷಗಳೇ ಮತದಾರರ ಆಯ್ಕೆಯಾಗಬೇಕು. ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆಯಲ್ಲಿ ಮತದಾರರು ಇದನ್ನು ಅರಿತು ತಮ್ಮ ಮತ ಚಲಾಯಿಸಬೇಕು ಎಂದು ಜೆಡಿಎಸ್ ವಕ್ತಾರ ಟಿ.ಎ. ಶರವಣ ಮನವಿ ಮಾಡಿದ್ದಾರೆ.
ರಾಜರಾಜೇಶ್ವರಿ ನಗರದ ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ವಿ. ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಪ್ರಾದೇಶಿಕ ಪಕ್ಷಗಳಿಗೆ ಆಯಾ ರಾಜ್ಯಗಳಲ್ಲಿನ ಸಮಸ್ಯೆಗಳ ಬಗ್ಗೆ ಸ್ಪಷ್ಟವಾದ ಅರಿವು ಇರುತ್ತದೆ. ಆದ್ದರಿಂದ ರಾಜ್ಯದ ಸಮಸ್ಯೆಗಳಿಗೆ ಪ್ರಾದೇಶಿಕ ಪಕ್ಷಗಳು ಬಹು ಬೇಗ ಸ್ಪಂದಿಸುತ್ತವೆ. ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳು ಆಳುತ್ತಿರುವ ರಾಜ್ಯಗಳನ್ನು ನೋಡಿದರೆ ಇದು ಗೊತ್ತಾಗುತ್ತದೆ ಎಂದು ಹೇಳಿದರು.
ಶಿರಾ, ಆರ್‌ಆರ್ ನಗರ ಪ್ರಚಾರ ಅಬ್ಬರ ಅಂತ್ಯ, ನಾಳೆ ಮತದಾನ! ...
ನಮ್ಮ ರಾಜ್ಯದಲ್ಲಿ ಎಚ್. ಡಿ. ದೇವೇಗೌಡ ಮತ್ತು ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯನ್ನು ಗಮನಿಸಿದಾಗ ಪ್ರಾದೇಶಿಕ ಪಕ್ಷದ ಮಹತ್ವ ಆರಿವಾಗುತ್ತದೆ. ಆಗ ನಾವು ಪ್ರತಿ ಸಮಸ್ಯೆಗೂ ಪರಿಹಾರ ಸೂಚಿಸುವಂತೆ ಕೇಂದ್ರ ಸರ್ಕಾರದ ಬಳಿ ಹೋಗುತ್ತಿರಲಿಲ್ಲ. ಜೆಡಿಎಸ್ ಪಕ್ಷ ರಾಜ್ಯದ ಆಗುಹೋಗುಗಳೊಂದಿಗೆ ನಿಕಟ ಸಂಬಂಧ ಹೊಂದಿದೆ. ರಾಜ್ಯದ ಕೃಷಿ ಮತ್ತು ಕೈಗಾರಿಕೆಯ ಅಭಿವೃದ್ಧಿಯಲ್ಲಿ ಜೆಡಿಎಸ್ ಮಹತ್ವದ ಕೊಡುಗೆ ನೀಡಿದೆ ಎಂದು ಶರವಣ ಹೇಳಿದರು.