ಹಿಂದುಗಳು ಕೈಗೆ ಬಳೆ ತೊಟ್ಟಿಲ್ಲ, ಎದೆಯೊಡ್ಡಿ ನಿಲ್ಲುವ ಶಕ್ತಿ ನಮಗಿದೆ: ಬಿ.ವೈ.ರಾಘವೇಂದ್ರ ಎಚ್ಚರಿಕೆ

By Suvarna News  |  First Published Jul 29, 2022, 3:24 PM IST

 ಪ್ರವೀಣ್ ನೆಟ್ಟಾರು ಹತ್ಯೆಗೆ ರಾಜ್ಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು,  ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಪಕ್ಷದ ಸಾಮಾಜಿಕ ಮಾಧ್ಯಮ ನಿರ್ವಹಣೆ ಸೇರಿದಂತೆ, ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳ ರಾಜೀನಾಮೆ ನೀಡುತ್ತಿದ್ದಾರೆ. ಇನ್ನು ಇದಕ್ಕೆ ಸಂಸದ ಬಿವೈ ರಾಘವೇಂದ್ರ ಪ್ರತಿಕ್ರಿಯಿಸಿದ್ದಾರೆ.


ಶಿವಮೊಗ್ಗ, (ಜುಲೈ.29): ಹಿಂದು ಕಾರ್ಯಕರ್ತರು ಕೈಗಳಿಗೆ ಬಳೆ ತೊಟ್ಟಿಲ್ಲ. ಜಿಹಾದಿಗಳಿಗೆ ಬೆನ್ನು ತೋರಿಸಿಲ್ಲ. ಎದೆಯೊಡ್ಡಿ ನಿಲ್ಲುವ ಶಕ್ತಿ ನಮಗಿದೆ. ಎಂದು ಶಿವಮೊಗ್ಗ ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಒತ್ತಾಯಿಸಿದ್ದಾರೆ. 

ಶಿವಮೊಗ್ಗದ ಗೋಪಿ ವೃತ್ತದಲ್ಲಿ ಇಂದು (ಶುಕ್ರವಾರ) ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ವಿಶ್ವ ಹಿಂದು ಪರಿಷದ್ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ರಾಘವೇಂದ್ರ, ಯಾವುದೇ ಕಾರಣಕ್ಕೂ ಇನ್ಮುಂದೆ ಇನ್ನೊಬ್ಬ ಹಿಂದು ಕಾರ್ಯಕರ್ತನ ನೆತ್ತರು ಮತ್ತೆ ಹರಿಯದಂತೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ಅನೇಕ ಹಿಂದುಗಳ ತ್ಯಾಗ ಬಲಿದಾನ ಆಗುತ್ತಿರುವುದು ನಮ್ಮ ದೌರ್ಭಾಗ್ಯವಾಗಿದೆ. ಇನ್ನೆಷ್ಟು ಹಿಂದು ಕಾರ್ಯಕರ್ತರ ಬಲಿ ಆಗಬೇಕಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Tap to resize

Latest Videos

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ NIAಗೆ ಹಸ್ತಾಂತರ

ಈಗಾಗಲೇ ದೇಶ ಮತ್ತು ರಾಜ್ಯದಲ್ಲೂ ಬಿಜೆಪಿ ಸರ್ಕಾರ ಇದ್ದರೂ ಹಿಂದುಗಳಿಗೆ ರಕ್ಷಣೆ ಸಿಗುತ್ತಿಲ್ಲ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಸಮಾಜದಲ್ಲಿ ಮತೀಯವಾದಿಗಳು ಕ್ಯಾನ್ಸರ್‌ನಂತೆ ಹಬ್ಬಿದ್ದಾರೆ. ಈಗಾಗಲೇ ಮೂರನೇ ಹಂತ ತಲುಪಿದ್ದು ಒಂದೇ ಬಾರಿಗೆ ನಿರ್ಮೂಲನೆ ಮಾಡುವುದಕ್ಕೆ ಸಾಧ್ಯವಿಲ್ಲ. ಹಂತ ಹಂತವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಆ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ ಎಂದರು.

ರಾಜ್ಯದಲ್ಲೂ ಉತ್ತರ ಪ್ರದೇಶ ಮಾದರಿ ಆಡಳಿತ ಜಾರಿಗೊಳ್ಳಬೇಕು ಎಂಬ ಆಗ್ರಹ ಕೇಳಿಬರುತ್ತಿದೆ. ಆ ನಿಟ್ಟಿನಲ್ಲೂ ಚರ್ಚೆಗಳು ನಡೆಯುತ್ತಿವೆ. ಆದಷ್ಟು ಬೇಗ ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಕೊನೆಯಾಗಬೇಕಿದೆ ಎಂದು ಆಗ್ರಹಿಸಿದರು.

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಪಕ್ಷದ ಸಾಮಾಜಿಕ ಮಾಧ್ಯಮ ನಿರ್ವಹಣೆ ಸೇರಿದಂತೆ, ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳ ರಾಜೀನಾಮೆ ನೀಡುತ್ತಿರುವುದು ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆ ಎದುರಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆಯ ನಂತರ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ತವರು ಕ್ಷೇತ್ರ ಹಾಗೂ ಲೋಕಸಭೆ ಕ್ಷೇತ್ರದಲ್ಲಿ ನಾಯಕತ್ವದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. 

click me!