ಬೆಲೆ ಏರಿಕೆ ಖಂಡಿಸಿ ಬಿಜೆಪಿ ಬೂತ್ ಅಧ್ಯಕ್ಷ ರಾಜೀನಾಮೆ, ನಾಯಕರಿಗೆ ಇರುಸು ಮುರುಸು

By Suvarna NewsFirst Published Aug 25, 2021, 8:29 PM IST
Highlights

* ಬೆಲೆ ಏರಿಕೆ ಖಂಡಿಸಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ಬಿಜೆಪಿ ಮುಖಂಡ
* ಸಾರ್ವಜನಿಕರ ಎದುರೇ ಬೂತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ
* ಯಡಿಯೂರಪ್ಪನವರ ತವರು ಜಿಲ್ಲೆಯಲ್ಲಿ ನಡೆದ ಘಟನೆ

ಶಿವಮೊಗ್ಗ, (ಆ.25): ಬೆಲೆ ಏರಿಕೆಯನ್ನು  ಖಂಡಿಸಿ ಬಿಜೆಪಿ ಮುಖಂಡರೊಬ್ಬರು ತಮ್ಮ ಬೂತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ. ಅಚ್ಚರಿ  ಮೂಡಿಸಿದ್ದಾರೆ. ಅದರಲ್ಲೂ ಇದು ನಡೆದಿದ್ದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ತವರು ಜಿಲ್ಲೆಯಲ್ಲಿ.

 ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಆದ್ರೆ,  ಶಿವಮೊಗ್ಗ ನಗರದ ಶೇಖರ್ ಎನ್ನುವರು ಬೂತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಗ್ರಾಹಕರಿಗೆ ಎಲ್‌ಪಿಜಿ ಶಾಕ್: ಸಿಲಿಂಡರ್ ಬೆಲೆ 25 ರೂ. ಹೆಚ್ಚಳ!

ನಗರದ ಅಶೋಕನಗರದಲ್ಲಿ ಬಿಜೆಪಿ ವತಿಯಿಂದ ವಾರ್ಡ್ ಅಧ್ಯಕ್ಷರ ಮನೆ ಬಾಗಿಲಿಗೆ ತೆರಳಿ ನಾಮಫಲಕವನ್ನು ವಿತರಿಸುವ ಕಾರ್ಯಕ್ರಮ ನಡೆಯುತ್ತಿತ್ತು.  ಬಿಜೆಪಿ ಮುಖಂಡರು ಸೇರಿ ವಾರ್ಡ್ ನಂ.26ರ ಬೂತ್ ಸಂಖ್ಯೆ 199ರ ಅಧ್ಯಕ್ಷರಾಗಿದ್ದ ಶೇಖರ್ ಅವರ ಮನೆಗೆ ನಾಮಫಲಕವನ್ನು ನೀಡಲು ಬಂದಿದ್ದರು. ಈ ವೇಳೆ ಶೇಖರ್, ನಾಮಫಲಕವನ್ನು ತಿರಸ್ಕಾರ ಮಾಡುವುದರ ಜೊತೆಗೆ ಬಂದ ಮುಖಂಡರುಗಳಿಗೆ ರಾಜೀನಾಮೆ ಪತ್ರ ಸಹ ನೀಡಿದ್ದಾರೆ. ಈ ವೇಳೆ ಬಿಜೆಪಿ ಮುಖಂಡರಿಗೆ ಮುಖಭಂಗ ಆದಂತಾಗಿದೆ.

ರಾಜೀನಾಮೆ ಪತ್ರದಲ್ಲೇನಿದೆ?
ಬಿಜೆಪಿ ಅಧಿಕಾರಕ್ಕೆ ಬರುವ ಮೊದಲು ಜನಸಾಮಾನ್ಯರಿಗೆ ಅಭಿವೃದ್ಧಿಯ ವಿಷಯವಾಗಿ ನೂರಾರು ಭರವಸೆಗಳನ್ನು ನೀಡಿದ್ದರು. ಆದರೆ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ತನ್ನ ಹೇಳಿಕೆಗೆ ವ್ಯತಿರಿಕ್ತ ಎನ್ನುವ ಹಾಗೆ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಸೇರಿದಂತೆ ದಿನಸಿ ವಸ್ತುಗಳ ಬೆಲೆ ಗಗನಕ್ಕೇರಿಸಿದೆ. ಈ ಕಾರಣ ನಾವು ಜನರ ಮಧ್ಯದಲ್ಲಿ ಪಕ್ಷದ ಪರವಾಗಿ ಮಾತನಾಡಲು ಹೋದಾಗ ನಾವು ಜನರಿಗೆ ಉತ್ತರ ನೀಡಲು ಕಷ್ಟವಾಗುತ್ತಿದೆ. ಅದೆಷ್ಟೋ ಬಾರಿ ಜನರಿಂದ ಅವಮಾನಕ್ಕೆ ಒಳಗಾಗಬೇಕಾಗಿದೆ. ಈ ಕಾರಣಕ್ಕೆ ನಾನು ಬಿಜೆಪಿ ಸದಸ್ಯತ್ವ ಹಾಗೂ ಬೂತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಪತ್ರದಲ್ಲಿ ತಿಳಿಸಿದ್ದಾರೆ.

click me!