ಬಿಜೆಪಿಯ ಹಿಂದುತ್ವ ಉಳಿಬೇಕು, ಕುಟುಂಬ ರಾಜಕಾರಣ ಅಳಿಬೇಕು; ಇದಕ್ಕಾಗಿ ಬಂಡಾಯ ಸ್ಪರ್ಧೆಗಿಳೀಬೇಕು: ಕೆ.ಎಸ್. ಈಶ್ವರಪ್ಪ!

By Sathish Kumar KH  |  First Published Mar 17, 2024, 5:27 PM IST

ಹಿಂದುತ್ವ ಉಳಿಸಬೇಕು, ಪಕ್ಷ ಉಳಿಸಬೇಕು ಹಾಗೂ ಕುಟುಂಬ ರಾಜಕಾರಣ ದೂರ ಆಗಬೇಕು.  ಹೀಗಾಗಿ ನಾನು ಬಂಡಾಯ ಸ್ಪರ್ಧೆ ಮಾಡುತ್ತಿರುವುದಾಗಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ತಿಳಿಸಿದರು.


ಶಿವಮೊಗ್ಗ (ಮಾ.17): ರಾಜ್ಯದಲ್ಲಿ ಹಿಂದುತ್ವವಾದಿಗಳನ್ನು ತುಳಿಯುತ್ತಿದ್ದು, ಅದು ಸರಿಯಾಗಬೇಕು. ಹಿಂದುತ್ವ ಉಳಿಸಬೇಕು, ಪಕ್ಷ ಉಳಿಸಬೇಕು ಹಾಗೂ ಕುಟುಂಬ ರಾಜಕಾರಣ ದೂರ ಆಗಬೇಕು. ಒಟ್ಟಾರೆ ನರೇಂದ್ರ ಮೋದಿಯವರ ಆಶಯದಂತೆ ಕರ್ನಾಟಕದಲ್ಲಿ ಬಿಜೆಪಿಯಲ್ಲಿ ಬದಲಾವಣೆ ಬರಬೇಕು. ಹೀಗಾಗಿ ನಾನು ಬಂಡಾಯ ಸ್ಪರ್ಧೆ ಮಾಡುತ್ತಿರುವುದಾಗಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ತಿಳಿಸಿದರು.

ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಜ್ಯದ ಉಸ್ತುವಾರಿ ರಾಧಾ ಮೋಹನ್ ಅಗರ್ವಾಲ್ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಭೇಟಿಗೆ ಬಂದಿದ್ದರು. ಬಂಡಾಯ ಸ್ಪರ್ಧೆಯ ಬಗ್ಗೆ ಚರ್ಚೆ ನಡೆಸಿದರು. ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂಬುದನ್ನು ನಾನು ಅವರಿಗೆ ಸ್ಪಷ್ಟವಾಗಿ ತಿಳಿಸಿದ್ದೇನೆ. ಅವರು, ಕಾಂತೇಶನನ್ನು ಎಂಎಲ್ಸಿ ಮಾಡುವುದಾಗಿ ತಿಳಿಸಿದರು. ಆದರೆ, ನನ್ನ ಪುತ್ರ ಕಾಂತೇಶ್‌ನಲ್ಲಿ ಎಂಎಲ್‌ಸಿ ಮಾಡಿವುದು, ಎಂಪಿ ಮಾಡುವುದು ನನ್ನ ಉದ್ದೇಶವಲ್ಲ. ರಾಜ್ಯದ ಅನೇಕ ಕಾರ್ಯಕರ್ತರು ನೋವು ಅನುಭವಿಸುತ್ತಿದ್ದು,ಇದಕ್ಕೆ ಪರಿಹಾರ ಸಿಗಬೇಕೆಂದರೆ ಪಕ್ಷ  ಶುದ್ದಿಕರಣವಾಗಬೇಕು ಎಂದು ಹೇಳಿದ್ದೇನೆ ಎಂದು ತಿಳಿಸಿದರು.

Latest Videos

undefined

Lok Sabha Election 2024: ನನಗೆ ನೀಡಿದ ಮತ ಮೋದಿಗೆ ತಲುಪಲಿವೆ: ಮಾಜಿ ಸಚಿವ ವಿ.ಸೋಮಣ್ಣ

ನಂತರ, ರಾಜಯದಲ್ಲಿ ಹಿಂದುತ್ವ ಉಳಿಸಬೇಕು, ಬಿಜೆಪಿ ಪಕ್ಷ ಉಳಿಸಬೇಕೆಂದರೆ ಕುಟುಂಬ ರಾಜಕಾರಣ ದೂರ ಆಗಬೇಕು., ನರೇಂದ್ರ ಮೋದಿಯವರ ಆಶಯದಂತೆ ಕರ್ನಾಟಕದಲ್ಲಿ ಬಿಜೆಪಿಯಲ್ಲಿ ಬದಲಾವಣೆ ಬರಬೇಕು. ನನ್ನ ಜೊತೆಗಿನ ಚರ್ಚೆಯನ್ನು ಬಿಜೆಪಿ ಹೈಕಮಾಂಡ್‌ಗೆ ಅವರು ತಿಳಿಸುತ್ತಾರೆ. ಮೋದಿ  ಕಾರ್ಯಕ್ರಮಕ್ಕೆ ಬರಲು ಆಹ್ವಾನ ನೀಡಿದರು. ನಾನು ಬರುವುದಿಲ್ಲ ಚುನಾವಣೆಯಲ್ಲಿ ಗೆದ್ದು, ಮೋದಿಗೆ ಬೆಂಬಲಿಸುವುದಾಗಿ ತಿಳಿಸಿದ್ದೇನೆ. ಮೋದಿಯನ್ನು ಪ್ರಧಾನಿ ಮಾಡುವ ನಿಟ್ಟಿನಲ್ಲಿ ನಾನು ಜೊತೆಗಿರುವುದಾಗಿ ತಿಳಿಸಿದ್ದೇನೆ ಎಂದು ಹೇಳಿದರು.

ಇಡೀ ಲೋಕಸಭಾ ಕ್ಷೇತ್ರದಲ್ಲಿ ಲಿಂಗಾಯತರು, ಈಡಿಗರು ಸೇರಿದಂತೆ ನಾವೆಲ್ಲ ಹಿಂದೂಗಳು ನಿಮ್ಮ ಜೊತೆಗಿದ್ದೇವೆ ಎಂದು ತಿಳಿಸಿದ್ದಾರೆ. ಹಿಂದುತ್ವವಾದ ಹಾಗೂ ಬಿ.ಎಸ್. ಯಡಿಯೂರಪ್ಪ ಕುಟುಂಬದಿಂದ ಆದ ಅನ್ಯಾಯವನ್ನು ನೋಡಿಯೇ ಜನರು ನನ್ನನ್ನು ಚುನಾವಣೆಯಲ್ಲಿ ಕೈ ಹಿಡಿಯುತ್ತಾರೆ. ಇನ್ನು ಬಿಜೆಪಿಯವರು ಈಶ್ವರಪ್ಪನವರ ಮನವೊಲಿಸುತ್ತೇವೆ ಎಂದು ಹೇಳಿದ ಬಗ್ಗೆ ಮಾತನಾಡಿದ ಅವರು, ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ ನಾನು. ಈಶ್ವರಪ್ಪ ಆಕ್ರೋಶದಿಂದ ಬಂಡಾಯ ಸ್ಪರ್ಧೆ ಮಾಡುತ್ತಾರೆ ಎಂಬ ನಂಬಿಕೆ ಬಿಜೆಪಿಯವರಲ್ಲಿ ಇಲ್ಲ. ನಾನು ಆಕ್ರೋಶದಿಂದ ಮಾತನಾಡುತ್ತಿಲ್ಲ. ಬಿ.ಎಸ್. ಯಡಿಯೂರಪ್ಪ ಕುಟುಂಬದ ವ್ಯವಸ್ಥೆಯ ವಿರುದ್ಧ ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಂಬೈ ರಾಬರಿ ಮುಗಿಸಿ ಬೆಂಗಳೂರಿಗೆ ಬಂದ ಪಂಡಿತ್ ಗ್ಯಾಂಗ್; ಜ್ಯೂವೆಲ್ಲರಿ ಶಾಪ್ ಮಾಲೀಕನಿಗೆ ಶೂಟ್ ಮಾಡಿದ್ರು!

ಬರೋಬ್ಬರಿ 6 ತಿಂಗಳ ಕಾಲ ಹಟ ಹಿಡಿದು, ತಮ್ಮ ಪುತ್ರ ವಿಜಯೇಂದ್ರನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿದರು. ವಿಜಯೇಂದ್ರ ಲಿಂಗಾಯತ ಎಂದು ರಾಜ್ಯಾಧ್ಯಕ್ಷರನ್ನಾಗಿ ಮಾಡಿದರಾ? ಪಂಚಮಸಾಲಿ ಲಿಂಗಾಯತ ಬಸವನಗೌಡ ಪಾಟೀಲ್ ಯತ್ನಾಳ್ ಬಗ್ಗೆ ಯಾಕೆ ಹಟ ಹಿಡಿಯಲಿಲ್ಲ? ಒಕ್ಕಲಿಗ ಸಿ.ಟಿ. ರವಿಯನ್ನು ಯಾಕೆ ರಾಜ್ಯಾಧ್ಯಕ್ಷ ಮಾಡಲಿಲ್ಲ. ಶೋಭಾ ಕರಂದ್ಲಾಜೆಗೆ ಹಠ ಹಿಡಿದು ಟಿಕೆಟ್ ಕೊಡಿಸಿದ್ದಾರೆ. ಆದರೆ, ಸಿ.ಟಿ. ರವಿಗೆ ಯಾಕೆ ಟಿಕೆಟ್ ಕೊಡಿಸಲಿಲ್ಲ? ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದ ಜನತೆ ನನ್ನನ್ನು ಗೆಲ್ಲಿಸುತ್ತಾರೆ. ನಾನು ಹೋರಾಟ ನಡೆಸುತ್ತಿರುವುದೇ ಬಿಜೆಪಿಯಲ್ಲಿನ ಬದಲಾವಣೆಗಾಗಿ. ನಾನು ಗೆದ್ದೇ ಗೆಲ್ಲುತ್ತೇನೆ ಎಂದು ತಿಳಿಸಿದರು.

click me!