ಮುಡಾ ಹಗರಣದ ದಾಖಲೆಗಳನ್ನು ಕಾಂಗ್ರೆಸ್ ನಾಯಕರು ಸುಟ್ಟು ಹಾಕಿದ್ದಾರೆ ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಆರೋಪಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ ಕಾರಿದ್ದಾರೆ. ಶೋಭಾ ಕರಂದ್ಲಾಜೆಗೆ ಬೆಂಕಿ ಹಚ್ಚುವುದೇ ಕೆಲಸ. ಅವರು ಯಾವಾಗಲೂ ಉರಿಯುವ ಬೆಂಕಿಗೆ ತುಪ್ಪ ಸುರಿಯುತ್ತಾರೆ ಎಂದು ಟೀಕಿಸಿದ್ದಾರೆ.
ಉಡುಪಿ (ಅ.20): ಮುಡಾ ಹಗರಣದ ದಾಖಲೆಗಳನ್ನು ಕಾಂಗ್ರೆಸ್ ನಾಯಕರು ಸುಟ್ಟು ಹಾಕಿದ್ದಾರೆ ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಆರೋಪಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ ಕಾರಿದ್ದಾರೆ. ಶೋಭಾ ಕರಂದ್ಲಾಜೆಗೆ ಬೆಂಕಿ ಹಚ್ಚುವುದೇ ಕೆಲಸ. ಅವರು ಯಾವಾಗಲೂ ಉರಿಯುವ ಬೆಂಕಿಗೆ ತುಪ್ಪ ಸುರಿಯುತ್ತಾರೆ ಎಂದು ಟೀಕಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಶೋಭಾ ಅವರ ಬಗ್ಗೆ ಮಹಿಳೆಯಾಗಿ ವೈಯಕ್ತಿಕ ಗೌರವ ಇದೆ. ಆದರೆ, ಅವರು ಯಾವಾಗಲೂ ಉರಿವ ಬೆಂಕಿಗೆ ತುಪ್ಪ ಸುರಿಯುತ್ತಾರೆ. ಅದಕ್ಕಾಗಿ ಹೀಗೆಲ್ಲಾ ಮಾತನಾಡುತ್ತಿದ್ದಾರೆ. ಮುಡಾ ಮೇಲೆ ರಾಜಕೀಯ ಪ್ರೇರಿತವಾಗಿ ಇ.ಡಿ. ರೈಡ್ ನಡೆಯುತ್ತಿದೆ. ರಾಜಭವನ, ರಾಜ್ಯಪಾಲರು ಬಿಜೆಪಿಯ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕಸ್ತೂರಿ ರಂಗನ್ ವರದಿಯ ಬಗ್ಗೆ ಅರಣ್ಯಮಂತ್ರಿ ಖಂಡ್ರೆ ಅವರ ಜೊತೆ ಚರ್ಚೆ ಮಾಡಿ ಸರ್ಕಾರ ನಿರ್ಧಾರಕ್ಕೆ ಬಂದಿದೆ. ನೀತಿ ಸಂಹಿತೆ ಇರುವುದರಿಂದ ಈಗ ಯಾವುದೇ ಭರವಸೆಯನ್ನು ನೀಡುವುದಿಲ್ಲ ಎಂದವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಕಾಂಗ್ರೆಸ್ ಸರ್ಕಾರ ಕರಾವಳಿಗೆ ಅನ್ಯಾಯ ಮಾಡಿದೆ, ಕರಾವಳಿಗೆ ಬಿಡಿಗಾಸು ಅನುದಾನ ನೀಡಿಲ್ಲ ಎಂಬ ಬಿಜೆಪಿ ಆರೋಪಕ್ಕೆ ಉತ್ತರಿಸಿದ ಸಚಿವೆ ಹೆಬ್ಬಾಳ್ಕರ್, ಬಿಜೆಪಿ ನಾಯಕರು ಕೇಂದ್ರದಿಂದ ರಾಜ್ಯಕ್ಕಾಗುತ್ತಿರುವ ಅನ್ಯಾಯದ ಬಗ್ಗೆ ಧನಿಯೆತ್ತಿಲ್ಲ ಯಾಕೆ ? ರಾಜ್ಯದ ಬಿಜೆಪಿ ಸಂಸದರು ಏನು ಮಾಡ್ತಿದ್ದಾರೆ ? ದಾರಿ ತಪ್ಪಿಸಿ ಗೂಬೆ ಕೂರಿಸೋ ಕೆಲಸ ಬಿಡಿ. ಬಿಜೆಪಿಗೆ ಆಪಾದನೆ ಮಾಡೋದು ಬಿಟ್ಟು ಬೇರೇನು ಗೊತ್ತಿಲ್ಲ ಎಂದು ಕಿಡಿ ಕಾರಿದರು.
undefined
ಸಿದ್ದು ಪರ ಹಿರಿಯ ಸಚಿವರ ಬ್ಯಾಟಿಂಗ್: ‘ತನಿಖೆಗೆ ಆದೇಶಿಸಿದ ತಕ್ಷಣ ಆರೋಪ ಸಾಬೀತಾದಂತೆ ಅಲ್ಲ. ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆ ಗೆದ್ದಿದ್ದೇವೆ. ಸಿದ್ದರಾಮಯ್ಯ ಅವರೊಂದಿಗೆ ನಾವೆಲ್ಲರೂ ಗಟ್ಟಿಯಾಗಿ ನಿಂತಿದ್ದು, ಅವರೇ ಮುಖ್ಯಮಂತ್ರಿ ಆಗಿ ಮುಂದುವರೆಯುತ್ತಾರೆ. ರಾಜೀನಾಮೆ ನೀಡುವ ಪ್ರಮೇಯವೇ ಇಲ್ಲ’ ಎಂದು ಹಿರಿಯ ಸಚಿವರು ಒಟ್ಟಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಗಟ್ಟಿಯಾಗಿ ಧ್ವನಿ ಎತ್ತಿದ್ದಾರೆ.
ಚನ್ನಪಟ್ಟಣದಲ್ಲಿ ನಿಖಿಲ್ ಸ್ಪರ್ಧೆಗೆ ಒತ್ತಡ ಇದೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
ಜೊತೆಗೆ, ಮುಡಾ ತನಿಖೆಗೆ ಆದೇಶಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎನ್ನುತ್ತಿರುವ ಬಿಜೆಪಿ-ಜೆಡಿಎಸ್ ನಾಯಕರಿಗೆ ಸಚಿವರು ತಿರುಗೇಟು ನೀಡಿದ್ದಾರೆ. ಸಚಿವರಾದ ಡಾ.ಜಿ. ಪರಮೇಶ್ವರ್, ಪ್ರಿಯಾಂಕ್ ಖರ್ಗೆ, ಲಕ್ಷ್ಮೀ ಹೆಬ್ಬಾಳ್ಕರ್, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ ಮೊದಲಾದವರು, ಮುಖ್ಯಮಂತ್ರಿಗಳ ರಾಜೀನಾಮೆ ಪ್ರಶ್ನೆಯೇ ಇಲ್ಲ. ನಾವೆಲ್ಲರೂ ಸಿದ್ದರಾಮಯ್ಯ ಅವರ ಪರ ಇದ್ದು ಬಿಜೆಪಿ-ಜೆಡಿಎಸ್ ರಾಜಕೀಯ ಸಂಚನ್ನು ರಾಜಕೀಯವಾಗಿಯೇ ಎದುರಿಸುತ್ತೇವೆ ಎಂದಿದ್ದಾರೆ.