'ದ್ವಿತೀಯ ಪಿಯುಸಿ ರಿಸಲ್ಟ್ ಕುಸಿಯಲು ಉಪನ್ಯಾಸಕರ ಕೊರತೆ, ಇದಕ್ಕೆ ಹೊಣೆ ಸುರೇಶ್ ಕುಮಾರ್'

By Suvarna NewsFirst Published Jul 15, 2020, 2:56 PM IST
Highlights

ದ್ವಿತೀಯ ಪಿಯುಸಿ ಫಲಿತಾಂಶ ನಿನ್ನೆ (ಮಂಗಳವಾರ) ಪ್ರಕಟವಾಗಿದ್ದು, ಒಟ್ಟಾರೆ ರಿಸಲ್ಟ್‌ ಕುಸಿತಗೊಂಡಿದೆ. ಹಾಗಾದ್ರೆ ಇದಕ್ಕೆ ಕಾರಣ ಏನು..? ಸಿದ್ದರಾಮಯ್ಯ ಅವರು ಹೇಳಿದ್ದಾರೆ ಮುಂದೆ ನೋಡಿ.

ಬೆಂಗಳೂರು, (ಜುಲೈ.15): ದ್ವಿತೀಯ ಪಿಯುಸಿ ಫಲಿತಾಂಶ ಕುಸಿಯಲು ಉಪನ್ಯಾಸಕರ ಕೊರತೆ ಕೂಡಾ ಕಾರಣ ಎನ್ನುವುದು ಸತ್ಯ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ನಿನ್ನೆ (ಮಂಗಳವಾರ) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಕೇವಲ ಶೇಕಡಾ 61.80 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 

ದ್ವಿತೀಯ ಪಿಯುಸಿ ಫಲಿತಾಂಶ: ಇಲ್ಲಿದೆ ಜಿಲ್ಲಾವಾರು ಫಲಿತಾಂಶ!

ಇನ್ನು ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ದ್ವಿತೀಯ ಪಿಯುಸಿ ಫಲಿತಾಂಶ ಕುಸಿಯಲು ಉಪನ್ಯಾಸಕರ ಕೊರತೆ ಕೂಡಾ ಕಾರಣ ಎನ್ನುವುದು ಸತ್ಯ . ಇದರ ಹೊಣೆಯನ್ನು ಪಿಯುಸಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಣ ಸಚಿವ ಎಸ್​. ಸುರೇಶ್ ಕುಮಾರ್ ಅವರೇ ವಹಿಸಬೇಕಾಗುತ್ತದೆ ಎಂದಿದ್ದಾರೆ.

ಪಿಯುಸಿ ಉಪನ್ಯಾಸಕರ ಹುದ್ದೆಗೆ 2018ರಲ್ಲಿ ಬರೆದಿದ್ದ ಪರೀಕ್ಷೆಯ‌ಲ್ಲಿ ಉತ್ತೀರ್ಣರಾದ 1298 ಅಭ್ಯರ್ಥಿಗಳ ಆಯ್ಕೆಪಟ್ಟಿ ಅಂತಿಮವಾಗಿತ್ತು.

ಆದರೆ ಮಧ್ಯೆಪ್ರವೇಶಿಸಿ‌‌ ಸ್ಥಳ ನಿಯುಕ್ತಿ ಕೌನ್ಸಿಲಿಂಗ್ ಪ್ರಕ್ರಿಯೆ ಸ್ಥಗಿತಗೊಳಿಸಿರುವುದು ಅಭ್ಯರ್ಥಿಗಳಿಗಷ್ಟೇ ಅಲ್ಲ ವಿದ್ಯಾರ್ಥಿಗಳಿಗೂ ಮಾಡಿರುವ ಅನ್ಯಾಯ.
2/2

— Siddaramaiah (@siddaramaiah)

 ಪಿಯುಸಿ ಉಪನ್ಯಾಸಕರ ಹುದ್ದೆಗೆ 2018ರಲ್ಲಿ ಬರೆದಿದ್ದ ಪರೀಕ್ಷೆಯ‌ಲ್ಲಿ ಉತ್ತೀರ್ಣರಾದ 1,298 ಅಭ್ಯರ್ಥಿಗಳ ಆಯ್ಕೆಪಟ್ಟಿ ಅಂತಿಮವಾಗಿತ್ತು. ಆದರೆ ಎಸ್​. ಸುರೇಶ್ ಕುಮಾರ್ ಅವರು ಮಧ್ಯೆಪ್ರವೇಶಿಸಿ‌ ಸ್ಥಳ ನಿಯುಕ್ತಿ ಕೌನ್ಸಿಲಿಂಗ್ ಪ್ರಕ್ರಿಯೆ ಸ್ಥಗಿತಗೊಳಿಸಿರುವುದು ಅಭ್ಯರ್ಥಿಗಳಿಗಷ್ಟೇ ಅಲ್ಲ, ವಿದ್ಯಾರ್ಥಿಗಳಿಗೂ ಮಾಡಿರುವ ಅನ್ಯಾಯವಾಗಿದೆ ಎಂದು ಸಿದ್ದರಾಮಯ್ಯ ಅವರು ಶಿಕ್ಷಣ ಸಚಿವ ಸುರೇಶ್​ ಕುಮಾರ್ ಅವರನ್ನು ದೂಷಿಸಿದ್ದಾರೆ.

click me!