ಸಂವಿಧಾನ ಬದಲಿಸಲ್ಲ ಅಂದ್ರೆ, ಬದಲಿಸ್ತೀನಿ ಎಂದ ಹೆಗಡೆ ಉಚ್ಚಾಟಿಸಿ: ಸಿಎಂ, ಡಿಸಿಎಂ

By Kannadaprabha NewsFirst Published Apr 14, 2024, 7:01 AM IST
Highlights

ಬಿಜೆಪಿ ಯಾವತ್ತೂ ಸಂವಿಧಾನದ ಪರವಾಗಿರಲಿಲ್ಲ. ಅನಂತ ಕುಮಾರ್‌ ಹೆಗಡೆ ಹಿಂದೆಯೂ ಸಂವಿಧಾನ ಬದಲಿಸುವ ಹೇಳಿಕೆ ನೀಡಿದ್ದರು. ಆಗ ಅವರು ಕೇಂದ್ರ ಸಚಿವರೂ ಆಗಿದ್ದರು. ಅವರ ವಿರುದ್ಧ ಯಾಕೆ ಕ್ರಮ ಕೈಗೊಳ್ಳಲಿಲ್ಲ?: ಸಿದ್ದರಾಮಯ್ಯ  

ಮೈಸೂರು/ಬೆಂಗಳೂರು(ಏ.14):  ಡಾ|ಬಿ.ಆರ್.ಅಂಬೇಡ್ಕರ್ ಅವರೇ ಬಂದರೂ ಸಂವಿಧಾನ ರದ್ದಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ತಿರುಗೇಟು ನೀಡಿದ್ದಾರೆ. ಸಂವಿಧಾನ ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಈಗ ಹೇಳುವವರು ಸಂವಿಧಾನ ಬದಲಿಸುವ ಹೇಳಿಕೆ ಕೊಟ್ಟಿದ್ದ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಯಾವ ಕ್ರಮ ಕೈಗೊಂಡಿದ್ದಾರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. 

ಮೈಸೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ಯಾವತ್ತೂ ಸಂವಿಧಾನದ ಪರವಾಗಿರಲಿಲ್ಲ. ಅನಂತ ಕುಮಾರ್‌ ಹೆಗಡೆ ಹಿಂದೆಯೂ ಸಂವಿಧಾನ ಬದಲಿಸುವ ಹೇಳಿಕೆ ನೀಡಿದ್ದರು. ಆಗ ಅವರು ಕೇಂದ್ರ ಸಚಿವರೂ ಆಗಿದ್ದರು. ಅವರ ವಿರುದ್ಧ ಯಾಕೆ ಕ್ರಮ ಕೈಗೊಳ್ಳಲಿಲ್ಲ? ಹೆಗಡೆ ಉತ್ತರ ಕನ್ನಡದಲ್ಲಿ ಏನೂ ಕೆಲಸ ಮಾಡಿರಲಿಲ್ಲ. 5 ವರ್ಷ ಮನೆಯಲ್ಲೇ ಕೂತಿದ್ದರು. ಲೋಕಸಭಾ ಚುನಾವಣೆ ಸಮಯದಲ್ಲಿ ಹೊರಗೆ ಬಂದಿದ್ದರು. ಇದೀಗ ಅವರ ಸೋಲು ಖಚಿತವಾದ ಕಾರಣ ಈ ಬಾರಿ ಟಿಕೆಟ್ ಕೊಟ್ಟಿಲ್ಲ ಅಷ್ಟೆ ಎಂದು ಹೇಳಿದರು.

ಅಂಬೇಡ್ಕರ್‌ ಅವರೇ ಬಂದ್ರೂ ದೇಶದ ಸಂವಿಧಾನ ಬದಲಾಯಿಸೋಕೆ ಆಗಲ್ಲ, ವಿಪಕ್ಷಗಳ ವಿರುದ್ಧ ಮೋದಿ ವಾಗ್ದಾಳಿ!

ಉಚ್ಚಾಟನೆ ಮಾಡಿ- ಡಿಕೆಶಿ: 

ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಪ್ರಧಾನಿ ಸಂವಿಧಾನ ಬದಲಿಸುತ್ತೇವೆ ಎಂದ ಅವರ ಪಕ್ಷದ ನಾಯಕರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಿಲ್ಲ ಏಕೆ? ಸಂವಿಧಾನದ ಬಗ್ಗೆ ಬದ್ಧತೆ ಇದ್ದರೆ ಸಂವಿಧಾನ ಬದಲಿಸುತ್ತೇವೆ ಎಂದವರನ್ನು ಮೊದಲು ತಮ್ಮ ಪಕ್ಷದಿಂದ ಉಚ್ಚಾಟಿಸಲಿ ಎಂದು ಆಗ್ರಹಿಸಿದರು.

ಬಿಜೆಪಿಗೆ 400 ಸೀಟು ಬಂದರೆ ಸಂವಿಧಾನ ಬದಲಿಸುತ್ತೇವೆ ಎಂದು ಅವರ ಪಕ್ಷದ ನಾಯಕರು, ಅಭ್ಯರ್ಥಿಗಳು ಹೇಳುತ್ತಿದ್ದಾರೆ. ಇಷ್ಟು ದಿನ ಈ ವಿಚಾರವಾಗಿ ಮೌನವಾಗಿದ್ದ ಪ್ರಧಾನಿ, ಈಗ ಚುನಾವಣೆ ಬಂದಿದೆ ಎಂದು ಸಂವಿಧಾನ ಬದಲಿಸುವುದಿಲ್ಲ ಎನ್ನುತ್ತಿದ್ದಾರೆ. ಎಲ್ಲಾ ವರ್ಗದವರು ಸಂವಿಧಾನಕ್ಕೆ ಅಪಾಯ ಬಂದಿದೆ, ನಮ್ಮ ಹಕ್ಕುಗಳಿಗೆ ಕುತ್ತು ಬಂದಿದೆ ಎಂದು ಧ್ವನಿ ಎತ್ತಿದ ಬಳಿಕ ಪ್ರಧಾನಿ ಈ ಮಾತು ಹೇಳಿದ್ದಾರೆ ಎಂದರು.

ಪ್ರಜಾಪ್ರಭುತ್ವ ಉಳಿಯಬೇಕಾದರೆ ಕಾಂಗ್ರೆಸ್ ಗೆಲ್ಲಬೇಕು: ಸಚಿವ ಮುನಿಯಪ್ಪ

ಬಿಜೆಪಿ ಸಂವಿಧಾನ ಪರ ಇಲ್ಲ

ಬಿಜೆಪಿ ಯಾವತ್ತೂ ಸಂವಿಧಾನದ ಪರವಾಗಿ ರಲಿಲ್ಲ. ಉತ್ತರ ಕನ್ನಡ ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಹಿಂದೆಯೂ ಸಂವಿಧಾನ ಬದಲಿಸುವ ಹೇಳಿಕೆ ನೀಡಿದ್ದರು. ಆಗ ಅವರು ಕೇಂದ್ರ ಸಚಿವರೂ ಆಗಿದ್ದರು. ಅವರ ವಿರುದ್ಧ ಬಿಜೆಪಿ ಯಾಕೆ ಕ್ರಮ ಕೈಗೊಳ್ಳಲಿಲ್ಲ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. 

ಇಷ್ಟು ದಿನ ಮೌನ ಯಾಕೆ?

ಬಿಜೆಪಿಗೆ 400 ಸೀಟು ಬಂದರೆ ಸಂವಿಧಾನ ಬದಲಿಸುತ್ತೇವೆ ಎಂದು ಬಿಜೆಪಿಗರು ಹೇಳುತ್ತಿದ್ದಾರೆ. ಇಷ್ಟು ದಿನ ಈ ವಿಚಾರವಾಗಿ ಮೌನವಾಗಿದ್ದ ಪ್ರಧಾನಿ ಮೋದಿ ಅವರು ಈಗ ಚುನಾವಣೆ ಬಂದಿದೆ ಎಂದು ಸಂವಿಧಾನ ಬದಲಿಸುವುದಿಲ್ಲ ಎನ್ನುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. 

click me!