ಸುಪ್ರೀಂಕೋರ್ಟ್ ಕೇವಲ ಕಾವೇರಿ ಪ್ರಾಧಿಕಾರದ ಆದೇಶ ಕೇಳ್ಬಾರದು?: ಬೊಮ್ಮಾಯಿ

Published : Sep 22, 2023, 01:28 PM IST
ಸುಪ್ರೀಂಕೋರ್ಟ್ ಕೇವಲ ಕಾವೇರಿ ಪ್ರಾಧಿಕಾರದ ಆದೇಶ ಕೇಳ್ಬಾರದು?: ಬೊಮ್ಮಾಯಿ

ಸಾರಾಂಶ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂಕೋರ್ಟ್ ಕೇವಲ ಸಿಡಬ್ಲುಎಂಎ (ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ) ಆದೇಶವನ್ನಷ್ಟೇ ಪರಿಗಣಿಸದ, ವಾಸ್ತವದ ಆಧಾರದಲ್ಲಿ  ತೀರ್ಪು ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಬೆಂಗಳೂರು (ಸೆ.22): ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂಕೋರ್ಟ್ ಕೇವಲ ಸಿಡಬ್ಲುಎಂಎ (ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ) ಆದೇಶವನ್ನಷ್ಟೇ ಪರಿಗಣಿಸದ, ವಾಸ್ತವದ ಆಧಾರದಲ್ಲಿ  ತೀರ್ಪು ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ಸುಪ್ರೀಂಕೋರ್ಟ್ ಎರಡು ರಾಜ್ಯಗಳ ವಾದ ಕೇಳಿ ಸಿಡಬ್ಲುಎಂಎ ಆದೇಶ ಎತ್ತಿ ಹಿಡಿದಿದೆ. ಮುಂದಿನ 15 ದಿನ ಸಿಡಬ್ಲುಎಂಎ ಆದೇಶ ಪಾಲನೆ ಮಾಡಬೇಕು ಅಂತ ಹೇಳಿರುವುದು ದುರದೃಷ್ಟಕರ ಎಂದರು. ಮತ್ತೊಮ್ಮೆ ಕರ್ನಾಟಕದ ವಸ್ತು ಸ್ಥಿತಿಯನ್ನು ಸುಪ್ರೀಂಕೋರ್ಟ್‌ಗೆ ಮನವರಿಕೆ ಮಾಡಬೇಕಿದೆ. 

ಸಿಡಬ್ಲುಎಂಎ ಆದೇಶ ಅಂತಿಮವಲ್ಲ. ಸುಪ್ರೀಂಕೋರ್ಟ್ ಈ ವಿಚಾರದಲ್ಲಿ ತನಗೆ ಸಂಬಂಧ ಇಲ್ಲ ಎನ್ನುವುದು ಸರಿಯಲ್ಲ. ಕೇವಲ ಕರ್ನಾಟಕದ ಡ್ಯಾಮ್ ಗಳ ನೀರಿನ ಮಟ್ಟ ಲೆಕ್ಕ ಹಾಕುವುದಲ್ಲ. ತಮಿಳುನಾಡು ಡ್ಯಾಮ್‌ಗಳಲ್ಲಿನ ನೀರಿನ ಮಟ್ಟ ಲೆಕ್ಕ ಹಾಕಬೇಕು ಎಂದು ಆಗ್ರಹಿಸಿದರು. ಸಿಡಬ್ಲುಎಂಎ ಮೊದಲ ಆದೇಶ ಬಂದಾಗಲೇ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮುಂದೆ ಮೇಲ್ಮನವಿ ಸಲ್ಲಿಸಬೇಕಿತ್ತು. ಸರ್ಕಾರ ಎರಡು ಬಾರಿ ನೀರು ಬಿಟ್ಟು ಈಗ ಸುಪ್ರೀಂಕೋರ್ಟ್ ಮುಂದೆ ಹೋಗಿದ್ದಾರೆ. ಸುಪ್ರೀಂಕೋರ್ಟ್ ಸಂಪೂರ್ಣ ವಾಗಿ ಸಿಡಬ್ಲುಎಂ ಮೇಲೆ ಅವಲಂಬನೆ ಆಗಿದೆ. . ಸಿಡಬ್ಲುಎಂಎ ಇಲ್ಲಿನ ವಾಸ್ತವ ಪರಿಸ್ಥಿತಿಯನ್ನು ನೋಡಬೇಕು ಎಂದು ಆಗ್ರಹಿಸಿದರು.

ವಾದ ಮಾಡಲು ಏನಿದೆ?: ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಮೇಲಿಂದ ಮೇಲೆ ತಪ್ಪು ಮಾಡುವ ಮೂಲಕ ರಾಜ್ಯದ ಜನತೆಯನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದೆ. ಸಿಡಬ್ಲುಎಂಎ (ಕಾವೇರಿ ನಿರ್ವಹಣಾ ಪ್ರಾಧಿಕಾರ) ಆದೇಶದಂತೆ ನೀರು ಬಿಡುವುದಾದರೆ ಸುಪ್ರೀಂಕೋರ್ಟ್‌ನಲ್ಲಿ ವಾದ ಮಾಡಲು ಏನಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸೆ.12ರ ನಂತರ ತಮಿಳುನಾಡಿಗೆ ನೀರು ಬಿಡಲು ಆಗುವುದಿಲ್ಲ ಎಂದು ಸುಪ್ರೀಂಕೊರ್ಟ್ ಮುಂದೆ ಅಫಿಡವಿಟ್ ಹಾಕಿದೆ‌. ಅದಕ್ಕೆ ತಾವು ಬದ್ಧರಾಗಿರಬೇಕಲ್ಲ. 

3 ಡಿಸಿಎಂ ಹೇಳಿಕೆ ತಪ್ಪಲ್ಲ, ರಾಜಣ್ಣ ಸಂದೇಶ ನೀಡಿದ್ದಾರೆ: ಗೃಹ ಸಚಿವ ಪರಮೇಶ್ವರ್‌

ಸರ್ಕಾರದ ಅಫಿಡವಿಟ್ ಅಂದರೆ ಸುಮ್ಮನೆ ಅಲ್ಲ. ರಾಜ್ಯ ಸರ್ಕಾರ ಸುಪ್ರಿಂಕೋರ್ಟ್ ಮುಂದೆ ತಾನೇ ಸುಳ್ಳು ಹೇಳುತ್ತಿದೆ ಎಂದಾಯಿತು‌ ಎಂದು ಅಭಿಪ್ರಾಯಪಟ್ಟರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸುವುದರಿಂದ ನನಗೇನು ಆಗುವುದಿಲ್ಲ. ಅದರ ಅಗತ್ಯ ನನಗಿಲ್ಲ. ಸರ್ಕಾರದ ನಡೆ ರಾಜ್ಯದ ರೈತರನ್ನು, ಕಾವೇರಿ ಮಕ್ಕಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ‌ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

‘ಕನ್ನಡಪ್ರಭ’ ಡ್ರಗ್ಸ್‌ ಅಭಿಯಾನ ವಿಧಾನಪರಿಷತ್ತಲ್ಲಿ ಪ್ರತಿಧ್ವನಿ
ಇಂದು 20,000 ರೈತರ ಜತೆ ಬಿಜೆಪಿ ಸುವರ್ಣಸೌಧ ಮುತ್ತಿಗೆ