ಜೆಡಿಎಸ್‌ ಶಾಸಕ ದಿಢೀರ್ ಆಸ್ಪತ್ರೆಗೆ ದಾಖಲು..!

Published : Nov 10, 2020, 04:23 PM IST
ಜೆಡಿಎಸ್‌ ಶಾಸಕ ದಿಢೀರ್ ಆಸ್ಪತ್ರೆಗೆ ದಾಖಲು..!

ಸಾರಾಂಶ

ಅನಾರೋಗ್ಯದಿಂದ ಬಳಲುತ್ತಿದ್ದ ಜೆಡಿಎಸ್ ಶಾಸಕರೊಬ್ಬರು ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಾಸನ, (ನ.10):  ಜಿಲ್ಲೆಯ ಶ್ರವಣಬೆಳಗೊಳ ಕ್ಷೇತ್ರದ ಜೆಡಿಎಸ್ ಶಾಸಕ ಬಾಲಕೃಷ್ಣ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಲ ದಿನಗಳಿಂದ ಕೆಮ್ಮಿನಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೆಮ್ಮು ಇದ್ದ ಕಾರಣ ಶಾಸಕ ಬಾಲಕೃಷ್ಣ ಕೊರೋನಾ ಪರೀಕ್ಷೆ ಮಾಡಿಸಿದ್ದು, ವರದಿಯಲ್ಲಿ ಕೊರೋನಾ ನೆಗೆಟಿವ್ ಎಂದು ಬಂದಿದೆ. ಆದ್ರೆ,  ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಪುತ್ರನ ಕಾರು ಅಪಘಾತ...!

ಈ ವೇಳೆ ವೈದ್ಯರು ಹೆಚ್ಚಿನ ಚಿಕಿತ್ಸೆ ಬೇಕಾಗಿದೆ ಎಂದು ಸಲಹೆ ಮಾಡಿದ ಹಿನ್ನೆಲೆಯಲ್ಲಿ ಶಾಸಕ ಬಾಲಕೃಷ್ಣ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕ್ಷೇತ್ರದ ಜನರಿಗೆ ತೊಂದರೆಯಾಗಬಾರದೆಂದು ಬೆಂಗಳೂರಿಗೆ ಬಂದಿದ್ದೇನೆ. ಆದಷ್ಟು ಬೇಗನೆ ಗುಣಮುಖನಾಗಿ ಕ್ಷೇತ್ರದ ಜನರ ಕಷ್ಟ ಸುಖಕ್ಕೆ ಭಾಗಿಯಾಗುತ್ತೇನೆ. ನನ್ನ ಆಪ್ತ ಸಹಾಯಕರ ದೂರವಾಣಿಗೆ ಕರೆ ಮಾಡಿ ನಿಮ್ಮ ಸಮಸ್ಯೆ ಇದ್ದರೆ ತಿಳಿಸಿ ಪರಿಹರಿಸಲು ನಿರ್ದೇಶನ ನೀಡಿರುತ್ತೇನೆ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Karnataka News Live: BBK 12 - ರಕ್ಷಿತಾ ಶೆಟ್ಟಿ ದನಿ ಅಡಗಿಸುವಷ್ಟು, ರೊಚ್ಚಿಗೆದ್ದು ಕೂಗಾಡಿದ ಸ್ಪಂದನಾ ಸೋಮಣ್ಣ! ಎಲ್ಲಿಂದ ಈ ಎನರ್ಜಿ?
ರಾಜ್ಯಗಳ ಜತೆ ಚರ್ಚಿಸಿಯೇ ಜಿ ರಾಮ್‌ ಜಿ ಜಾರಿ