ಬ್ರೇಕ್‌ಫಾಸ್ಟ್ ಹೇಗಿತ್ತು ಎಂಬುದನ್ನು ಜೊತೆಯಾಗಿ ವಿವರಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್

Published : Nov 29, 2025, 11:30 AM IST
DK Shivakumar Siddaramaiah new

ಸಾರಾಂಶ

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿ, ತಮ್ಮ ನಡುವೆ ಯಾವುದೇ ಮನಸ್ತಾಪವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ಸೂಚನೆಯಂತೆ ಒಟ್ಟಾಗಿ ಕೆಲಸ ಮಾಡುವುದಾಗಿ ಮತ್ತು ಮುಂದಿನ ಚುನಾವಣೆಗಳನ್ನು ಒಗ್ಗಟ್ಟಿನಿಂದ ಎದುರಿಸುವುದಾಗಿ ಅವರು ದೃಢಪಡಿಸಿದರು.

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಜೊತೆಯಾಗಿ ಉಪಾಹಾರ ಸೇವಿಸಿದ ಬಳಿಕ ಜೊತೆಯಾಗಿ ಸುದ್ದಿಗೋಷ್ಠಿ ನಡೆಸಿದರು. ಬ್ರೇಕ್‌ಫಾಸ್ಟ್ ನಲ್ಲಿ ಪೊನ್ನಣ್ಣ ಅವರಿದ್ದರು. ಕೆಸಿ ವೇಣುಗೋಪಾಲ್ ಕರೆ ಮಾಡಿ, ಉಪಾಹಾರಕ್ಕೆ ಕರೆಯುವಂತೆ ಹೇಳಿದ್ದರು. ಹಾಗಾಗಿ ಶಿವಕುಮಾರ್ ನಮ್ಮ ಮನೆಗೆ ಬಂದಿದ್ದರು. ಮುಂದೊಂದ ದಿನ ನಾನು ಅವರ ಮನೆಗೆ ಊಟಕ್ಕೆ ಹೋಗುತ್ತೇನೆ ಎಂದು ಹೇಳಿದರು.

ಅವಿಶ್ವಾಸ ಮಂಡನೆ ಮಾಡೋದು ಅಸಾಧ್ಯ

2028ರ ಚುನಾವಣೆಯಲ್ಲಿಯೂ ಕಾಂಗ್ರೆಸ್‌ನ್ನು ಅಧಿಕಾರಕ್ಕೆ ತೆಗೆದುಕೊಂಡು ಬರಬೇಕೆಂದು ಚರ್ಚೆ ಮಾಡಿದ್ದೇನೆ. ಇವತ್ತಿನವರೆಗೂ ನಮ್ಮಲ್ಲಿ ಯಾವುದೇ ಮನಸ್ತಾಪ ಇಲ್ಲ. ಮುಂದೆಯೂ ಇರಲ್ಲ. ಮುಂದಿನ ಚುನಾವಣೆಗಳನ್ನು ಜೊತೆಯಾಗಿ ಎದುರಿಸುತ್ತೇವೆ. ಸುಳ್ಳು ಅಪವಾದಗಳನ್ನು ಮಾಡೋದು ಜೆಡಿಎಸ್ ಮತ್ತು ಬಿಜೆಪಿಯ ಚಾಳಿ. ವಿಪಕ್ಷಗಳನ್ನು ನಾವಿಬ್ಬರು ಸಮರ್ಥವಾಗಿ ಎದುರಿಸುತ್ತೇವೆ. ಅವಿಶ್ವಾಸ ಮಂಡನೆ ಮಾಡೋದು ಅಸಾಧ್ಯ. ಬಿಜೆಪಿ-ಜೆಡಿಎಸ್ ಸೇರಿದ್ರೂ ಬಹುಮತ ಎರಡೂ ಪಕ್ಷಗಳಿಗೆ ಸಿಗಲ್ಲ. ಇವರ ಸುಳ್ಳು ಆರೋಪಗಳನ್ನು ಸಮರ್ಥವಾಗಿ ಎದುರಿಸುತ್ತೇವೆ.

ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ

ಹೈಕಮಾಂಡ್ ಏನು ಹೇಳುತ್ತೋ ಅದನ್ನು ಕೇಳಬೇಕೆಂದು ನಿರ್ಧಾರ ಮಾಡಿದ್ದೇವೆ. ನಾಳೆಯಿಂದ ಯಾವ ಗೊಂದಲ ಇರಲ್ಲ. ಈಗಲೂ ಯಾವುದೇ ಗೊಂದಲ ಇಲ್ಲ. ಮುಂದೆಯೂ ಇರಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ವೇಳೆ ಮಧ್ಯ ಪ್ರವೇಶಿಸಿದ ಡಿಸಿಎಂ ಡಿಕೆ ಶಿವಕುಮಾರ್, ಕೆಲವು ಮಾಧ್ಯಮಗಳು ಗೊಂದಲ ಸೃಷ್ಟಿಸಿವೆ ಎಂದು ಹೇಳಿದರು.

ಸಂಪುಟ ಪುನಾರಚನೆ ಮಾಡುತ್ತೇನೆ ಎಂದು ಹೇಳಿದಾಗ ಕೆಲವು ಶಾಸಕರು ನಮ್ಮನ್ನು ಮಂತ್ರಿಗಳನ್ನಾಗಿ ಮಾಡಿ ಅಂತ ದೆಹಲಿಗೆ ಹೋಗಿರಬಹುದು. ಕೆಲವರು ಬಂದು ನನಗೆ ಹೇಳಿದ್ದಾರೆ. ಹೈಕಮಾಂಡ್ ಸೂಚನೆಯಂತೆ ನಾವು ಕೆಲಸ ಮಾಡಿಕೊಂಡು ಹೋಗುತ್ತೇವೆ.

ಇದನ್ನೂ ಓದಿ: ಸಿಎಂ-ಡಿಸಿಎಂ ಬ್ರೇಕ್‌ಫಾಸ್ಟ್ ಮೀಟಿಂಗ್ ಅಂತ್ಯ; ಉಭಯ ನಾಯಕರ ನಿರ್ಧಾರ ಏನು?

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಸಿದ್ದರಾಮಯ್ಯನವರೇ ಮತಿಗೇಡಿಗಳಾಗಿ, ಆದ್ರೆ ಅಧಿಕಾರಕ್ಕಾಗಿ ಲಜ್ಜೆಗೇಡಿಗಳಾಗಬೇಡಿ-ಆರ್. ಅಶೋಕ್ ಟೀಕೆ
India Latest News Live: ಪುಟಿನ್‌ಗೆ ರಷ್ಯನ್ ಭಾಷೆ ಭಗವದ್ಗೀತೆ ಉಡುಗೊರೆ ನೀಡಿದ ಪ್ರಧಾನಿ ಮೋದಿ, ಭಾರಿ ಮೆಚ್ಚುಗೆ