700 ಕೋಟಿ ಅಬಕಾರಿ ಆರೋಪ ಸಾಬೀತಿಗೆ ಮೋದಿ ಸವಾಲ್‌: ಪ್ರಧಾನಿ ವಿರುದ್ಧ ಮುಗಿಬಿದ್ದ ಸಿದ್ದು, ಡಿಕೆಶಿ

Published : Nov 11, 2024, 05:38 AM IST
700 ಕೋಟಿ ಅಬಕಾರಿ ಆರೋಪ ಸಾಬೀತಿಗೆ ಮೋದಿ ಸವಾಲ್‌: ಪ್ರಧಾನಿ ವಿರುದ್ಧ ಮುಗಿಬಿದ್ದ ಸಿದ್ದು, ಡಿಕೆಶಿ

ಸಾರಾಂಶ

ಮಹಾರಾಷ್ಟ್ರದ ಚುನಾವಣಾ ವೆಚ್ಚಕ್ಕಾಗಿ ಕರ್ನಾಟಕದ ಮದ್ಯ ಮಾರಾಟಗಾರರಿಂದ ₹700 ಕೋಟಿ ಸಂಗ್ರಹಿಸಲಾಗಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತೀವ್ರ ಹರಿಹಾಯ್ದಿದ್ದಾರೆ. 

ಶಿಗ್ಗಾಂವಿ/ ಬೆಂಗಳೂರು (ನ.11): ಮಹಾರಾಷ್ಟ್ರದ ಚುನಾವಣಾ ವೆಚ್ಚಕ್ಕಾಗಿ ಕರ್ನಾಟಕದ ಮದ್ಯ ಮಾರಾಟಗಾರರಿಂದ ₹700 ಕೋಟಿ ಸಂಗ್ರಹಿಸಲಾಗಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತೀವ್ರ ಹರಿಹಾಯ್ದಿದ್ದಾರೆ. ಇದು ಕೇವಲ ರಾಜಕೀಯ ಕಾರಣಕ್ಕಾಗಿ ಮಾಡಿದ ಸುಳ್ಳು ಆರೋಪ ಎಂದು ಕಿಡಿಕಾರಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ 700 ಕೋಟಿ ರು. ಅಬಕಾರಿ ಅಕ್ರಮದ ಕುರಿತು ಮಾಡಿರುವ ಆರೋಪವನ್ನು ಮೋದಿ ಸಾಬೀತು ಮಾಡಿದರೆ ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ.

ಇಲ್ಲದಿದ್ದರೆ ಅವರೇ ನಿವೃತ್ತಿ ಘೋಷಿಸಲಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದರೆ, ಮೋದಿ ಅಕ್ರಮದ ಕುರಿತು ಸಣ್ಣ ಆಧಾರ ನೀಡಿದರೂ ನಾವು ಯಾವುದೇ ಶಿಕ್ಷೆ ಎದುರಿಸಲು ಸಿದ್ಧ ಎಂದು ಡಿ.ಕೆ.ಶಿವಕುಮಾರ್‌ ಆಕ್ರೋಶ ಹೊರಹಾಕಿದ್ದಾರೆ. ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್‌ ಸರ್ಕಾರದಿಂದ ಮಹಾರಾಷ್ಟ್ರದ ಚುನಾವಣೆಗಾಗಿ ಅಲ್ಲಿನ ಮದ್ಯ ಮಾರಾಟಗಾರರಿಂದ 700 ಕೋಟಿ ಸುಲಿಗೆ ಮಾಡಲಾಗಿದೆ ಎಂದು ಆರೋಪಿಸಿದ್ದರು. ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಪ್ರಚಾರ ವೇಳೆ ಶುಕ್ರವಾರ ಪ್ರಧಾನಿ ಮಾಡಿದ ಆರೋಪ ಇದೀಗ ರಾಜ್ಯ ಸರ್ಕಾರದ ಆಕ್ರೋಶಕ್ಕೆ ಕಾರಣವಾಗಿದೆ.

ಅಘಾಡಿಯಿಂದ ಸ್ತ್ರೀಯರಿಗೆ ₹3000, ಫ್ರೀ ಬಸ್‌ ಪ್ರಯಾಣ: ಪ್ರಣಾಳಿಕೆ ಬಿಡುಗಡೆ

ಈ ಕುರಿತು ಕಿಡಿಕಿಡಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಬಕಾರಿ ಇಲಾಖೆಗೆ ಸಂಬಂಧಿಸಿ ಪ್ರಧಾನಿ ಮೋದಿ ಅವರು ನಮ್ಮ ವಿರುದ್ಧ ಮತ್ತೊಂದು ಸುಳ್ಳಿನ ಆರೋಪ ಮಾಡಿದ್ದಾರೆ. ಮೋದಿ ಅವರು ಒಬ್ಬ ದೊಡ್ಡ ಸುಳ್ಳುಗಾರ. ಸುಳ್ಳು ಹೇಳಲೂ ಒಂದು ಇತಿಮಿತಿ ಇರಬೇಕು. ಮೋದಿ ಅವರು ಹೊಂದಿರುವ ದೊಡ್ಡ ಹುದ್ದೆಗೆ ಅವರು ನೀಡುತ್ತಿರುವ ಹೇಳಿಕೆಗಳು ಶೋಭೆ ತರುವುದಿಲ್ಲ. ಅವರು ತಮ್ಮ ಆರೋಪವನ್ನು ಸಾಬೀತು ಮಾಡಿದರೆ ನಾನು ರಾಜಕೀಯ ನಿವೃತ್ತಿ ಘೋಷಿಸಲು ಸಿದ್ಧ, ಇಲ್ಲವಾದರೆ ಅವರು ನಿವೃತ್ತಿ ಘೋಷಿಸಲಿ ಎಂದು ಸವಾಲೆಸೆದರು.

ನಮ್ಮ ಮೇಲೆ ಆರೋಪ ಮಾಡುವ ಬಿಜೆಪಿಯವರು ಈ ಹಿಂದೆ ಕಾಂಗ್ರೆಸ್‌ನ 17 ಮಂದಿ ಶಾಸಕರನ್ನು ಯಾವ ಹಣದಲ್ಲಿ ಖರೀದಿಸಿದರು? ಬಿ.ಎಸ್‌.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗುವಾಗ ₹2 ಸಾವಿರ ಕೋಟಿ ನೀಡಿದ್ದಾರೆಂದು ಬಿಜೆಪಿಯ ಹಿರಿಯ ಮುಖಂಡ ಬಸನಗೌಡ ಪಾಟೀಲ ಯತ್ನಾಳ ಅವರೇ ಆರೋಪಿಸಿದ್ದಾರೆ. ಹಾಗಾದರೆ ಆ ಹಣ ಎಲ್ಲಿಂದ ಬಂತು? ಎಂದು ತಿರುಗೇಟು ನೀಡಿದರು.

ಸುಳ್ಳೇ ಬಿಜೆಪಿ ಅಸ್ತ್ರ: ಚುನಾವಣೆಗಳಲ್ಲಿ ಸುಳ್ಳೇ ಬಿಜೆಪಿಯ ಪ್ರಬಲ ಅಸ್ತ್ರ. ಅಬಕಾರಿ ಇಲಾಖೆಯಲ್ಲಿ ಅಕ್ರಮ ಎಂಬುದು ಕೇವಲ ರಾಜಕೀಯ ಆರೋಪ. ಮೋದಿ ಅವರು ತಾವು ಮಾಡಿರುವ ಆರೋಪಕ್ಕೆ ಸಣ್ಣ ಆಧಾರ ನೀಡಲಿ, ಆಗ ನಾವು ಯಾವುದೇ ಶಿಕ್ಷೆಗೆ ಗುರಿಯಾಗಲೂ ಸಿದ್ಧ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು. ದೊಡ್ಡ ಹುದ್ದೆಯಲ್ಲಿರುವ ಪ್ರಧಾನಿ ಅವರು ಆಧಾರ ಇಲ್ಲದೆ ಆರೋಪ ಮಾಡುವುದು ಬೇಡ. ಬಿಜೆಪಿಯ ಕೇಂದ್ರ ಸಚಿವರು ಯಾವ ಯಾವ ಚುನಾವಣೆಗೆ ಎಷ್ಟೆಷ್ಟು ಹಣ ಸಂಗ್ರಹಿಸುತ್ತಿದ್ದಾರೆ ಎಂಬುದು ನನಗೂ ಗೊತ್ತಿದೆ. ಆದರೆ ಆಧಾರ ಇಲ್ಲದೆ ಮಾತನಾಡುವುದು ಗೌರವವಲ್ಲ ಎಂದು ಆಕ್ರೋಶ ಹೊರಹಾಕಿದರು.

ಶಾಲೆಗೆ 25 ಎಕರೆ ಕೊಟ್ಟಿದ್ದೇನೆ, ಎಚ್‌ಡಿಕೆ 1 ಗುಂಟೆ ಏನಾದರೂ ದಾನ ಮಾಡಿದ್ದಾರಾ?: ಡಿಕೆಶಿ

ಮೋದಿ ಏನು ಹೇಳಿದ್ದರು?: ಕರ್ನಾಟಕದ ಕಾಂಗ್ರೆಸ್‌ ಸರ್ಕಾರವು ಮದ್ಯ ಮಾರಾಟಗಾರರಿಂದ 700 ಕೋಟಿ ರು. ಸುಲಿಗೆ ಮಾಡಿ ಮಹಾರಾಷ್ಟ್ರದ ಚುನಾವಣೆಗೆ ಕಳುಹಿಸಿದೆ. ಗಾಂಧಿ ಕುಟುಂಬಕ್ಕೆ ಕಾಂಗ್ರೆಸ್‌ ಆಡಳಿತದ ರಾಜ್ಯಗಳು ಎಟಿಎಂ ಆಗಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌