Siddu-BJP Twitter War: ಕೊರಗರ ಮೇಲೆ ಪೊಲೀಸರ ಹಲ್ಲೆ ಕೇಸ್, ಸಿದ್ದು-ಬಿಜೆಪಿ ಟ್ವೀಟ್ ವಾರ್

By Suvarna News  |  First Published Dec 31, 2021, 6:48 PM IST

* ಉಡುಪಿಯ ಕೊರಗರ ಮೇಲೆ ಪೊಲೀಸರ ದೌರ್ಜನ್ಯ ಪ್ರಕರಣ
* ಕೊರಗರ ವಿರುದ್ಧವೇ ಪ್ರತಿದೂರು ದಾಖಲು
* ಸಿದ್ದರಾಮಯ್ಯ-ಬಿಜೆಪಿ ನಡುವೆ ಟ್ವೀಟ್ ವಾರ್


ಬೆಂಗಳೂರು, (ಡಿ.31): ಉಡುಪಿಯ(Udupi) ಕೊರಗ ಸಮುದಾಯದ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ(Siddaramaiah) ಹಾಗೂ ರಾಜ್ಯ ಬಿಜೆಪಿ(Karnataka BJP) ಮಧ್ಯೆ ಟ್ವೀಟ್ ವಾರ್ ಮುಂದುವರಿದಿದೆ.

ಕೊರಗ ಸಮುದಾಯದ(Koraga Community) ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿ ದೌರ್ಜನ್ಯ ನಡೆಸಿದಲ್ಲದೆ ಇದೀಗ ಅವರ ವಿರುದ್ಧವೇ ಪೊಲೀಸರು ದೂರು ದಾಖಲಿಸಿದ್ದಾರೆ. ಪೊಲೀಸರ ಈ ಕ್ರಮವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದು, ಹಿಂದುಗಳೆಲ್ಲ ಒಂದು ಎಂದು ಉದ್ಘೋಷಿಸುತ್ತಿರುವ ಬಿಜೆಪಿ ಬ್ರಾಂಡಿನ ಹಿಂದೂ ಧರ್ಮದಲ್ಲಿ ಕೊರಗ ಸಮುದಾಯ ಸೇರಿಲ್ಲವೇ?. ದಲಿತರನ್ನು ಅಸ್ಪರ್ಶರನ್ನಾಗಿಯೇ ಉಳಿಸುವುದು ಇವರ ಗುಪ್ತ ಅಜೆಂಡಾವೇ ಎಂದು ಟ್ವೀಟ್‌ ಮೂಲಕ ಪ್ರಶ್ನಿಸಿದ್ದಾರೆ.

Latest Videos

undefined

Police Case ಹಲ್ಲೆ ಮಾಡಿದ್ದಲ್ಲದೇ ಕೊರಗರ ಮೇಲೆಯೇ ಪೊಲೀಸರಿಂದ ಕೇಸ್, ಸಿದ್ದರಾಮಯ್ಯ ಕೆಂಡಾಮಂಡಲ

ಇದಕ್ಕೆ ಬಿಜೆಪಿ ಸಹ ಟ್ವೀಟ್ ಮೂಲಕ ತಿರುಗೇಟು ನೀಡಿದ್ದು, ಈ ರೀತಿಯ ಹೇಳಿಕೆಗಳ ಮೂಲಕ ಒಂದು ಸಮುದಾಯದ ನೈತಿಕ ಶಕ್ತಿಯನ್ನು ಅಡಗಿಸುವುದು ಸಿದ್ದರಾಮಯ್ಯ ಅವರ ಉದ್ದೇಶವಾಗಿದೆ. ಒಂದು ಘಟನೆಯನ್ನು ವ್ಯವಸ್ಥಿತ ಷಡ್ಯಂತ್ರ ಇತ್ಯಾದಿ ಎಂದು ಬಿಂಬಿಸಿ ಬೇಳೆ ಬೇಯಿಸಿಕೊಳ್ಳುವುದು ಎಷ್ಟು ಸರಿ ? ಪ್ರಶ್ನಿಸಿದೆ.

ಮಾನ್ಯ ಸಿದ್ದರಾಮಯ್ಯನವರೇ ಈ ಪ್ರಕರಣ ನಡೆದಾಗ ನೀವೇನು ಗಾಢ ನಿದ್ದೆಯಲ್ಲಿದ್ದಿರಾ ? ಪ್ರಕರಣ ನಡೆದು 24ಗಂಟೆಯೊಳಗೆ ಕರ್ತವ್ಯ ಲೋಪ ಎಸಗಿದ ಪೊಲೀಸರನ್ನು ಅಮಾನತು ಮಾಡಲಾಗಿದೆ. ಹೇಳಿಕೊಟ್ಟ ಮಾತು, ಬರೆದು ಕೊಟ್ಟ ಟ್ವೀಟು ಎಷ್ಟು ದಿನ ಬಾಳಿಕೆ ಬರುತ್ತದೆ ? ಎಂದು ವ್ಯಂಗ್ಯವಾಡಿದೆ.

ಸಿದ್ದರಾಮಯ್ಯ ಹೇಳಿದ್ದೇನು
ದೌರ್ಜನ್ಯಕ್ಕೀಡಾದ ಕೊರಗರ ಪರ ಕಂಬನಿ ಮಿಡಿದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಗಮನಕ್ಕೆ ಬರದೆ ಪೊಲೀಸರು ಕೊರಗ ಬಂಧುಗಳ ವಿರುದ್ದ ಪ್ರಕರಣ ದಾಖಲಿಸಿದ್ದಾರೆಯೇ? ಹಾಗೆ ನಡೆದಿದ್ದರೆ ಅವರೊಬ್ಬ ಅಸಮರ್ಥ ಸಚಿವ ಎಂದ ಅವರು ಗಮನಕ್ಕೆ ಬಂದು ನಡೆದಿದ್ದರೆ ಅದು ಆತ್ಮವಂಚಕ ನಡವಳಿಕೆ ಎಂದು ಕಿಡಿಕಾರಿದ್ದಾರೆ.

ಎಸ್ ಸಿಪಿ/ಟಿಎಸ್ ಪಿ ಕಾಯ್ದೆ ಸೇರಿದಂತೆ ಪರಿಶಿಷ್ಟಜಾತಿ/ಪರಿಶಿಷ್ಟ ಪಂಗಡದ ಕಲ್ಯಾಣಕ್ಕಾಗಿ ನಮ್ಮ ಸರ್ಕಾರ ಜಾರಿಗೆ ತಂದಿದ್ದ ಯೋಜನೆಗಳಿಗೆ ಹಣ ಮಂಜೂರು ಮಾಡದೆ ಆರ್ಥಿಕವಾಗಿ ದಲಿತರನ್ನು ಸಾಯಿಸುತ್ತಿರುವ ಬಿಜೆಪಿ ಸರ್ಕಾರ, ಈಗ ಪೊಲೀಸರಿಂದಲೂ ದೌರ್ಜನ್ಯ ನಡೆಸಲು ಹೊರಟಂತಿದೆ ಎಂದು ಸರಣಿ ಟ್ವೀಟ್‌ ಮಾಡಿದ್ದಾರೆ.

 ಹಿಂದುಗಳೆಲ್ಲ ಒಂದು ಎಂದು ಉದ್ಘೋಷಿಸುತ್ತಿರುವ ಬಿಜೆಪಿ ಬ್ರಾಂಡಿನ ಹಿಂದು ಧರ್ಮದಲ್ಲಿ ಕೊರಗ ಸಮುದಾಯ ಸೇರಿಲ್ಲವೇ ? ದಲಿತರನ್ನು ಅಸ್ಪೃಶ್ಯರನ್ನಾಗಿಯೇ ಉಳಿಸುವುದು ಇವರ ಗುಪ್ತ ಅಜೆಂಡವೇ ?

ಹಿಂದುಗಳ ರಕ್ಷಣೆಗಾಗಿಯೇ ಅವತಾರವೆತ್ತಿ ಬಂದವರಂತೆ ಬೊಬ್ಬಿಡುತ್ತಿರುವ ಸ್ಥಳೀಯ ಲೋಕಸಭಾ ಸದಸ್ಯರೂ ಆಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಮೌನವನ್ನು ಕೊರಗರ ಮೇಲಿನ ಪೊಲೀಸ್‌ ಸೌರ್ಜನ್ಯಕ್ಕೆ ಮೌನ ಸಮ್ಮತಿ ಎಂದು ಅರ್ಥೈಸೋಣವೇ ? ಅಥವಾ ಇದು ವ್ಯವಸ್ಥಿತ ಸಂಚಿನ ಮುಂದುವರಿದ ಭಾಗವೇ ? ಎಂದು ಪ್ರಶ್ನಿಸಿದ್ದರು.

ಡಾ.ಮಹಾದೇವಪ್ಪ ಆಕ್ರೋಶ
ಕೋಟದಲ್ಲಿ ಕೊರಗ ಸಮುದಾಯದವರ ಮೇಲೆ ಪೊಲೀಸರು ಜಾಮೀನು ರಹಿತ ಪ್ರಕರಣವನ್ನು ದಾಖಲಿಸಿರುವುದು ಮೇಲ್ನೋಟಕ್ಕೆ ಅತ್ಯಂತ ಸುಳ್ಳು ಪ್ರಕರಣ ಎಂದು ಕಾಂಗ್ರೆಸ್ ಹಿರಿಯ ನಾಯಕ ಡಾ.ಹೆಚ್.ಸಿ. ಮಹಾದೇವಪ್ಪ ಅವರು ಟ್ವೀಟ್ ಮಾಡಿದ್ದಾರೆ.

ಕೊರಗರ ಮೇಲೆ ಹಲ್ಲೆ ನಡೆಸಿದ ಪೊಲೀಸರ ಮೇಲೆ ಕ್ರಮ ಕೈಗೊಳ್ಳುವುದಾಗಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಹೇಳಿದ್ದರು. ಆದರೆ ಅಚ್ಚರಿ ಎಂಬಂತೆ ಯಾವ ಕೊರಗರ ಮೇಲೆ ಹಲ್ಲೆ ನಡೆಸಲಾಗಿತ್ತೋ ಇದೀಗ ಅವರ ಮೇಲೆಯೇ ಪೊಲೀಸರು ಜಾಮೀನು ರಹಿತ ಪ್ರಕರಣವನ್ನು ದಾಖಲಿಸಿದ್ದು ಇದು ಮೇಲ್ನೋಟಕ್ಕೆ ಅತ್ಯಂತ ಸುಳ್ಳು ಪ್ರಕರಣವೇ ಆಗಿದೆ. ಕಾರಣ ಪೊಲೀಸರು ಹಲ್ಲೆ ನಡೆದ ದಿನವೇ ತಮ್ಮ ಮೇಲಾದ ದಾಳಿಯ ಸುದ್ದಿಯ ಬಗ್ಗೆ ತಿಳಿಸಿದೇ ವಿಷಯವು ಸ್ವಲ್ಪ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಪೊಲೀಸರು ಮೂಲ ವಿಷಯವನ್ನು ತಿರುಚುವಂತೆ ಬಹು ತಡವಾಗಿ ಪ್ರತಿಕ್ರಿಯೆ ನೀಡಿ ಕೇಸು ದಾಖಲಿಸಿರುವುದು ಕೊರಗರ ಮೇಲಿನ ಸರ್ಕಾರಿ ಪ್ರಾಯೋಜಿತ ದಾಳಿಯಾಗಿದೆ ಎಂಬುದು ಅತ್ಯಂತ ಸ್ಪಷ್ಟವಾಗಿದೆ ಎಂದು ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.

ಪ್ರಕರಣ ಹಿನ್ನೆಲೆ
ಕೋಟತಟ್ಟು ಗ್ರಾಮದಲ್ಲಿ ನಡೆದ ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿದ ಪೊಲೀಸರು ಮದುಮಗ ಸೇರಿದಂತೆ ಸ್ಥಳೀಯರ ಮೇಲೆ ಹಲ್ಲೆ ನಡೆಸಿದ್ದರು. ಈ ಪ್ರಕರಣ ಸುದ್ದಿಯಾಗುತ್ತಿದ್ದಂತೆ ಕೋಟ ಠಾಣೆಯ ಎಸ್ ಐ ನ್ನು ಅಮಾನತು ಮಾಡಲಾಗಿದ್ದು, ಉಳಿದ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಲಾಗಿತ್ತು.

ಆದರೆ ಮತ್ತೆ ಪೊಲೀಸರು 7 ಜನ ಕೊರಗ ಸಮುದಾಯದವರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿದ್ದಾರೆ. ಇದು ಮತ್ತೆ ವಿವಾದಕ್ಕೆ ಕಾರಣವಾಗಿದೆ.

click me!