ಕರ್ನಾಟಕ ವಿಧಾನಸಭಾ ಚುನಾವಣೆ 2023: ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರು ಘೋಷಿಸಿದ ಸಿದ್ದರಾಮಯ್ಯ

By Kannadaprabha News  |  First Published Nov 21, 2022, 3:30 AM IST

ಕೊಪ್ಪಳ ಕ್ಷೇತ್ರದಲ್ಲಿ ರಾಘವೇಂದ್ರ ಹಿಟ್ನಾಳ, ಗಂಗಾವತಿಯಲ್ಲಿ ಇಕ್ಬಾಲ ಅನ್ಸಾರಿ, ಕನಕಗಿರಿಯಲ್ಲಿ ಶಿವರಾಜ ತಂಗಡಗಿ, ಕುಷ್ಟಗಿಯಲ್ಲಿ ಅಮರೇಗೌಡ ಭಯ್ಯಾಪುರ, ಯಲಬುರ್ಗಾದಲ್ಲಿ ಬಸವರಾಜ ರಾಯರಡ್ಡಿ


ಕೊಪ್ಪಳ(ನ.21): 2023ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಜಿಲ್ಲೆಯ ಐದು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಘೋಷಿಸಿದರು. ಅಲ್ಲದೇ ಜಿಲ್ಲೆಯ ಐದು ಕ್ಷೇತ್ರದಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಗೆಲ್ಲಿಸಿ ವಿಧಾನಸಭೆಗೆ ಕಳುಹಿಸಿಕೊಡಿ ಎಂದು ಮನವಿ ಮಾಡಿದರು.

ತಾಲೂಕಿನ ವನಬಳ್ಳಾರಿಯಲ್ಲಿ ಮದುವೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಆನಂತರ ಮಾತನಾಡಿ, ಕೊಪ್ಪಳ ಕ್ಷೇತ್ರದಲ್ಲಿ ರಾಘವೇಂದ್ರ ಹಿಟ್ನಾಳ, ಗಂಗಾವತಿಯಲ್ಲಿ ಇಕ್ಬಾಲ ಅನ್ಸಾರಿ, ಕನಕಗಿರಿಯಲ್ಲಿ ಶಿವರಾಜ ತಂಗಡಗಿ, ಕುಷ್ಟಗಿಯಲ್ಲಿ ಅಮರೇಗೌಡ ಭಯ್ಯಾಪುರ, ಯಲಬುರ್ಗಾದಲ್ಲಿ ಬಸವರಾಜ ರಾಯರಡ್ಡಿ ಅವರನ್ನು ಗೆಲ್ಲಿಸುವ ಹೊಣೆಗಾರಿಗೆ ನಿಮ್ಮದು. ಜಿಲ್ಲೆಯ ಐದು ಕ್ಷೇತ್ರದಲ್ಲಿ ಸಹ ಕಾಂಗ್ರೆಸ್‌ ಜಯಭೇರಿ ಬಾರಿಸಬೇಕು ಎಂದರು. ಜಿಲ್ಲೆಯಿಂದ ನಮಗೆ ಪೂರ್ಣ ಬೆಂಬಲ ನೀಡಿ, ಜಿಲ್ಲೆಯ ಐದು ಕ್ಷೇತ್ರದಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಗೆಲ್ಲಿಸಿ ಕಳಿಸಿಕೊಡುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದರು.

Tap to resize

Latest Videos

ಜನರ ಮೂಗಿಗೆ ತುಪ್ಪ ಹಚ್ಚುವ ಕಾಂಗ್ರೆಸಿಗರು: ಸಚಿವ ಹಾಲಪ್ಪ ಆಚಾರ್

ಜೋಳದ ರೊಟ್ಟಿ ಕೇಳಿ ಸವಿದ ಸಿದ್ದು

ತಾಲೂಕಿನ ವನ ಬಳ್ಳಾರಿ ಗ್ರಾಮದಲ್ಲಿ ಕಾಂಗ್ರೆಸ್‌ ಮುಖಂಡ ಹನುಮಂತಪ್ಪ ಅವರ ಸಹೋದರನ ಮದುವೆಯಲ್ಲಿ ನವದಂಪತಿಗೆ ಶುಭ ಕೋರಿದ ಸಿದ್ದರಾಮಯ್ಯ, ಬಳಿಕ ಊಟಕ್ಕೆ ಕುಳಿತಾಗ ಚಪಾತಿ ಬೇಡ, ಬಿಳಿ ಜೋಳದ ರೊಟ್ಟಿಕೊಡಿ ಎಂದು ತರಿಸಿಕೊಂಡು ಜೋಳದ ರೊಟ್ಟಿ ಸವಿದರು.
 

click me!