ಕೆಪಿಸಿಸಿ ಅಧ್ಯಕ್ಷ ಆಯ್ಕೆ ಸಂಬಂಧ ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ಠಿಕಾಣಿ ಹೂಡಿರುವ ಸಿದ್ದರಾಮಯ್ಯ ಅವರು ಇಂದು (ಬುಧವಾರ) ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಬಳಿಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಬಂದು ಸುದ್ದಿಗಾರರ ಮುಂದೆ ಅಚ್ಚರಿಕೆ ಹೇಳಿಕೆ ನೀಡಿದ್ದಾರೆ. ಈ ಮೂಲಕ ಡಿಕೆಶಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ. ಏನದು..? ಈ ಕೆಳಗಿನಂತಿದೆ.
ನವದೆಹಲಿ/ಬೆಂಗಳೂರು, (ಜ.15): ಕೆಪಿಸಿಸಿ ಅಧ್ಯಕ್ಷ ಯಾರಾಗಲಿದ್ದಾರೆ ಎನ್ನುವುದು ರಾಜ್ಯ ಕಾಂಗ್ರೆಸ್‌ನಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಕೆಪಿಸಿಸಿ ಅಧ್ಯಕ್ಷ ಆಯ್ಕೆ ಸಂಬಂಧ ಹೈಕಮಾಂಡ್, ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ದೆಹಲಿಗೆ ಕರೆಯಿಸಿಕೊಂಡು ಚರ್ಚೆ ನಡೆಸಿದ್ದಾರೆ.
ಮಂಗಳವಾರ ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸೇರಿದಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಅಹ್ಮದ್ ಪಾಟೀಲ್ ಜತೆ ಚರ್ಚೆ ನಡೆಸಿದರು. ಬಳಿಕ ಸಂಜೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಕೆಪಿಸಿಸಿ ಆಯ್ಕೆ ಹಾಗೂ ರಾಜ್ಯ ರಾಜಕಾರಣದ ಸ್ಥಿತಿಗತಿಗಳ ಬಗ್ಗೆ ಚರ್ಚೆ ಮಾಡಿದರು.
undefined
ನಂತರ ಇಂದು (ಬುಧವಾರ) ಅಂತಿಮವಾಗಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದರು. ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಸಿದ್ದು, ರಾಹುಲ್ ಗಾಂಧಿಯವರಿಗೆ ರಾಜ್ಯ ವಿದ್ಯಮಾನಗಳ ಬಗ್ಗೆ ಮನವರಿಕೆ ಮಾಡಿದ್ದೇನೆ. ಹಾಗೂ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಬಗ್ಗೆ ನನ್ನ ಅಭಿಪ್ರಾಯ ಹೇಳಿದ್ದೇನೆ. ಹೊಸ ನೇಮಕ ಆದೇಶ ಯಾವಾಗ ಬರುತ್ತೆ ಅನ್ನೋದು ಗೊತ್ತಿಲ್ಲ ಎಂದರು.
ಕೆಪಿಸಿಸಿ ಅಧ್ಯಕ್ಷ ಹುದ್ದೆ: ಡಿಕೆ ಶಿವಕುಮಾರ್ ಕಟ್ಟಿ ಹಾಕಲು ಸಿದ್ದರಾಮಯ್ಯ ಹೊಸ ತಂತ್ರ
ಹಾಗೇ ಮಾತು ಮುಂದುವರಿಸಿದ ಸಿದ್ದರಾಮಯ್ಯ, ಈ ಬಾರಿಯೂ ಕಾರ್ಯಾಧ್ಯಕ್ಷರು ಇರ್ತಾರೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಡಿಕೆ ಶಿವಕುಮಾರ್‌ಗೆ ಬಿಗ್ ಶಾಕ್ ನೀಡಿದ್ದಾರೆ.
ಡಿಕೆ ಶಿವಕುಮಾರ್ ಅವರು ತಮ್ಮನ್ನು ಅಧ್ಯಕ್ಷನ್ನಾಗಿ ಮಾಡಿ ಎಂದು ಸಿದ್ದರಾಮಯ್ಯನವರ ಬಳಿ ಮನವಿ ಮಾಡಿದ್ದರು. ಅಷ್ಟೇ ಅಲ್ಲದೇ ಕಾರ್ಯಧ್ಯಕ್ಷರು ಬೇಡ ಅಂತಲೂ ಸಹ ಡಿಕೆಶಿ ಪರಿಪರಿಯಾಗಿ ಮನವಿ ಮಾಡಿಕೊಂಡಿದ್ದರು.
ಆದ್ರೆ, ಇದೀಗ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಭೇಟಿ ಬಳಿಕ ಕಾರ್ಯಧ್ಯಕ್ಷರು ಇರುತ್ತಾರೆ ಎಂದು ಹೇಳಿರುವುದು ಡಿಕೆಶಿಗೆ ಹಿನ್ನಡೆಯಾಗಿದೆ.
ದೆಹಲಿಯಲ್ಲಿ ಸಿದ್ದರಾಮಯ್ಯ ಸಭೆ: ಕೆಪಿಸಿಸಿಗೆ ನೂತನ ಸಾರಥಿ ಯಾರು?
ಮೊದಲಿನಿಂದಲೂ ಡಿಕೆಶಿ ಹಾಗೂ ಸಿದ್ದರಾಮಯ್ಯ ನಡುವೆ ಎಲ್ಲವೂ ಸರಿ ಇಲ್ಲ ಎನ್ನುವುದು ಗೊತ್ತಿರುವ ವಿಚಾರವೇ. ಇದೀಗ ಸಿದ್ದು ಕಾರ್ಯಧ್ಯಕ್ಷ ಹುದ್ದೆ ಪರವಾಗಿ ಬ್ಯಾಟಿಂಗ್ ಮಾಡುವ ಮೂಲಕ ಡಿಕೆಶಿಗೆ ಮೂಗುದಾರ ಹಾಕಲು ಮುಂದಾಗಿದ್ದಾರೆ ಎನ್ನುವ ಮಾತು ರಾಜ್ಯ ರಾಜಕಾರಣದಲ್ಲಿ ಕೇಳಿಬರುತ್ತಿದೆ.