ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ದಿನವೇ ರಾಜ್ಯದ ವಿವಿಧೆಡೆ ಮಳೆ ಆಗುವ ಮೂಲಕ ಶುಭ ಸೂಚನೆ ದೊರೆತಿದೆ.
ಬೆಂಗಳೂರು (ಮೇ 20): ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2ನೇ ಬಾರಿಗೆ ಶನಿವಾರ ಬೆಳಗ್ಗೆ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಇನ್ನು ಸಚಿವ ಸಂಪುಟ ಸಭೆಯನ್ನು ನಡೆಸಿದ ಕಾಂಗ್ರೆಸ್ ಗ್ಯಾರಂಟಿಗಳನ್ನು ಜಾರಿಗೊಳಿಸುವುದಾಗಿ ಒಪ್ಪಿಗೆ ನೀಡಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ಭರ್ಜರಿ ಮಳೆಯಾಗಿದೆ. ಈ ಮೂಲಕ ಸಿದ್ದರಾಮಯ್ಯ ಸಿಎಂ ಆಗಿದ್ದಕ್ಕೆ ಪರಿಸರವೇ ಶುಭಸೂಚನೆ ನೀಡಿದೆ ಎಂದು ಗ್ರಾಮೀಣ ಜನರು ಹೇಳುತ್ತಿದ್ದಾರೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಿದ್ದರಾಮಯ್ಯ ಸಿಎಂ ಆಗಿ ಹಾಗೂ ಡಿ.ಕೆ. ಶಿವಕುಮಾರ್ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡುವ ಕಾರ್ಯಕ್ರಮದ ವೇಳೆಯೇ ಮಳೆ ಬರುವ ಸೂಚನೆಯಿತ್ತು. ಆದರೆ, ಪದಗ್ರಹಣ ಕಾರ್ಯಕ್ರಮ ಸಂಪೂರ್ಣವಾಗಿ ಮುಕ್ತಾಯಗೊಂಡ ನಂತರ ಬೆಳಗಳೂರು ಸೇರಿದಂತೆ ರಾಜ್ಯದ ಕರಾವಳಿ ಭಾಗ ಹಾಗೂ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿದೆ.
undefined
ಕಾಂಗ್ರೆಸ್ ಸರ್ಕಾರದಲ್ಲಿ ಬರಗಾಲವೆಂಬ ಅಪಖ್ಯಾತಿಗೆ ಸಿಗುವುದೇ ಮುಕ್ತಿ: ಕರ್ನಾಟಕದಲ್ಲಿ ಕಳೆದ 20 ವರ್ಷಗಳ ಸರ್ಕಾರದ ಆಡಳಿತವನ್ನು ನೋಡಿದರೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬರಗಾಲ ಎದುರಾಗಿರುವುದನ್ನು ನಾವು ನೋಡಬಹುದು. ಎಸ್.ಎಂ. ಕೃಷ್ಣ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ತೀವ್ರ ಬರಗಾಲ ಉಂಟಾಗಿದ್ದು, ಮೋಡ ಬಿತ್ತನೆ ಮೂಲಕ ಮಳೆಯನ್ನು ಬರುವ ತಂತ್ರವನ್ನೂ ಹುಡುಕಿಕೊಳ್ಳಲಾಗಿತ್ತು. ಜೊತೆಗೆ, 2013ರಿಂದ 2018ರ ಅವಧಿಯಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿಯೂ ಒಂದೆರಡು ವರ್ಷ ಬರಗಾಲ ಕಾಣಿಸಿಕೊಂಡಿತ್ತು. ಆದರೆ, ಈ ಬಾರಿಯೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿಮಾಧಿಕಾರ ಸ್ವೀಕರಿಸಿದ್ದಾರೆ. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ದಿನವೇ ರಾಜ್ಯದ ವಿವಿಧೆಡೆ ಭರ್ಜರಿ ಮಳೆಯಾಗಿದ್ದು, ಈ ಬಾರಿ ಬರಗಾಲ ಬರುವುದಿಲ್ಲ ಎಂಬ ಮುನ್ಸೂಚನೆ ನೀಡಿದಂತಾಗಿದೆ ಎಂದು ಜನರು ಲೆಕ್ಕಾಚಾರ ಹಾಕುತ್ತಿದ್ದಾರೆ.
ಮೊದಲ ಸಂಪುಟ ಸಭೆಯಲ್ಲೇ ಕಾಂಗ್ರೆಸ್ 5 ಗ್ಯಾರಂಟಿಗಳಿಗೆ ತಾತ್ವಿಕ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
ಮೈಲಾರ ಕಾರ್ಣಿಕದಲ್ಲೂ ಉತ್ತಮ ಮಳೆ ಸೂಚನೆ: ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಮೈಲಾರ ಲಿಂಗೇಶ್ವರ ದೇವರ ಕಾರ್ಣಿಕ ರಾಜ್ಯದ ಭವಿಷ್ಯವಾಣಿ ಎಂದು ಹೇಳಲಾಗುತ್ತದೆ. ಈ ವರ್ಷ ಫೆಬ್ರವರಿಯಲ್ಲಿ ನಡೆದ ಜಾತ್ರೆಯಲ್ಲಿ ‘ಅಂಬಲಿ ಹಳಸಿತು- ಕಂಬಳಿ ಬೀಸಿತಲೇ ಪರಾಕ್’ ಎಂಬುದು ಮೈಲಾರ ಲಿಂಗೇಶ್ವರ ಕಾರ್ಣಿಕವಾಗಿದೆ. ಇದನ್ನು ವಿಶ್ಲೇಷಣೆ ಮಾಡಿದಾಗ ರಾಜ್ಯದಲ್ಲಿ ಮಳೆ, ಬೆಳೆ ಜಾಸ್ತಿ ಆಗಲಿದ್ದು,ಸಮೃದ್ದಿಯಾಗಲಿದೆ. ರೈತರಿಗೆ ಒಳ್ಳೆಯದಾಗುತ್ತದೆ. ಇದರ ಜೊತೆಗೆ ಮಳೆ ಜಾಸ್ತಿಯಾಗಿ ಬೆಳೆ ಹಾನಿಯಾಗಲಿದೆ. ರೈತರಿಗೆ ಬೆಳೆದ ಬೆಳೆ ಸಿಗುತ್ತದೆ. ಜೊತೆಗೆ, ರಾಜಕೀಯ ವಿಶ್ಲೇಷಣೆಯಲ್ಲಿ ಪ್ರಾಮಾಣಿಕವಾಗಿ, ನಿಷ್ಠಯಿಂದ ಇರುವ ವ್ಯಕ್ತಿಯು ರಾಜ್ಯವನ್ನಾಳುತ್ತಾನೆ. ಮೂರು ಪಕ್ಷಗಳಲ್ಲಿ ಕುರಬ ಸಮುದಾಯದ ವ್ಯಕ್ತಿಯೆ ರಾಜ್ಯವನ್ನಾಳುತ್ತಾರೆ ಎಂದು ಸ್ಥಳೀಯ ಅರ್ಚಕರು ಕಾರ್ಣಿಕವನ್ನು ವಿಶ್ಲೇಷಣೆ ಮಾಡಿದ್ದರು. ಅದಂತೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ. ಜೊತೆಗೆ, ಉತ್ತಮ ಮಳೆ ಬೆಳೆ ಆಗುವ ನಿರೀಕ್ಷೆಯೂ ಕಂಡುಬರುತ್ತಿದೆ.
Karnataka CM Oath:ರಾಜ್ಯದ ಮುಖ್ಯಮಂತ್ರಿ ಗದ್ದುಗೆ ಏರಿದ ಸಿದ್ದರಾಮಯ್ಯ
ಚಿಕ್ಕ ಮೈಲಾರದಲ್ಲಿ ‘ಮಳೆ ಸಂಪಾದೀತಲೇ ಪರಾಕ್’ ಕಾರ್ಣಿಕ: ಫೆಬ್ರವರಿಯಲ್ಲಿ ನಡೆದ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹಾವನೂರ (ಚಿಕ್ಕ ಮೈಲಾರ) ಸಮೀಪದ ಜೋಗ ಮರಡಿಯಲ್ಲಿ ಮೈಲಾರ ಲಿಂಗೇಶ್ವರನ ಕಾರ್ಣಿಕದ ನುಡಿಯನ್ನು ಗೊರವಪ್ಪ ಆನಂದ ಬಿಲ್ಲರ ಅವರು ‘ಮಳೆ ಸಂಪಾದೀತಲೇ ಪರಾಕ್’ ಎಂದು ದೈವನುಡಿ ಹೇಳಿದ್ದರು. ಡೆಂಕನ ಮರಡಿಯಲ್ಲಿ ನುಡಿಯುವ ಕಾರ್ಣಿಕ ದಿನದ ಹಿಂದಿನ ದಿನ (ಭರತ ಹುಣ್ಣಿಮೆಯ ಮರುದಿನ) ಇಲ್ಲಿ ಕಾರ್ಣಿಕ ಹೇಳುತ್ತಾ ಬರಲಾಗಿದೆ. ಈ ಬಾರಿಯ ಭವಿಷ್ಯವು ಅನೇಕ ರೀತಿಯಲ್ಲಿ ಅರ್ಥೈಸಲಾಗಿದ್ದು ಪ್ರಸ್ತಕ ವರ್ಷ ರೈತರಿಗೆ ಈ ಕಾರ್ಣಿಕ ಹೆಚ್ಚು ಮಹತ್ವ ನೀಡಿದ್ದು, ಈ ವರ್ಷದ ಮುಂಗಾರು ಹಾಗೂ ಹಿಂಗಾರು ಮಳೆ ಉತ್ತಮವಾಗಿ ಆಗುವುದು ಎಂದು ಭವಿಷ್ಯವನ್ನು ಅರ್ಥೈಸಲಾಗಿತ್ತು.