ರಾಷ್ಟ್ರ ರಾಜಕಾರಣ ವಿಚಾರ : ಸಿದ್ದರಾಮಯ್ಯರಿಂದ ಮಹತ್ವದ ಮಾಹಿತಿ

Kannadaprabha News   | Asianet News
Published : Oct 12, 2021, 07:29 AM IST
ರಾಷ್ಟ್ರ ರಾಜಕಾರಣ ವಿಚಾರ : ಸಿದ್ದರಾಮಯ್ಯರಿಂದ ಮಹತ್ವದ ಮಾಹಿತಿ

ಸಾರಾಂಶ

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ನನಗೆ ಆಹ್ವಾನ ವಿಚಾರ ಈ ಬಗ್ಗೆ ಸ್ಪಷ್ಟನೆ ನೀಡಿದ ಬಳಿಕವೂ ಕೆಲ ಪತ್ರಿಕೆಗಳು ಕಲ್ಪಿತ ವರದಿ ಪ್ರಸಾರ  

ಬೆಂಗಳೂರು (ಅ.12):  ಎಐಸಿಸಿ (AICC) ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರು ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ನನಗೆ ಆಹ್ವಾನವನ್ನೇ ನೀಡಿಲ್ಲ. ಈ ಬಗ್ಗೆ ಸ್ಪಷ್ಟನೆ ನೀಡಿದ ಬಳಿಕವೂ ಕೆಲ ಪತ್ರಿಕೆಗಳು ಕಲ್ಪಿತ ವರದಿ ಪ್ರಕಟಿಸಿದ್ದು, ಯಾರೋ ಉದ್ದೇಶಪೂರ್ವಕವಾಗಿ ಬರೆಸುತ್ತಿರಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ (Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋನಿಯಾ ಗಾಂಧಿ ಅವರನ್ನು ಭೇಟಿಯಾದಾಗ ರಾಷ್ಟ್ರ ರಾಜಕಾರಣಕ್ಕೆ (National politics) ಹೋಗುವ ಬಗ್ಗೆ ಚರ್ಚೆಯೇ ನಡೆದಿಲ್ಲ. ಆದರೂ ಕೆಲ ಪತ್ರಿಕೆಗಳಲ್ಲಿ ಕಲ್ಪಿತ ವರದಿಗಳು ಪ್ರಕಟವಾಗುತ್ತಿವೆ. ಈ ಬಗ್ಗೆ ಸ್ಪಷ್ಟನೆ ನೀಡಿದ ಬಳಿಕವೂ ಮತ್ತೆ ಮತ್ತೆ ಅಂತಹ ಸುಳ್ಳು ಸುದ್ದಿಗಳೇ ಪ್ರಕಟವಾಗುತ್ತಿವೆ. ಹೀಗಾಗಿ ಯಾರೋ ಉದ್ದೇಶಪೂರ್ವಕವಾಗಿಯೇ ತಪ್ಪು ಮಾಹಿತಿ ನೀಡಿ ಬರೆಸುತ್ತಿರಬೇಕು ಎಂದರು.

ಕೇಂದ್ರದ 'ಕೈ' ಬಲಕ್ಕೆ ಸಿದ್ದು ಬದಲಾಗಿ ಪಟ್ಟದ ಶಿಷ್ಯ, ಏನಾಗಲಿದೆ ಆರ್ಯನ್ ಭವಿಷ್ಯ?

ಸೋನಿಯಾ ಗಾಂಧಿ ಅವರು ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ನನಗೆ ಆಹ್ವಾನವನ್ನೇ ನೀಡಿಲ್ಲ. ಆ ವಿಷಯದ ಬಗ್ಗೆ ಸೋನಿಯಾ ಗಾಂಧಿ ಅವರು ಪ್ರಸ್ತಾಪವನ್ನೇ ಮಾಡಲಿಲ್ಲ. ಆದರೂ ಅವರಿಗೆ ಈ ವಿಷಯದ ಬಗ್ಗೆ ಬೇಜಾರಾಗಿದೆ ಎಂದು ಬರೆಯುತ್ತಿದ್ದಾರೆ. ಇದಕ್ಕೆ ಯಾವ ರೀತಿ ಸ್ಪಷ್ಟನೆ ಕೊಡಬೇಕು? ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಚರ್ಚೆಯಾಗಿದ್ದರೆ ತಾನೇ ಮನಸ್ತಾಪ ಮೂಡೋದು? ಇಷ್ಟುಸ್ಪಷ್ಟವಾಗಿ ಹೇಳಿದ್ದರೂ ಪತ್ರಿಕೆಗಳಲ್ಲಿ ಈ ವಿಚಾರದ ಬಗ್ಗೆ ಕಲ್ಪಿತ ವರದಿಗಳು ಬರುತ್ತಿವೆ ಎಂದರೆ ಏನು ಅರ್ಥ ಎಂದರು.

ಸೋನಿಯಾ ಭೇಟಿ

ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧ ಪಕ್ಷಧ ನಾಯಕ ಸಿದ್ದರಾಮಯ್ಯ(siddaramaiah) ಅವರು ದೆಹಲಿಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿದ್ದರು

 ನವದೆದೆಹಲಿಗೆ (New Delhi)  ಭೇಟಿ ನೀಡಿದ ಸಿದ್ದು, ಜನಪಥ್ ರಸ್ತೆಯಲ್ಲಿರುವ ನಿವಾಸದಲ್ಲಿ ಸೋನಿಯಾ ಗಾಂಧಿಯವರೊಂದಿಗೆ (Sonia Gandhi)  ಮಾತುಕತೆ ನಡೆಸಿದ್ದರು. ಈ ವೇಳೆ ಸಿದ್ದರಾಮಯ್ಯನವರನ್ನು ರಾಷ್ಟ್ರ ರಾಜಕಾರಣಕ್ಕೆ ಆಹ್ವಾನಿಸಿದ್ದಾರೆ ಎನ್ನುವ ಮಾತುಗಳು ಹರಿದಾಡುತ್ತಿವೆ. ಇನ್ನು ಈ ಬಗ್ಗೆ ಸಿದ್ದರಾಮಯ್ಯ ಸಹ ಸ್ಪಷ್ಟನೆ ಕೊಟ್ಟಿದ್ದು, ಅದು ಈ ಕೆಳಗಿನಂತಿದೆ.

ರೈತರ ಹತ್ಯೆ ಕೇಸ್: ಬಿಜೆಪಿ ತನ್ನ ತಾಲಿಬಾನಿ‌ ಮನಸ್ಥಿತಿಯನ್ನು ಬೆತ್ತಲು‌ ಮಾಡಿಕೊಳ್ಳುತ್ತಿದೆ ಎಂದ ಸಿದ್ದು

ಸೋನಿಯಾ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಂಯ್ಯ, ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ನನ್ನ ಬಳಿ ರಾಷ್ಟ್ರ ರಾಜಕೀಯದ ಬಗ್ಗೆ ಚರ್ಚೆ ಮಾಡಿಲ್ಲ. ಅವರ ಬಳಿ ಕೇವಲ ಕರ್ನಾಟಕ ರಾಜಕೀಯದ ಬಗ್ಗೆ ಚರ್ಚೆ ಮಾಡಿದ್ದೇನೆ. ರಾಷ್ಟ್ರ ರಾಜಕಾರಣಕ್ಕೆ ಸೋನಿಯಾಗಾಂಧಿ ನನ್ನ ಕರೆದಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ಈ ಹಿಂದೆ ರಾಹುಲ್‌ಗಾಂಧಿ ಅವರು ಪ್ರಧಾನ ಕಾರ್ಯದರ್ಶಿ ಆಗು ಎಂದಿದ್ದರು, ನಾನೇ ನಿರಾಕರಿಸಿದ್ದೆ. ನಾನು ರಾಜ್ಯ ರಾಜಕಾರಣದಲ್ಲಿ ಕಂಪರ್ಟ್ ಆಗಿದ್ದೇನೆ. ಹಿಂದೆ ಕಾರ್ಯಕಾರಿ ಸಮಿತಿಗೂ ರಾಜೀನಾಮೆ ನೀಡಿದ್ದೆ ಎಂದರು. ಈ ಮೂಲಕ ಸಿದ್ದರಾಮಯ್ಯನವರು ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತಾರೆ ಎನ್ನುವ ಊಹಾಪೋಹಗಳಿಗೆ ಅವರೇ ತೆರೆ ಎಳೆದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಾ ಜಿ ಪರಮೇಶ್ವರ ರಾಜ್ಯದ ಸಿಎಂ ಆಗಬೇಕು, ರಾಜಕೀಯದಲ್ಲಿ ಸಂಚಲನ ಮೂಡಿಸೋ ಹೇಳಿಕೆ ಕೊಟ್ಟ ಕೇಂದ್ರ ಸಚಿವ ವಿ. ಸೋಮಣ್ಣ!
ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!